ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಲು ಡೀಸಿ ಮನವಿ

KannadaprabhaNewsNetwork |  
Published : Sep 25, 2025, 01:00 AM IST
್ಿ್ಿ್ಿ್ | Kannada Prabha

ಸಾರಾಂಶ

ದಸರಾ ಪ್ರಯುಕ್ತ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಧಾರ್ಮಿಕ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ತಾಯಿಯ ಕೃಪೆಗೆ ಪಾತ್ರರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲೆಯ ಜನತೆಗೆ ಮನವಿ ಮಾಡಿದರು.

ಕನ್ನಡಪ್ರಭ ವಾ ರ್ತೆ, ತುಮಕೂರುದಸರಾ ಪ್ರಯುಕ್ತ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಧಾರ್ಮಿಕ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ತಾಯಿಯ ಕೃಪೆಗೆ ಪಾತ್ರರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲೆಯ ಜನತೆಗೆ ಮನವಿ ಮಾಡಿದರು.ಅವರಿಂದು ಚಂದ್ರಘಂಟಾ (ಮೀನಾಕ್ಷಿ) ಅಲಂಕಾರದಲ್ಲಿದ್ದ ಶ್ರೀ ಚಾಮುಂಡಿ ತಾಯಿಗೆ ಹೋಮ, ಪೂರ್ಣಾಹುತಿ ಸಲ್ಲಿಸಿದ ನಂತರ ಮಾತನಾಡುತ್ತಾ, ಸಾರ್ವಜನಿಕರು ದಸರಾ ಉತ್ಸವದಲ್ಲಿ ಭಾಗವಹಿಸಲು ಅಕ್ಟೋಬರ್ 2ರವರೆಗೂ ಜಿಲ್ಲೆಯ ಪ್ರತಿ ತಾಲೂಕಿನಿಂದ 250 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಹೆಲಿಕಾಪ್ಟರ್‌ನಿಂದ ತುಮಕೂರು ನಗರದ ಸೌಂದರ್ಯವನ್ನು ಸವಿಯಲು ಇದೇ ಮೊದಲ ಬಾರಿಗೆ ಹೆಲಿ ರೈಡ್ ಹಾಗೂ ಹಾಟ್ ಏರ್ ಬಲೂನ್ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಬಣ್ಣ-ಬಣ್ಣದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ನಗರವನ್ನು ರಾತ್ರಿ ವೇಳೆ ವೀಕ್ಷಿಸಲು ಲಂಡನ್ ಮಾದರಿಯ ಉಚಿತ ಡಬಲ್ ಡೆಕ್ಕರ್ ಬಸ್ಸಿನ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ 2000 ಕ್ಕೂ ಹೆಚ್ಚು ಜನರು ಡಬಲ್ ಡೆಕ್ಕರ್ ಬಸ್ಸಿನ ಮೂಲಕ ಉಚಿತ ಪ್ರಯಾಣ ಮಾಡಿ ದೀಪಾಲಂಕಾರ ಹಾಗೂ ದೀಪ ಚಿತ್ತಾರಗಳನ್ನು ವೀಕ್ಷಿಸಿ ಕಣ್ತುಂಬಿಕೊಂಡಿದ್ದಾರೆ.ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 28ರಂದು ಕಾಲೇಜು ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಕಾರ್ಯಕ್ರಮ ನಡೆಯಲಿದೆ. ನಂತರ ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ ಅವರು ಸಂಗೀತ ರಸಸಂಜೆ ಕಾರ್ಯಕ್ರಮದ ಮೂಲಕ ಗಾನಪ್ರಿಯರನ್ನು ರಂಜಿಸಲಿದ್ದಾರೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ