ಶಿಕ್ಷಣ ಪಡೆದು ಆರ್ಥಿಕವಾಗಿ ಸಬಲರಾಗಿ

KannadaprabhaNewsNetwork |  
Published : Dec 22, 2023, 01:30 AM IST
 ಪೊಟೋ ಪೈಲ್ ನೇಮ್ ೨೧ಎಸ್‌ಜಿವಿ೪  ಪರಿಶಿಷ್ಟ  ಜಾತಿ, ಪರಿಶಿ ಷ್ಟ  ಪಂಗಡಗಳ ದೌರ್ಜನ್ಯ ಪ್ರತಿಬಂಧ ೧೯೮೯ರ ಅಡಿ ಯುವ ಜನತೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುತ್ತಿರುವುದು. | Kannada Prabha

ಸಾರಾಂಶ

ಸ್ವಾತಂತ್ರ‍್ಯ ಪೂರ್ವದಿಂದಲೂ ದಲಿತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿವೆ. ಅವುಗಳನ್ನು ತಡೆಯುವುದಕ್ಕಾಗಿಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯಿದೆಯನ್ನು ಸರ್ಕಾರ ಜಾರಿಗೆ ತಂದು, ದೌರ್ಜನ್ಯ ಮಾಡಿದವರಿಗೆ ಶಿಕ್ಷೆ ನೀಡಿ, ದೌರ್ಜನ್ಯಕ್ಕೊಳಗಾದ ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವುದಕ್ಕೆ ಮುಂದಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ವೆಂಕನಗೌಡ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಶಿಗ್ಗಾಂವಿ

ಸ್ವಾತಂತ್ರ‍್ಯ ಪೂರ್ವದಿಂದಲೂ ದಲಿತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿವೆ. ಅವುಗಳನ್ನು ತಡೆಯುವುದಕ್ಕಾಗಿಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯಿದೆಯನ್ನು ಸರ್ಕಾರ ಜಾರಿಗೆ ತಂದು, ದೌರ್ಜನ್ಯ ಮಾಡಿದವರಿಗೆ ಶಿಕ್ಷೆ ನೀಡಿ, ದೌರ್ಜನ್ಯಕ್ಕೊಳಗಾದ ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವುದಕ್ಕೆ ಮುಂದಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ವೆಂಕನಗೌಡ ಪಾಟೀಲ ಹೇಳಿದರು.

ತಾಲೂಕಿನ ಗೊಟಗೋಡಿಯ ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಜಿಲ್ಲಾ ಪಂಚಾಯಿತಿ ಹಾವೇರಿ, ಸಮಾಜ ಕಲ್ಯಾಣ ಇಲಾಖೆ ಶಿಗ್ಗಾಂವಿ ಇವುಗಳ ಸಹಯೋಗದಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ೧೯೮೯ ರ ಅಡಿ ಯುವಜನರಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಅನೇಕ ರಾಜ್ಯಗಳಲ್ಲಿ ದಲಿತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಭಾರತೀಯರು ಏಕಸಮಾನ ಮನಸ್ಸಿನಿಂದ ಪ್ರತಿಭಟಿಸಿದಾಗ ಸಮಾಜದಲ್ಲಿ ಸಮಾನತೆ ಬರಲು ಸಾಧ್ಯ ಎಂದರು.

ವಿವಿಯ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್‌ ಮಾತನಾಡಿ, ಇಂದಿನ ಜಾಗತೀಕರಣ ಮತ್ತು ಖಾಸಗೀಕರಣ ಸಂದರ್ಭದಲ್ಲೂ ಜಾತೀಯತೆ ಆಚರಣೆಯು ಜೀವಂತವಾಗಿದೆ. ಇವುಗಳು ಹೋಗಬೇಕೆಂದರೆ ತಳ ಸಮುದಾಯದ ಮಕ್ಕಳು, ಯುವಕರು ಉತ್ತಮವಾದ ಶಿಕ್ಷಣ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದರು.

ನ್ಯಾಯವಾದಿ ಹನುಮಂತಪ್ಪ ಬಂಡಿವಡ್ಡರ ಮಾತನಾಡಿ, ಜಾತೀಯತೆಯ ಆಚರಣೆಗಳು ವಿದ್ಯಾವಂತರಲ್ಲಿಯು ಸಹ ಉಳಿದಿರುವುದು ಬೇಸರದ ಸಂಗತಿಯಾಗಿದೆ. ಆ ನಿಟ್ಟಿನಲ್ಲಿ ಯುವಜನತೆಗೆ ಜಾಗೃತಿ ಮೂಡಿಸುವಲ್ಲಿ ಇಂತಹ ಕಾರ್ಯಕ್ರಮಗಳ ಅವಶ್ಯಕ ಎಂದರು.

ಕುಲಸಚಿವರಾದ ಪ್ರೊ. ಸಿ.ಟಿ. ಗುರುಪ್ರಸಾದ್, ಎಎಸ್‌ಐ ಸತ್ಯಪ್ಪ ಮಾಳಗೊಂಡ, ಶಿಗ್ಗಾಂವಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಾಲಯ್ಯನಕೋಟೆ ವಿಶ್ವನಾಥ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ಸಂಶೋಧನಾಧಿಕಾರಿ ಡಾ. ಕೆ. ಪ್ರೇಮಕುಮಾರ, ಬೋಧಕ-ಬೋಧಕೇತರ ಸಿಬ್ಬಂದಿ ಗೊಟಗೋಡಿಯ ಎಸ್.ಆರ್. ಬೊಮ್ಮಾಯಿ ಪ್ರೌಢಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಶರೀಫ ಮಾಕಪ್ಪನವರ ಜಾಗೃತಿ ಗೀತೆ ಪ್ರಸ್ತುತ ಪಡಿಸಿದರು. ಡಾ. ಮಲ್ಲಿಕಾರ್ಜುನ ಮಾನ್ಪಡೆ ಸ್ವಾಗತಿಸಿದರು. ಡಾ. ವಿಜಯಲಕ್ಷ್ಮೀ ಗೇಟಿಯವರ ನಿರೂಪಿಸಿ, ಡಾ. ಗಿರಿಗೌಡ ಅರಳಿಹಳ್ಳಿ ವಂದಿಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ