ಬುದ್ಧ, ಬಸವ, ಅಂಬೇಡ್ಕರ್ ವಿಚಾರೋತ್ಸವ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಬಳ್ಳಾರಿ
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಬುದ್ಧ, ಬಸವ, ಅಂಬೇಡ್ಕರ್ ವಿಚಾರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳಿಂದ ಭಾರತದ ಸಂವಿಧಾನ ರಚಿತವಾಗಿದೆ. ಸಂವಿಧಾನವು ದೇಶದಲ್ಲಿರುವ ಎಲ್ಲ ವರ್ಗದವರಿಗೆ ಅನ್ವಯಿಸುತ್ತದೆ. ವ್ಯಕ್ತಿ ಮತ್ತು ಸಮುದಾಯ ಪ್ರಗತಿ ಹೊಂದಲು ನಮ್ಮಲ್ಲಿರುವ ಕೀಳರಿಮೆ ಮನಸ್ಥಿತಿಯಿಂದ ಹೊರಬರಬೇಕು. ಈ ಮೂರು ಮಹಾನ್ ವ್ಯಕ್ತಿಗಳ ಆಶಯಗಳು ಭಾರತದ ಸಂವಿಧಾನದ ರೂಪದಲ್ಲಿ ಮೂಡಿ ಬಂದಿವೆ ಎಂದು ತಿಳಿಸಿದರು.ಬೌದ್ಧ ಸಾಹಿತಿಗಳಾದ ಆಯುಷ್ಮಾನ್ ಬುದ್ಧಘೋಷ್ ದೇವೇಂದ್ರ ಹೆಗ್ಗಡೆ ಮಾತನಾಡಿ, ಬುದ್ಧ ಕಾಲಾತೀತ ಪುರುಷ. ಎಲ್ಲ ಕಾಲಕ್ಕೂ ಸಾಗುವ ಬುದ್ಧನ ವಿಚಾರಗಳು ಅಂದಿನಿಂದ ಇಲ್ಲಿಯವರಗೆಗೂ ಪ್ರಸ್ತುತವಾಗಿವೆ. ಬುದ್ಧನ ಪಂಚಶೀಲವು ಎಲ್ಲ ಜಾತಿ, ಧರ್ಮ, ಜನಾಂಗಕ್ಕೆ ಬೆಳಕನ್ನು ನೀಡುವುದಾಗಿದೆ. ಪ್ರತಿಯೊಂದು ಸಮಸ್ಯೆಗೂ ಬುದ್ಧನಲ್ಲಿ ಪರಿಹಾರವಿದೆ. ಇಂದಿನ ಯುವ ಪೀಳಿಗೆಗೆ ಬುದ್ಧನ ಪರಿಚಯ ಇಲ್ಲದಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ. ಎಂ.ಮುನಿರಾಜು, ಅನ್ಯಾಯಕ್ಕೆ ಒಳಗಾದ ಪ್ರತಿಯೊಂದು ಜಾತಿಗೆ ನ್ಯಾಯ ದೊರಕಿಸಿದವರು ಅಂಬೇಡ್ಕರ್ ಅವರು. ಬುದ್ಧ, ಬಸವ ಅಂಬೇಡ್ಕರ್‌ರವರ ವೈಚಾರಿಕತೆಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಅವರ ಚಿಂತನೆಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡು ಕುಟುಂಬ, ಸಮಾಜ, ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ಕರೆ ನೀಡಿದರು.
ಹಿರಿಯ ಸಾಹಿತಿ ಎನ್.ಡಿ. ವೆಂಕಮ್ಮ ಬುದ್ಧ ವಂದನೆ ಸಲ್ಲಿಸಿದರು.
ಕಾರ್ಯಕ್ರಮ ಶುರುಮುನ್ನ ವಿವಿಯ ಕುಲಸಚಿವ ಎಸ್.ಎನ್ ರುದ್ರೇಶ್ ನೇತೃತ್ವದಲ್ಲಿ ಬುದ್ಧ, ಬಸವ, ಅಂಬೇಡ್ಕರ್‌ರವರ ಭಾವಚಿತ್ರವನ್ನೊಳಗೊಂಡ ತೆರೆದ ವಾಹನ ಹಾಗೂ ಅವರುಗಳ ವೇಷಭೂಷಣ ಧರಿಸಿದ್ದ ವಿದ್ಯಾರ್ಥಿಗಳನ್ನು ಒಳಗೊಂಡ ಭವ್ಯ ಮೆರವಣಿಗೆಯು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು.
ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಬಳಿಕ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.