ಕೆಂಪೇಗೌಡ ಜಯಂತಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ

KannadaprabhaNewsNetwork |  
Published : Jun 17, 2024, 01:38 AM IST
15ಕೆಆರ್ ಎಂಎನ್ 4.ಜೆಪಿಜಿರಾಮನಗರದ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯ ರೂಪುರೇಷೆಗಳ ಕುರಿತು  ಶಾಸಕ ಇಕ್ಬಾಲ್ ಹುಸೇನ್ ಸಭೆ ನಡೆಸಿದರು. | Kannada Prabha

ಸಾರಾಂಶ

ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂ.27ರಂದು ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂ.27ರಂದು ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯ ರೂಪುರೇಷೆಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು, ಇಂದು ದೇಶ ವಿದೇಶಗಳು ಬೆಂಗಳೂರನ್ನು ತಿರುಗಿ ನೋಡುವಂತಾಗಿದೆ ಎಂದರೆ ಅದಕ್ಕೆ ನಿರ್ಮಾತೃ ಕೆಂಪೇಗೌಡರು ಕಾರಣ. ಆವತ್ತಿನ ಅವರ ದೂರ ದೃಷ್ಟಿ ಇಂದು ಬೆಂಗಳೂರು ವಿಶಾಲವಾಗಿ ಬೆಳೆದು ಸಿಲಿಕಾನ್ ಸಿಟಿಯಾಗಿ ವಿಶ್ವದ ಗಮನಸೆಳೆಯಲು ಕಾರಣವಾಗಿದೆ. ಆದ್ದರಿಂದ ಅವರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಹೂವಿನ ಅಲಂಕಾರ, ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ, ವೇದಿಕೆ ಕಾರ್ಯಕ್ರಮವನ್ನು ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಬೇಕು ಹಾಗೂ ನಾಡಪ್ರಭು ಕೆಂಪೇಗೌಡರ ಕುರಿತು ಉಪನ್ಯಾಸ, ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಮಾಜ ಸೇವಕರಿಗೆ ಸನ್ಮಾನ, ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ತೆಂಗು, ಮಾವು ಸಸಿಗಳನ್ನು ನೀಡಬೇಕು. ಕಾರ್ಯಕ್ರಮವನ್ನು ಜಿಲ್ಲೆಯಲ್ಲಿರುವ ಎಲ್ಲಾ ಸಂಘ ಸಂಸ್ಥೆಗಳೊಂದಿಗೆ ಸೇರಿ ಆಚರಿಸುವಂತೆ ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಶಿವನಂದಮೂರ್ತಿ ಮಾತನಾಡಿ, ಕಾರ್ಯಕ್ರಮದಲ್ಲಿ ಕುಡಿಯುವ ನೀರು, ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು, ಪೊಲೀಸ್ ಬಂದೋಬಸ್ತ್, ಉಪಹಾರದ ವ್ಯವಸ್ಥೆ ಹಾಗೂ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ರಾಮನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚೇತನ್, ನಾಡಪ್ರಭು ಕೆಂಪೇಗೌಡ ಸಮಿತಿಯ ಅಧ್ಯಕ್ಷರಾದ ಚಂದ್ರಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ಬಾಬು ಟಿ.ಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.15ಕೆಆರ್ ಎಂಎನ್ 4.ಜೆಪಿಜಿ

ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯ ರೂಪುರೇಷೆಗಳ ಕುರಿತು ಶಾಸಕ ಇಕ್ಬಾಲ್ ಹುಸೇನ್ ಸಭೆ ನಡೆಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ