ವಿದೇಶಿ ಪ್ರಜೆಯೊಬ್ಬರು ಸ್ಥಳೀಯ ಮಕ್ಕಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಪುಸ್ತಕ ವಿತರಿಸಿ ಹಂಪಿಯ ಇತಿಹಾಸದ ಬಗ್ಗೆ ತಿಳಿವಳಿಕೆ ಮೂಡಿಸಲು ಮುಂದಾಗಿರುವುದು ಸ್ಥಳೀಯರ ಮೆಚ್ಚುಗೆ
ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಸಮೀಪದ ಕಡ್ಡಿರಾಂಪುರ ತಾಂಡಾದಲ್ಲಿ ಸಿದ್ಧಿವಿನಾಯಕ ಗಣಪತಿ ಸಂಘದಿಂದ ಗಣೇಶ ಪ್ರತಿಷ್ಠಾಪಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜರ್ಮನ್ ಪ್ರಜೆ ಹನ್ರಿ ಭಾಗವಹಿಸಿ ಗಮನ ಸೆಳೆದರು.
ಕಳೆದ ಹಲವು ವರ್ಷಗಳ ಹಿಂದೆ ಪ್ರವಾಸಕ್ಕೆ ಆಗಮಿಸಿರುವ ಹನ್ರಿ ಇಲ್ಲಿನ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಗಣೇಶ ಹಬ್ಬದಲ್ಲಿ ಸ್ಥಳೀಯರ ಸಂಗೀತ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಂತ ಹಣದಲ್ಲಿ ಹಂಪಿಯ ಇತಿಹಾಸ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಪುಸ್ತಕಗಳನ್ನು ಖರೀದಿಸಿ ಮಕ್ಕಳಿಗೆ ವಿತರಿಸಿದರು.
ವಿದೇಶಿ ಪ್ರಜೆಯೊಬ್ಬರು ಸ್ಥಳೀಯ ಮಕ್ಕಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಪುಸ್ತಕ ವಿತರಿಸಿ ಹಂಪಿಯ ಇತಿಹಾಸದ ಬಗ್ಗೆ ತಿಳಿವಳಿಕೆ ಮೂಡಿಸಲು ಮುಂದಾಗಿರುವುದು ಸ್ಥಳೀಯರ ಮೆಚ್ಚುಗೆ ವ್ಯಕ್ತಪಡಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.