ಹಾವೇರಿ: ಪ್ರಸಕ್ತ ಮುಂಗಾರು ಹಂಗಾಮಿನ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಸೋಮವಾರ ನಗರದ ಸಹಾಯಕ ಕೃಷಿ ನಿರ್ದೇಶಕ ಕಚೇರಿ ಆವರಣದಲ್ಲಿ ರೈತರಿಗೆ ವಿತರಿಸಲಾಯಿತು.ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಬಿ.ಎಚ್. ಮಾತನಾಡಿ, ತಾಲೂಕಿನಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಇಲಾಖೆಯಿಂದ ನೀಡಲಾಗುವ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಪಡೆದುಕೊಂಡು ಬಿತ್ತನೆ ಮಾಡಬೇಕು. ಮೆಕ್ಕೆಜೋಳ, ಶೇಂಗಾ, ಸೋಯಾಬಿನ್, ತೊಗರಿ ಬೀಜಗಳನ್ನು ವಿತರಣೆ ಮಾಡಲಾಗುತ್ತಿದ್ದು, ರೈತರು ಖರೀದಿಸಿ ಕಡ್ಡಾಯವಾಗಿ ರಶೀದಿಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.ಈ ವೇಳೆ ರೈತ ಸಂಘದ ಅಧ್ಯಕ್ಷ ರಾಜು ತರ್ಲಘಟ್ಟ, ಮುಖಂಡರಾದ ಈರಣ್ಣ ಚಕ್ರಸಾಲಿ, ಪುಟ್ಟಪ್ಪ ಬೆಂಚಳ್ಳಿ, ಕೋಟೆಪ್ಪ ಅಳಲಗೇರಿ, ಮಂಜಪ್ಪ ಸೋಟಾರಿ, ಮಹೇಶ ಹೊಗೆಸೊಪ್ಪಿನವರ, ಗುಡ್ಡನಗೌಡ್ರ ಕರೆಗೌಡ್ರ, ಪುಟ್ಟಪ್ಪ ಓಂಕಾಣ್ಣನವರ, ಬಸಣ್ಣ ನೆಗಳೂರ, ಎಂ.ಎಂ. ಮದರಂಗಿ, ಶಿವನಗೌಡ ಗೌಡರ, ಹನುಮಂತಪ್ಪ ತಳವಾರ, ಪ್ರಕಾಶ್ ಸಂಕಪ್ಪನವರ, ಫಕ್ಕೀರಪ್ಪ ಕಬ್ಬೂರ, ರಮೇಶ್ ಮಣ್ಣಮ್ಮನವರ, ಹರಿವೆಯಪ್ಪ ಬೆನಕನಹಳ್ಳಿ ಸೇರಿದಂತೆ ಇತರರು ಇದ್ದರು.ವರದಕ್ಷಿಣೆ ಕಿರುಕುಳ: ದೂರು ದಾಖಲು
ಹಾವೇರಿ: ಮದುವೆ ಮನೆಗೆ ಹೋಗಿ ಬರುವುದಾಗಿ ಹೇಳಿದ್ದ ಬಾಲಕಿಯೊಬ್ಬಳು ಕಾಣೆಯಾಗಿರುವ ಘಟನೆ ತಾಲೂಕಿನ ಗುತ್ತಲ ತಾಂಡಾದಲ್ಲಿ ನಡೆದಿದೆ.
ಗುತ್ತಲ ತಾಂಡಾ ನಿವಾಸಿ ಭೀಮಪ್ಪ ಲಮಾಣಿ ನೀಡಿದ ದೂರಿನಲ್ಲಿ ತನ್ನ ಮಗಳು ಮದುವೆಗೆ ಹೋಗುವುದಾಗಿ ಹೇಳಿ ಹೋಗಿದ್ದು, ವಾಪಸ್ ಮನೆಗೆ ಬಾರದೇ ಕಾಣೆಯಾಗಿದ್ದಾಳೆ. ಮಗಳ ಪತ್ತೆಗಾಗಿ ಎಲ್ಲಾ ಕಡೆ ಹುಡುಕಾಡಿದ್ದು, ಇಲ್ಲಿಯವರೆಗೂ ಸಿಕ್ಕಿಲ್ಲ. ಯಾರೋ ಯಾವುದೋ ಉದ್ದೇಶದಿಂದ ಅಪಹರಿಸಿಕೊಂಡು ಹೋಗಿರಬಹುದು ಎಂಬ ಅನುಮಾನವಿದ್ದು, ಪತ್ತೆ ಮಾಡಿಕೊಡುವಂತೆ ಪೊಲೀಸರ ಎಫ್‌ಐಆರ್‌ನಲ್ಲಿ ಮನವಿ ಮಾಡಿದ್ದಾರೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.