ಕನ್ನಡಪ್ರಭ ವಾರ್ತೆ ಸಿಂಧನೂರು
ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಅಶೋಕಭವನದ ಬಳಿ ಕಿತ್ತೂರುರಾಣಿ ಚೆನ್ನಮ್ಮ ಕಂಚಿನ ಪುತ್ಥಳಿ ಅನಾವರಣ ಹಾಗೂ ಚೆನ್ನಮ್ಮ ವೃತ್ತದ ಉದ್ಘಾಟನೆ ನಂತರ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿಂದಿನ ಸರ್ಕಾರದಲ್ಲಿ ಶಾಸಕರೇ 2ಎ ಮೀಸಲಾತಿ ಹೋರಾಟಕ್ಕೆ ನಮ್ಮನ್ನು ಕರೆಯಲು ಬರುತ್ತಿದ್ದರು. ಪ್ರಸ್ತುತ ಸರ್ಕಾರದಲ್ಲಿ ನಾನೇ ಹೋಗಿ ಶಾಸಕರನ್ನು ಕರೆಯಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪಂಚಮಸಾಲಿ ಸಮಾಜದ ಮುಂದಿನ ಪೀಳಿಗೆ ಹಿತದೃಷ್ಠಿಯಿಂದ ಜನ ಪ್ರತಿನಿಧಿಗಳು ಮತ್ತು ಮುಖಂಡರು ವೈಯಕ್ತಿಕ ಸ್ವಾರ್ಥ ಬದಿಗಿಟ್ಟು ರಾಜೀರಹಿತ ಚಳವಳಿಗೆ ಮುಂದಾಗಬೇಕಾದ ಅನಿವಾರ್ಯತೆಯಿದೆ ಎಂದು ಹೇಳಿದರು.ಲಿಂಗಾಯತ ಸಮಾಜದ ಉಪಪಂಗಡಗಳು ಪ್ರತ್ಯೇಕವಾಗಿ ತಮ್ಮ ಸಮುದಾಯಗಳ ದಾರ್ಶನಿಕರನ್ನು ಗುರುತಿಸಿ ಸರ್ಕಾರದಿಂದ ಜಯಂತಿ ಆಚರಣೆ ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾದ ನಂತರ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟದ ರಾಣಿ ಚನ್ನಮ್ಮ ಜಯಂತಿಯನ್ನು ಸಮಾಜದ ಒತ್ತಡದಿಂದ ಜಾರಿಗೆ ತರಲಾಗಿದೆ ಎಂದರು.
ಲಿಂಗಾಯತ ಸಮಾಜದ ಉಪಪಂಗಡಗಳಾದ ಕಂಬಾರ, ಕುಂಬಾರ, ಗಾಣಿಗ ಹೀಗೆ ಎಲ್ಲ ಕುಶಲ ಕರ್ಮಿಗಳಿಗೆ 2ಎ ಮೀಸಲಾತಿ ಕಲ್ಪಿಸಿದರು. ಆದರೆ ಲಿಂಗಾಯತರಿಗೆ ಭೂಮಿಯುಳ್ಳವರು, ಆರ್ಥಿಕವಾಗಿ ಸದೃಢರೆನ್ನುವ ಕಾರಣದಿಂದ ಮೀಸಲಾತಿ ಕೊಡದೆ ತಮ್ಮ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ ಎಂದರು.
ಮಾಜಿ ಸಂಸದ ಕರಡಿ ಸಂಗಣ್ಣ, ಸಮಾಜ ಒಗ್ಗಟ್ಟಿನಿಂದ ಹೋರಾಟಕ್ಕಿಳಿದರೆ ತಾವು ಸಹ ತನು-ಮನ-ಧನದಿಂದ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದರು.ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ತುರ್ವಿಹಾಳ, ಮುಖಂಡ ಲಕ್ಷ್ಮಣ ನಿರಾಣಿ, ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಪಂಪನಗೌಡ ಮಾತನಾಡಿದರು. ವಿವಿಧ ಮಠಗಳ ಸ್ವಾಮೀಜಿಗಳು,ಸಮಾಜದ ಮುಖಂಡರು,ಜನಪ್ರತಿನಿಧಿಗಳು ಸೇರಿ ಅನೇಕರು ಇದ್ದರು.