ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿಯ ಸನ್ನಿಸೈಡ್‌ನಲ್ಲಿ ಜನಿಸಿದ ಇವರು ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲೂ ಸಹ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ್ದಾರೆ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು.ಸಣ್ಣ ವಯಸ್ಸಿನಲ್ಲಿಯೇ ಸೇನೆಗೆ ಸೇರಿ ಭಾರತೀಯ ಸೇನಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಸೇನಾ ಕ್ಷೇತ್ರದಲ್ಲಿನ ಕೆಲಸಗಳು ಇಂದಿಗೂ ಸಹ ಮಾದರಿ ಹಾಗೂ ಮಾರ್ಗದರ್ಶಕವಾಗಿದೆ ಎಂದು ಪೊನ್ನಣ್ಣ ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಮಾತನಾಡಿ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಭಾರತೀಯ ಸೇನೆಯಲ್ಲಿ ನೀಡಿರುವ ಕೊಡುಗೆ ಅಪಾರವಾಗಿದೆ. ಆ ನಿಟ್ಟಿನಲ್ಲಿ ಇದು ಪೊಲೀಸ್ ಇಲಾಖೆಗಳಲ್ಲಿಯೂ ಸಹ ಅಳವಡಿಸಿಕೊಳ್ಳಬೇಕಿದೆ. ಇಂತಹ ಮಹಾನ್ ಸೇನಾನಿಯ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವುದು ಶ್ಲಾಘನೀಯ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ರಾಷ್ಟ್ರಕಂಡ ಮೇರುಶಿಖರ ಜನರಲ್ ತಿಮ್ಮಯ್ಯ ಅವರಾಗಿದ್ದು, ಇಂಡೋ-ಚೈನಾ ಯುದ್ಧ ಸಂದರ್ಭದಲ್ಲಿ ದೇಶದ ರಕ್ಷಣೆ ಮತ್ತು ಸುರಕ್ಷತೆಗಾಗಿ ಚತುರತೆಯಿಂದ ಸೇನೆಯನ್ನು ಕಟ್ಟಿದ್ದಾರೆ ಎಂದು ಹೇಳಿದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಸೀಲ್ದಾರ್ ಶ್ರೀಧರ, ನಗರಸಭೆ ಸದಸ್ಯರಾದ ಅನಿತಾ ಪೂವಯ್ಯ, ಸವಿತಾ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಪಪ್ಪು ತಿಮ್ಮಯ್ಯ, ಸಂಜು ಕಾವೇರಪ್ಪ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಪೌಂಡೇಶನ್ ಗೌರವ ಸಂಚಾಲಕ ತಮ್ಮು ಪೂವಯ್ಯ, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾದ ರತ್ನಾಕರ ರೈ, ನಿರ್ದೇಶಕರಾದ ಅನಿಲ್ ಎಚ್.ಟಿ., ವಿನೋದ್ ಅಂಬೆಕಲ್ಲು, ರೆಡ್‌ಕ್ರಾಸ್ ನಿರ್ದೇಶಕರಾದ ಪಿ.ಆರ್.ರಾಜೇಶ್, ರೋಟರಿ ವುಡ್ಸ್ ಕಾರ್ಯದರ್ಶಿ ಪ್ರಮಿಳಾ ಶೆಟ್ಟಿ, ನಿರ್ದೇಶಕರಾದ ಸ್ಮಿತಾ ಚಂಗಪ್ಪ, ಧನಂಜಯ ಶಾಸ್ತ್ರಿ, ಕೊಡವ ಮಕ್ಕಡ ಕೂಟದ ಸಂಚಾಲಕರಾದ ಬೊಳ್ಳಜಿರ ಅಯ್ಯಪ್ಪ, ಚೆಯ್ಯಂಡ ಸತ್ಯ, ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕ ಪಿ.ಆರ್.ರಾಜು, ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಕುಮಾರ್ ಇತರರು ಇದ್ದರು.ವಿದ್ಯಾರ್ಥಿನಿಯರಾದ ಎ.ಎಸ್.ರಿಷಿತಾ ಮುತ್ತಮ್ಮ, ಯಶ್ಮಿತಾ ಎ.ಎಚ್., ಎ.ಆರ್.ದೇಚಮ್ಮ, ಚಿನ್ಮಯಿ ಎ.ಆರ್. ಅವರು ದೇಶಭಕ್ತಿಗೀತೆ ಹಾಡಿ ಗಮನ ಸೆಳೆದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ರಮ್ಯ ಮಾಚಯ್ಯ ಪ್ರಾರ್ಥಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.