ಕನ್ನಡಪ್ರಭ ವಾರ್ತೆ ಹಲಗೂರು
ಹೋಬಳಿಯ ಲಯನ್ಸ್ ಕ್ಲಬ್ ಆವರಣದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಮತ್ತು ಮೈಸೂರು ರೇಸ್ ಕ್ಲಬ್ ಚಾರಿಟೇಬಲ್ ಟ್ರಸ್ಟ್ ಹಾಗೂ ಕಣ್ಣಿನ ಆಸ್ಪತ್ರೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರದಲ್ಲಿ ಮಾತನಾಡಿದದರು.
ಆಸ್ಪತ್ರೆಯಲ್ಲಿ ಇದುವರೆಗೂ ಉತ್ತಮ ಸೇವೆ ಮಾಡುತ್ತಾ ಬಂದಿದ್ದು, ಶಿಬಿರಗಳನ್ನು ನಡೆಸಿ ಅವಶ್ಯಕತೆ ಇರುವವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಿ ಕನ್ನಡಕ ಹಾಗೂ ಒಂದು ವಾರಕ್ಕೆ ಅವಶ್ಯಕತೆ ಇರುವ ಔಷಧಿ ನೀಡುತ್ತೇವೆ. ಇದರ ಸದ್ಬಳಕೆ ಮಾಡಿಕೊಂಡು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿ ಎಂದರು.ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಇರುವವರು ಸಹ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅವಶ್ಯಕ. ನಮಗೆ ವಯಸ್ಸಾದಂತೆ ನೇತ್ರಗಳಿಗೂ ವಯಸ್ಸಾಗುತ್ತದೆ. ಅದರಲ್ಲಿ ಪೊರೆ ಕಾಣಿಸಿಕೊಳ್ಳುತ್ತದೆ. ಅದನ್ನು ನಿರ್ಲಕ್ಷಿಸಿದೆ ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪರಿಸರ ಉಳಿಸಲು ಆಸ್ಪತ್ರೆ ಹಾಗೂ ಶಾಲಾ ಆವರಣಗಳಲ್ಲಿ ಗಿಡಗಳನ್ನು ನೆಟ್ಟು ಮರವನ್ನು ಬೆಳೆಸಬೇಕು. ಸಂಸ್ಥೆ ಎಲ್ಲಾ ಸದಸ್ಯರ ಸಹಕಾರದೊಡನೆ ಪರಿಸರ ಉಳಿಸುವ ಕೆಲಸ ಮಾಡುತ್ತಿರುವುದಾಗಿ ತಿಳಿಸಿದರು.
ಶಿಬಿರದಲ್ಲಿ 97 ಮಂದಿಯ ತಪಾಸಣೆ ನಡೆಸಿ, 20 ಜನರಿಗೆ ಶಸ್ತ್ರಚಿಕಿತ್ಸೆ ಅವಶ್ಯಕತೆ ಇರುವುದರಿಂದ ಮೈಸೂರಿನ ಎಂ.ಆರ್.ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗಿ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದರು.ಈ ವೇಳೆ ವೈದಾಧಿಕಾರಿಗಳಾದ ಸೋಮನಾಯಕ್, ಮಹಾದೇವಸ್ವಾಮಿ, ಸಂಸ್ಥೆ ಕಾರ್ಯದರ್ಶಿ ಡಿ.ಎಲ್.ಮಾದೇಗೌಡ, ಖಜಾಂಜಿ ಶಿವರಾಜು, ಸದಸ್ಯರಾದ ಡಾ.ನಾಗೇಶ್, ಡಾ.ಶಂಷುದ್ದೀನ್, ಎಚ್.ಆರ್.ಪದ್ಮನಾಭ, ನಿವೃತ್ತ ಮುಖ್ಯ ಶಿಕ್ಷಕ ದೇವರಾಜು, ಮನೋಹರ, ಎಚ್. ಎಸ್. ಶ್ರೀನಿವಾಸ ಚಾರಿ, ಗುಣೇಶ, ಮತ್ತು ಇತರರು ಇದ್ದರು.