ಸುಧೀಂದ್ರ ಕಾಲೇಜಿನಲ್ಲಿ ಅಂತರ ಕಾಲೇಜುಗಳ ಚೆಸ್ ಪಂದ್ಯಾವಳಿ ಉದ್ಘಾಟಿಸಿದ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ
ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಂಲಗ್ನ ಕಾಲೇಜುಗಳ ಅಂತರ ಮಹಾವಿದ್ಯಾಲಯಗಳ ಏಕ ವಲಯ ಮಟ್ಟದ ಪುರುಷ ಹಾಗೂ ಮಹಿಳೆಯರ ಚೆಸ್ ಪಂದ್ಯಾವಳಿ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಿತು.
ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ ರಮೇಶ ಖಾರ್ವಿ, ಶಿಕ್ಷಣದ ಜತೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.ಚದುರಂಗ ಸ್ಪರ್ಧೆಯ ನಿರ್ಣಾಯಕರಾದ ಪ್ರಸನ್ನ ರಾವ್, ಉಪನಿರ್ಣಾಯಕ ಧನರಾಜ್ ಖಾರ್ವಿ ಹಾಗೂ ರಾಷ್ಟ್ರೀಯ ಚೆಸ್ ತರಬೇತುದಾರ ಗುರುರಾಜ್ ಶೆಟ್ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಪ್ರಾಂಶುಪಾಲ ಶ್ರೀನಾಥ್ ಪೈ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ವಿನಾಯಕ ನಾಯ್ಕ ಉಪಸ್ಥಿತರಿದ್ದರು. ಸಹನಾ ಮೊಗೇರ, ಮಮತಾ ಶಾನಭಾಗ್ ನಿರೂಪಿಸಿದರು.