ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಭವಿಷ್ಯದ ಶಿಕ್ಷಣ ಪಡೆಯುವಾಗ ವಿದ್ಯಾರ್ಥಿಗಳು ಹೆಚ್ಚು ಜವಾಬ್ದಾರಿಯಿಂದ ಇರಬೇಕು, ಎಲ್ಲರೊಡನೆ ಹೊಂದಿಕೊಳ್ಳುವ ಮತ್ತು ಮಾರ್ಗದರ್ಶನ ನೀಡುವ ಹಂತಕ್ಕೆ ಬೆಳೆಯಬೇಕು. ಶಿಕ್ಷಣದ ಜೊತೆ ಜೀವನಾನುಭವ ಪಡೆಯಬೇಕು ಮತ್ತು ಸಾಮಾನ್ಯ ಜ್ಞಾನ ಬೆಳೆಸಿಕೊಂಡು ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯ ಬೆಳೆಸಬೇಕಾಗಿದೆ ಎಂದರು.
ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ. ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಅಧ್ಯಕ್ಷರಾದ ಹೆಗ್ಗಡೆಯವರು ಧಾರ್ಮಿಕ, ಅರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದರವರು. ಅನೇಕ ವರ್ಷಗಳ ಹಿಂದೆ ವೃತ್ತಿ ಶಿಕ್ಷಣ ನೀಡಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕನಸು ಕಂಡು ಎಂಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿದರು. 150ಕ್ಕೂ ಅಧಿಕ ಕಂಪನಿಗಳು ಉದ್ಯೋಗ ನೀಡಲು ಮುಂದೆ ಬರುತ್ತಿದ್ದು ಇದು ಎಸ್‌ಡಿಎಂ ಶಿಕ್ಷಣದ ಗುಣಮಟ್ಟದಿಂದ ಸಾಧ್ಯವಾಗಿದೆ ಎಂದರು.ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ, ಎಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸಂಯೋಜಕ ಡಾ. ರವೀಶ್ ಪಡುಮಲೆ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಸ್ವಾಗತಿಸಿದರು. ಸಂಯೋಜಕ ಡಾ. ರವೀಶ್ ಪಡುಮಲೆ ವಂದಿಸಿದರು. ಉಪನ್ಯಾಸಕರಾದ ವಿದ್ಯಾ ಕೆ. ಮತ್ತು ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.