ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿ ನಗರದ ಚಿತ್ರಣ ಕಣ್ತುಂಬಿಕೊಳ್ಳಿ: ಸಿಆರ್‌ಎಸ್

KannadaprabhaNewsNetwork |  
Published : Feb 21, 2026, 01:30 AM IST
೨೦ಕೆಎಂಎನ್‌ಡಿ-೧ಮಂಡ್ಯ ತಾಲೂಕು ಚಿಂದಗಿರಿದೊಡ್ಡಿ ಗ್ರಾಮದಲ್ಲಿ ಬೂದನೂರು ಉತ್ಸವ ಪ್ರಯುಕ್ತ ಆಯೋಜಿಸಿದ್ದ ಹೆಲಿಕಾಪ್ಟರ್ ಜಾಲಿ ರೈಡ್‌ನ್ನು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಾರ್ಚ್ ೭ರಂದು ಜಿಲ್ಲಾಡಳಿತ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು ಮತ್ತು ಅಸ್ಪೃಶ್ಯತಾ ನಿವಾರಣಾ ಕಾಯ್ದೆ ಯ ಅರಿವು ಕಾರ್ಯಾಗಾರವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಮಾಜದ ಎಲ್ಲಾ ವರ್ಗದವರು ಮತ್ತು ಮುಖಂಡರು ಕಾರ್ಯಾಗಾರದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು .

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯ ಯುವಜನರು ಹೆಲಿಕಾಪ್ಟರ್‌ನಲ್ಲಿ ಕುಳಿತು ಸುತ್ತಾಟ ನಡೆಸುವುದರೊಂದಿಗೆ ನಗರದ ಚಿತ್ರಣ ಕಣ್ತುಂಬಿಕೊಳ್ಳುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಬೂದನೂರು ಉತ್ಸವದ ಪ್ರಯುಕ್ತ ತಾಲೂಕಿನ ಚಿಂದಗಿರಿದೊಡ್ಡಿಯಲ್ಲಿ ಆಯೋಜಿಸಿರುವ ಹೆಲಿಕಾಪ್ಟರ್ ಜಾಯ್ ರೈಡ್‌ಗೆ ಅವರು ಚಾಲನೆ ನೀಡಿ ಮಾತನಾಡಿದರು. ಮೂರು ದಿನಗಳ ಕಾಲ ಹೆಲಿಕಾಪ್ಟರ್‌ನಲ್ಲಿ ಸುತ್ತಾಟ ನಡೆಸುವ ಅವಕಾಶವಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಹೆಲಿಕಾಪ್ಟರ್‌ನಲ್ಲಿ ಕುಳಿತು ನಗರ ಸಂಚಾರ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲರೂ ಇದರ ಅನುಭವ ಪಡೆದು ಆನಂದಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಜಿಲ್ಲೆಯ ಸಾರ್ವಜನಿಕರಿಗೆ ಹೊಸತನವನ್ನು ಪರಿಚಯಿಸುವ ನಿಟ್ಟಿನಲ್ಲಿ ಹೆಲಿಟೂರಿಸಂಗೆ ಆದ್ಯತೆ ನೀಡಿದೆ. ಇಲ್ಲಿ ಹಣ ಮುಖ್ಯವಲ್ಲ. ಸಂತೋಷ ಮುಖ್ಯ. ಎಲ್ಲಾ ಸಮಯದಲ್ಲೂ ಈ ಅವಕಾಶಗಳು ದೊರಕುವುದಿಲ್ಲ. ಸಿಕ್ಕಾಗ ಅದನ್ನು ಅನುಭವಿಸಬೇಕು ಎಂದು ನುಡಿದರು.

ಬೂದನೂರು ಉತ್ಸವವನ್ನು ಮೊದಲನೇ ವರ್ಷ ತುಂಬಾ ಯಶಸ್ವಿಯಾಗಿ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಬಹಳ ವಿಭಿನ್ನವಾಗಿ ಮಾಡಲಾಗುತ್ತಿದೆ. ಉತ್ಸವದ ಪ್ರಯುಕ್ತ ನಡೆದ ವಿವಿಧ ಕ್ರೀಡೆ ಮತ್ತು ರಂಗೋಲಿ ಸ್ಪರ್ಧೆ ಕಾರ್ಯಕ್ರಮಗಳು ಯಶಸ್ವಿಯಾಗಿ ಪೂರ್ಣಗೊಂಡವೆ ಎಂದರು.

ಮಾರ್ಚ್ ೭ರಂದು ಜಿಲ್ಲಾಡಳಿತ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು ಮತ್ತು ಅಸ್ಪೃಶ್ಯತಾ ನಿವಾರಣಾ ಕಾಯ್ದೆ ಯ ಅರಿವು ಕಾರ್ಯಾಗಾರವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಮಾಜದ ಎಲ್ಲಾ ವರ್ಗದವರು ಮತ್ತು ಮುಖಂಡರು ಕಾರ್ಯಾಗಾರದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಶಾಸಕರಾದ ಪಿ.ರವಿಕುಮಾರ್, ಕೆ.ಎಂ.ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ಅಧೀಕ್ಷಕಕಿ ಡಾ.ವಿ.ಜೆ.ಶೋಭಾರಾಣಿ, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ತಹಸೀಲ್ದಾರ್ ವಿಶ್ವನಾಥ್ ಇನ್ನಿತರರಿದ್ದರು.

೨೦ಕೆಎಂಎನ್‌ಡಿ-೧

ಮಂಡ್ಯ ತಾಲೂಕು ಚಿಂದಗಿರಿದೊಡ್ಡಿ ಗ್ರಾಮದಲ್ಲಿ ಬೂದನೂರು ಉತ್ಸವ ಪ್ರಯುಕ್ತ ಆಯೋಜಿಸಿದ್ದ ಹೆಲಿಕಾಪ್ಟರ್ ಜಾಲಿ ರೈಡ್‌ನ್ನು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌