ಅಂತಿಮ‌ ಮತದಾರರ ಪಟ್ಟಿ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಿ

KannadaprabhaNewsNetwork |  
Published : Dec 28, 2024, 12:48 AM IST
ಪೊಟೋ: 27ಎಸ್‌ಎಂಜಿಕೆಪಿ01ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ಕ್ಕೆ ಕುರಿತಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮತದಾರರ ಪಟ್ಟಿಯ ವೀಕ್ಷಕ ಡಾ.ಕೆ.ವಿ.ತ್ರಿಲೋಕ್ ಚಂದ್ರ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮತದಾರರ ಪಟ್ಟಿಯ ವೀಕ್ಷಕ ಡಾ.ಕೆ.ವಿ.ತ್ರಿಲೋಕ್ ಚಂದ್ರ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮತದಾರರ ಪಟ್ಟಿಯ ವೀಕ್ಷಕ ಡಾ.ಕೆ.ವಿ.ತ್ರಿಲೋಕ್ ಚಂದ್ರ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025ಕ್ಕೆ ಕುರಿತಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)ವನ್ನು ತಗ್ಗಿಸಲು ಹಾಗೂ ಯುವ ಮತದಾರರ ನೋಂದಣಿ ಹೆಚ್ಚಿಸಲು ಪಾರ್ಟ್ ವಾರು ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದರು.

ಇಪಿ ರೇಷಿಯೋ ಜಿಲ್ಲೆಯಲ್ಲಿ 78.84 ಇದೆ. ಇದು ರಾಜ್ಯ ಸರಾಸರಿಗಿಂತ ಹೆಚ್ಚಿದೆ‌. ಆದ್ದರಿಂದ ಎಲ್ಲ ಕ್ಷೇತ್ರವಾರು ಮತ್ತು ಪಾರ್ಟ್‌ವಾರು ಅಗತ್ಯವಾದ ವಿಶ್ಲೇಷಣೆ ನಡೆಸಿ ಹಾಗೂ ಇ-ಜನ್ಮ ಪೋರ್ಟಲ್‌ನಿಂದ ಮಾಹಿತಿ ಪಡೆದು ಕಡಿಮೆ ಮಾಡಬೇಕು. ಇದೇ ರೀತಿ ಪಾರ್ಟ್‌ವಾರು ವಿಶ್ಲೇಷಣೆ ಮಾಡಿ ಯುವ ಮತದಾರರ ನೋಂದಣಿಯನ್ನು ಹೆಚ್ಚಿಸಬೇಕು. ಕೆಲವೆಡೆ 20 ವರ್ಷ ತುಂಬಿದವರು ಇನ್ನೂ ನೋಂದಣಿಯಾಗಿಲ್ಲ. ಈ ಬಗ್ಗೆ ಕ್ರಮ ವಹಿಸಬೇಕು ಎಂದು ಹೇಳಿದರು.

ಗೈರು ಮತದಾರರು, ಮರಣ ಹೊಂದಿದ ಮತ್ತು ಇತರೆಡೆ ವರ್ಗಾವಣೆಯಾದ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಬೇಕು. ಫಾರಂ ಸಂಖ್ಯೆ 7 ಅಪ್‌ಡೇಟ್ ಆಗಬೇಕು. ಮರಣ ಹೊಂದಿದವರ ಮಾಹಿತಿಯನ್ನು‌ ಪ್ರತಿ ತಾಲೂಕಿನಲ್ಲಿ ವಿಎ ಮತ್ತು ಪಿಡಿಒಗಳಿಂದ ಪಡೆದು ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಬೇಕು. ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯವಾದ ಕ್ರಮ‌ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ ಸಿಇಒ ಎನ್.ಹೇಮಂತ್ ಮಾತನಾಡಿ, ಡಿ.27ಕ್ಕೆ ಜಿಲ್ಲೆಯಲ್ಲಿ 1032 ಲಿಂಗಾನುಪಾತ ಇದೆ. ಜಿಲ್ಲೆಯಲ್ಲಿ ಮಹಿಳೆ 746679, ಪುರುಷ 770827 ಮತ್ತು ಲಿಂಗತ್ವ ಅಲ್ಪಸಂಖ್ಯಾತ 37 ಸೇರಿ 1517543 ಮತದಾರರಿದ್ದಾರೆ. 21224 ಯುವ ಮತದಾರರು ನೋಂದಣಿಯಾಗಿದ್ದಾರೆ. ಜನವರಿ 6ಕ್ಕೆ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಮಾಹಿತಿ‌ ನೀಡಿದರು.

ಪಾಲಿಕೆ ಆಯುಕ್ತೆ ಡಾ.ಕವಿತಾ ಯೋಗಪ್ಪನವರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಚುನಾವಣಾ ತಹಸೀಲ್ದಾರ್ ಪ್ರದೀಪ್, ತಾಲೂಕುಗಳ ತಹಸೀಲ್ದಾರರು, ತಾ.ಪಂಗಳ ಇಒಗಳು ಮತ್ತು ಚುನಾವಣೆಗೆ ಸಂಬಂಧಿಸಿದ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್‌ ಬಿಡಿ ಪುಸ್ತಕ ಹಿಡಿ’ ಅಭಿಯಾನ
ಬಾಗಲಕೋಟೆ ಗಲಭೆಗೆ ಕೇಸರಿ ಪಡೆ ಗರಂ