ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಎಪಿಎಂಸಿ ಎಳನೀರು ಮಾರುಕಟ್ಟೆ ಆವರಣದಲ್ಲಿ ನೂತನವಾಗಿ ಆರಂಭಿಸಿರುವ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯ ಸರ್ಕಾರ ರೈತರ ಅನುಕೂಲಕ್ಕಾಗಿ ಹಲವಾರು ಸೌಲಭ್ಯ ಕಲ್ಪಿಸುವ ಮೂಲಕ ಆರ್ಥಿಕವಾಗಿ ಸದೃಢಗೊಳಿಸುತ್ತಿದೆ ಎಂದರು.
ಸಬ್ಸಿಡಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಿಸಿ ಆಧುನಿಕ ಬೇಸಾಯಕ್ಕೆ ಹೆಚ್ಚಿನ ಒತ್ತು ನೀಡಿದೆ. ರೈತರು ಕೃಷಿ ಚಟುವಟಿಕೆಗಳಿಂದ ವಿಮುಖರಾಗಬಾರದೆಂಬ ಉದ್ದೇಶದಿಂದ ಮನೆ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.ಕೃಷಿ ಆಧಾರಿತ ಜಿಲ್ಲೆಯಲ್ಲಿ ರೈತರು ಬೇಸಾಯವನ್ನೇ ನಂಬಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ತಾಲೂಕಿನಾದ್ಯಂತ 350 ಮಂದಿ ರೈತರು ಭತ್ತ ಖರೀದಿ ಕೇಂದ್ರಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. 10,065 ಕ್ವಿಂಟಾಲ್ ದಾಸ್ತಾನಿನ ಗುರಿ ಹೊಂದಲಾಗಿದೆ. ಜತೆಗೆ ರಾಗಿ ಖರೀದಿಗೆ 186 ಮಂದಿ ರೈತರು ನೋಂದಣಿ ಮಾಡಿಕೊಂಡು 5057 ಕ್ವಿಂಟಾಲ್ ಖರೀದಿ ಮಾಡುವ ಗುರಿ ಹೊಂದಿರುವುದಾಗಿ ಹೇಳಿದರು.ರೈತರಿಂದ ಖರೀದಿ ಮಾಡಿದ ವಾರದೊಳಗಾಗಿ ನೇರವಾಗಿ ಅವರ ಖಾತೆಗೆ ಹಣ ಜಮಾವಣೆಯಾಗಲಿದೆ. ಕ್ವಿಂಟಾಲ್ ರಾಗಿಗೆ 4886 ರು. ನಿಗದಿ ಮಾಡಲಾಗಿದೆ ಎಂದರು.
ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ಕುದರಗುಂಡಿ ನಾಗೇಶ್, ಮಾಜಿ ನಿರ್ದೇಶಕ ಶಿವಣ್ಣ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಮನೋಹರ್, ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕಿ ರೇವತಿ, ಖರೀದಿ ಅಧಿಕಾರಿ ಎನ್.ಎಸ್.ನಟರಾಜು, ಮುಖಂಡರಾದ ಗೊರವನಹಳ್ಳಿ ಯೋಗೇಶ್, ಸುರೇಶ್, ಕೀಳಘಟ್ಟ ನಂಜುಂಡಯ್ಯ ಇತರರಿದ್ದರು.