ಮೈಸೂರು ಕಂಬಳ ಆಯೋಜನೆಗೆ ಮುನ್ನ ತಜ್ಞರ ಅಭಿಪ್ರಾಯ ಪಡೆಯಲಿ: ಸುನಿಲ್ ಕುಮಾರ್

KannadaprabhaNewsNetwork |  
Published : Jul 18, 2026, 01:30 AM IST
ಸುನಿಲ್‌ ಕುಮಾರ್‌ | Kannada Prabha

ಸಾರಾಂಶ

ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಕರಾವಳಿಯ ಕಂಬಳ ಆಯೋಜಕರು, ಕೋಣಗಳ ಮಾಲೀಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಕಾರ್ಕಳ: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಕರಾವಳಿಯ ಕಂಬಳ ಆಯೋಜಕರು, ಕೋಣಗಳ ಮಾಲೀಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಂಬಳ ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಕ್ರೀಡೆಯಾಗಿದ್ದು, ಅದರದೇ ಇತಿಹಾಸ, ಪರಂಪರೆ ಮತ್ತು ಸ್ಥಳೀಯ ವೈಶಿಷ್ಟ್ಯ ಹೊಂದಿದೆ. ದಸರಾ ಉತ್ಸವದ ಹೆಸರಿನಲ್ಲಿ ಕಂಬಳವನ್ನು ಮೈಸೂರಿಗೆ ಸ್ಥಳಾಂತರಿಸುವ ಮುನ್ನ ಅದರ ಸಾಂಸ್ಕೃತಿಕ ಹಾಗೂ ಸಾಮಾಜಿಕ ಪರಿಣಾಮಗಳ ಬಗ್ಗೆ ಸರ್ಕಾರ ಸಮಗ್ರವಾಗಿ ಚಿಂತನೆ ನಡೆಸಬೇಕು ಎಂದು ತಿಳಿಸಿದ್ದಾರೆ.ಸ್ಥಳೀಯ ಮಟ್ಟದಲ್ಲೇ ಕಂಬಳವನ್ನು ಮತ್ತಷ್ಟು ವೈಭವಯುತವಾಗಿ ಬೆಳೆಸಿದರೆ ರಾಜ್ಯದ ವಿವಿಧ ಭಾಗಗಳಿಂದ ಜನರು ಕರಾವಳಿಗೆ ಆಗಮಿಸಿ ಕಂಬಳವನ್ನು ವೀಕ್ಷಿಸುವ ಅವಕಾಶ ಹೆಚ್ಚುತ್ತದೆ. ಆದ್ದರಿಂದ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಕುರಿತ ತೀರ್ಮಾನಕ್ಕೆ ಮುನ್ನ ಕರಾವಳಿಯ ಕಂಬಳ ಆಯೋಜಕರು ಹಾಗೂ ಕೋಣಗಳ ಮಾಲೀಕರೊಂದಿಗೆ ಸರ್ಕಾರ ಸಭೆ ನಡೆಸಬೇಕು ಎಂದು ಸ್ಥಳೀಯ ಜನಪ್ರತಿನಿಧಿ ಹಾಗೂ ಕಂಬಳ ಆಯೋಜಕರಾಗಿಯೂ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಳ್ವಾಸ್‌ನ 21 ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್‌ಗಿಂತ ಅಧಿಕ ಅಂಕ
ನೀಟ್ ಮರುಪರೀಕ್ಷೆ ರಿಸಲ್ಟ್‌ ಬಗ್ಗೆ ವಿದ್ಯಾರ್ಥಿಗಳ ಅತೃಪ್ತಿ