ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ದೇವರಹಿಪ್ಪರಗಿ ಮತಕ್ಷೇತ್ರದ ಜಿಪಂ, ತಾಪಂ ಚುನಾವಣೆ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಿಷ್ಠಾವಂತ ಕಾರ್ಯಕರ್ತರಿಂದ ಕಾಂಗ್ರೆಸ್ ಪಕ್ಷ ಸಧೃಢವಾಗಿದೆ. ಪಕ್ಷದ ಸಂಘಟನೆಗೆ ಆರೋಗ್ಯಕರ ಚರ್ಚೆಗಳಾಗಬೇಕು. ಕಾಂಗ್ರೆಸ್ ಸರ್ಕಾರದ ಜನಪ್ರಿಯ ಕಾರ್ಯಕ್ರಮ, ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು. ಕೇಂದ್ರದ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳ ಬಗ್ಗೆ ಜನರಲ್ಲಿ ಜನಜಾಗೃತಿ ಮೂಡಿಸಬೇಕು. ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ನೀಡುವ ಮೂಲಕ ಕಾಂಗ್ರೆಸ್ ನುಡಿದಂತೆ ನಡೆದಿದೆ. ಗ್ಯಾರಂಟಿಗಳು ಬಡ ಜನರಿಗೆ ಆರ್ಥಿಕ ಶಕ್ತಿ ತುಂಬಿದೆ. ಉಸ್ತುವಾರಿ ಸಚಿವರಾಗಿ ಎಂ.ಬಿ.ಪಾಟೀಲರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಜೊತೆ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.ಕ್ಷೇತ್ರಕ್ಕೆ ಸಚಿವ ಎಂಬಿಪಾರ ಕೊಡುಗೆ ಅಪಾರ:
ದೇವರಹಿಪ್ಪರಗಿ ಮತಕ್ಷೇತ್ರದ ಜಿಪಂ, ತಾಪಂ ಕಾರ್ಯಕರ್ತರ ಸಭೆಯಲ್ಲಿ ಮುಕ್ತವಾಗಿ ಮಾತನಾಡಲು ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅವಕಾಶ ನೀಡಲಾಗಿದ್ದು, ಅನೇಕರು ಮಾತನಾಡಿ, ಜಿಲ್ಲೆ ಹಾಗೂ ಕ್ಷೇತ್ರಕ್ಕೆ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲರ ಕೊಡುಗೆ ಅಪಾರವಾಗಿದೆ. ಕ್ಷೇತ್ರದಲ್ಲಿ ಹಲವಾರು ಜನ ಆಕಾಂಕ್ಷಿಗಳಿದ್ದರೂ ಕಾಂಗ್ರೆಸ್ ಪಕ್ಷ ಕ್ಷೇತ್ರ ಉಳಿಸಿಕೊಳ್ಳಲು ಆಗುತ್ತಿಲ್ಲ. ಈ ಬಾರಿ ವಿಧಾನಸಭಾ ಚುನಾವಣೆಗೆ ಸಚಿವರಾದ ಎಂ.ಬಿ.ಪಾಟೀಲರ ಕುಟುಂಬದಿಂದ ಅಥವಾ ವಿ.ಪಂ ಸದಸ್ಯರಾದ ಸುನೀಲಗೌಡ ಪಾಟೀಲರು ಕ್ಷೇತ್ರದಲ್ಲಿ ನಿಲ್ಲುವುದಾದರೇ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಹಲವಾರು ನಾಯಕರು, ಕಾರ್ಯಕರ್ತರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ವಿಶೇಷವಾಗಿತ್ತು.ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ದೇವರಹಿಪ್ಪರಗಿ ಮತಕ್ಷೇತ್ರದ ಉಸ್ತುವಾರಿಗಳಾದ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ), ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆನಂದಗೌಡ ದೋಡಮನಿ, ಹೂ.ಹಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಳಸಾಹೇಬಗೌಡ ಪಾಟೀಲ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ರಮೀಜಾ ನದಾಫ್, ಮುಖಂಡರುಗಳಾದ ನಿಂಗನಗೌಡ ಪಾಟೀಲ, ಅಶೋಕಗೌಡ ಪಾಟೀಲ, ಸಂಗಮೇಶ ಛಾಯಗೋಳ ಸೇರಿದಂತೆ ಹಲವಾರು ಜನ ಮುಖಂಡರು ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ, ಬರುವಂತಹ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾವೆಲ್ಲರೂ ಕಂಕಣ ಬದ್ಧರಾಗಿ ಕೆಲಸ ಮಾಡೋಣ ಎಂದು ಕೋರಿದರು.ಇದೇ ಸಂದರ್ಭದಲ್ಲಿ ದೇವರಹಿಪ್ಪರಗಿ, ಹೂವಿನ ಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವಿವಿಧ ಘಟಕ ಪದಾಧಿಕಾರಿಗಳು,ಪ.ಪಂ ಸದಸ್ಯರು,ಮಹಿಳಾ ಘಟಕದ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಬರುವಂತ ದಿನಗಳಲ್ಲಿ ಈ ಕ್ಷೇತ್ರದ 7 ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಕಾರ್ಯಕರ್ತರ ಸಮಸ್ಯೆಗಳನ್ನು ಕೇಳಲು 8 ಜನರ ತಂಡವನ್ನು ಕೆಪಿಸಿಸಿ ರಾಜ್ಯಾಧ್ಯಕ್ಷರು ನೇಮಿಸಿದ್ದಾರೆ. ಎಲ್ಲರ ಮಾರ್ಗದರ್ಶನದಲ್ಲಿ ಮುಂಬರುವ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಬರುವಂತೆ ಕಾರ್ಯಕರ್ತರೆಲ್ಲರೂ ಒಗ್ಗೂಡಿ, ಸಂಘಟಿತ ರಾಗಬೇಕು. ಈಗಾಗಲೇ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ ನಡೆಯುತ್ತಿದೆ. ಇದರ ಬಗ್ಗೆ ಪಕ್ಷದ ಮುಖಂಡರು ನಿಗಾವಹಿಸಬೇಕು.-ಸುನೀಲಗೌಡ ಪಾಟೀಲ,
ವಿಧಾನ ಪರಿಷತ್ ಸದಸ್ಯರು.