ಮುಂಬರುವ ಚನಾವಣೆಗಳಿಗೆ ಸಿದ್ಧರಾಗಿ

KannadaprabhaNewsNetwork |  
Published : Nov 14, 2025, 04:00 AM IST
ಕತ್ತಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಯಮಕನಮರಡಿ ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಂಘದ ಚುನಾವಣೆಯಲ್ಲಿ ಸ್ವಾಭಿಮಾನಕ್ಕಾಗಿ ಗೆಲುವು ತಂದುಕೊಟ್ಟಂತೆ ಬರುವ 2028ರ ವಿಧಾನಸಭಾ ಚುನಾವಣೆಯಲ್ಲಿಯೂ ಸ್ವಾಭಿಮಾನ ಉಳಿವಿಗಾಗಿ ಬಿಜೆಪಿ ಗೆಲ್ಲಿಸಲು ಸಿದ್ದತೆ ಮಾಡಿಕೊಳ್ಳಬೇಕೆಂದು ಜಿಪಂ ಮಾಜಿ ಸದಸ್ಯ ಪವನ ಕತ್ತಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಯಮಕನಮರಡಿ

ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಂಘದ ಚುನಾವಣೆಯಲ್ಲಿ ಸ್ವಾಭಿಮಾನಕ್ಕಾಗಿ ಗೆಲುವು ತಂದುಕೊಟ್ಟಂತೆ ಬರುವ 2028ರ ವಿಧಾನಸಭಾ ಚುನಾವಣೆಯಲ್ಲಿಯೂ ಸ್ವಾಭಿಮಾನ ಉಳಿವಿಗಾಗಿ ಬಿಜೆಪಿ ಗೆಲ್ಲಿಸಲು ಸಿದ್ದತೆ ಮಾಡಿಕೊಳ್ಳಬೇಕೆಂದು ಜಿಪಂ ಮಾಜಿ ಸದಸ್ಯ ಪವನ ಕತ್ತಿ ತಿಳಿಸಿದರು.

ಹತ್ತರಗಿ- ಆನಂದಪೂರ ಗ್ರಾಮದ ಹಾಲದೇವರಮಠ ಆಶ್ರಮದಲ್ಲಿ ನಡೆದ ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಯಮಕನಮರಡಿ ಮತಕ್ಷೇತ್ರದಲ್ಲಿ ಮೋಸ, ವಂಚನೆ, ಅನ್ಯಾಯ ನಡೆಯುತ್ತಿದ್ದರೂ ಪೊಲೀಸರು ಮತ್ತು ಅಧಿಕಾರಿಗಳು ಮೌನವಾಗಿದ್ದಾರೆ ಎಂದು ಆರೋಪಿಸಿದರು.ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ ಮಾತನಾಡಿ, ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದು ಅವಶ್ಯವಾಗಿದೆ. ಇತ್ತೀಚೆಗೆ ನಡೆದ ಮಾಜಿ ಸಂಸದ ರಮೇಶ ಕತ್ತಿ, ಮಾಜಿ ಸಚಿವ ಎ.ಬಿ.ಪಾಟೀಲ ಅವರ ನೇತೃತ್ವದಲ್ಲಿ ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಂಘದ ಚುನಾವಣೆಯಲ್ಲಿ ಆದಂತೆ ಸ್ಥಳೀಯ ಸಂಸ್ಥೆಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಯಮಕನಮರಡಿ ಮತಕ್ಷೇತ್ರದ ಸ್ವಾಭಿಮಾನ ಎತ್ತಿ ತೋರಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಪಕ್ಷ ಸಂಘಟಿಸಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಂತೆ ಕಾರ್ಯಕರ್ತರು ಒಮ್ಮತದಿಂದ ಶ್ರಮಿಸಬೇಕೆಂದು ಹೇಳಿದರು.ಸಭೆಯಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಂಘದ ಉಪಾಧ್ಯಕ್ಷ ಅಜೀತ ಮುನ್ನೋಳ್ಳಿ, ನಿರ್ದೇಶಕ ಕಲಗೌಡ ಪಾಟೀಲ, ಯಮಕನಮರಡಿ ಬಿಜೆಪಿ ಅಧ್ಯಕ್ಷ ಶ್ರೀಶೈಲ ಯಮಕನಮರಡಿ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಾಜನ ಮಠಪತಿ, ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸಿದ್ದಲಿಂಗ ಸಿದ್ದಗೌಡರ, ಗುತ್ತಿಗೆದಾರ ಪುಂಡಲೀಕ ನಂದಗಾವಿ, ಶೇಖರಗೌಡ ಮೋದಗಿ, ಮಹಾವೀರ ನಾಶಿಪುಡಿ, ಜನಾರ್ಧನ ಪಾಟೀಲ, ಬಾಳಯ್ಯ ತವಗಮಠ, ಯಲ್ಲಪ್ಪ ಗಡಕರಿ, ಈರಣ್ಣ ಗುರವ, ಸಂತೋಷ ಪಾಟೀಲ, ಮೋಶಿನ ಇನಾಮದಾರ (ಸರ್ಕಾರ) ಹಾಗೂ ಪಕ್ಷದ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು

PREV

Recommended Stories

ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ಹಾರನ್‌ ಮಾಡಿದ್ದಕ್ಕೆ ಸಿಟ್ಟಿಗೆದ್ದು ಬೈಕ್‌ಗೆ ಕಾರು ಗುದ್ದಿಸಿದವ ಸೆರೆ