ಮೊಬೈಲ್ ಗೀಳಿನಿಂದ ಮಕ್ಕಳನ್ನುಹೊರ ತನ್ನಿ

KannadaprabhaNewsNetwork | Updated : Aug 13 2024, 12:55 AM IST

ಸಾರಾಂಶ

ವಾಸವಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಸಮಾರಂಭವನ್ನು ಸಿ.ಬಿ ನಾಗರಾಜ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮೊಬೈಲ್ ಗೀಳಿಗೆ ಬಲಿಯಾಗಿರುವ ಮಕ್ಕಳಿಗೆ ಶಿಕ್ಷಣ ಕೊಡಿಸಿ ಸರಿದಾರಿಗೆ ತರುವ ಹೊಣೆಗಾರಿಕೆ ತಾಯಂದಿರ ಮೇಲಿದೆ ಎಂದು ಕೆಡಿಪಿ ಸದಸ್ಯ ಸಿ.ಬಿ.ನಾಗರಾಜ್ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಚಿತ್ರದುರ್ಗ ಸಿರಿಗೆರೆ ವತಿಯಿಂದ ವಾಸವಿ ವಿದ್ಯಾಸಂಸ್ಥೆಯಲ್ಲಿ ಸೋಮವಾರ ನಡೆದ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸ್ವಾವಲಂಭಿಯಾಗಿ ಬದುಕು ಕಟ್ಟಿಕೊಂಡು ಏಳಿಗೆಯಾಗಲಿ ಎನ್ನುವ ಸದುದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರು ಸ್ವ-ಸಹಾಯ ಸಂಘಗಳನ್ನು ಹುಟ್ಟು ಹಾಕಿದ್ದಾರೆ ಎಂದರು.

ಸ್ವ-ಸಹಾಯ ಸಂಘಗಳಿಂದ ಸಾಲ ಪಡೆದವರು ಸಕಾಲಕ್ಕೆ ಸರಿಯಾಗಿ ಸಾಲ ಮರು ಪಾವತಿಸಿ ಜೀವನ ಮಟ್ಟ ಸುಧಾರಿಸಿಕೊಳ್ಳಬೇಕು. ತಾಲೂಕಿನಲ್ಲಿ ₹6 ಸಾವಿರ ಕೋಟಿ ಸಾಲ ನೀಡಲಾಗಿದೆ. ಸಾಲದ ಬಳಕೆ ಸರಿದಿಕ್ಕಿನಲ್ಲಿರಲಿ ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಮಾತನಾಡಿ, ಆರ್ಥಿಕ ತೊಂದರೆಯಿಂದ ಪ್ರತಿಭಾವಂತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆರವರು ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರು ಮಾಡುತ್ತಿದ್ದಾರೆ. ಮಕ್ಕಳು ಅದನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣವಂತರಾಗುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕುವಂತೆ ಕಿವಿಮಾತು ಹೇಳಿದರು.

ಈ ವೇಳೆ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಸತ್ಯನಾರಾಯಣ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಕೆ.ಆರ್.ಮಂಜುನಾಥ್, ಸದಸ್ಯರಾದ ರೂಪ ಜನಾರ್ಧನ್, ರಾಜು ನಾಯಕ್, ನಾಗರಾಜ್ ಸಂಗಮ್, ಮಹಮದ್ ನೂರುಲ್ಲಾ, ಕಿರಣ್ ಶಂಕರ್, ಶಾಂತ ಅಶೋಕ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ತಾಲೂಕು ಯೋಜನಾಧಿಕಾರಿ ಬಿ.ಅಶೋಕ್, ರವಿಚಂದ್ರನ್ ಇದ್ದರು.

Share this article