ಘಾಟಿ ಸುಬ್ರಹ್ಮಣ್ಯ: 53.22 ಲಕ್ಷ ಕಾಣಿಕೆ ಸಂಗ್ರಹ

KannadaprabhaNewsNetwork |  
Published : Nov 19, 2023, 01:30 AM IST
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ಶನಿವಾರ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ರಾಜ್ಯದ ಪ್ರಮುಖ ನಾಗಾರಾಧನಾ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆ ಶನಿವಾರ ನಡೆಯಿತು.

ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ರಾಜ್ಯದ ಪ್ರಮುಖ ನಾಗಾರಾಧನಾ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆ ಶನಿವಾರ ನಡೆಯಿತು.

ಪ್ರಸಕ್ತ ತಿಂಗಳಲ್ಲಿ ದೇವಾಲಯದ ಹುಂಡಿಯಲ್ಲಿಟೊಟ್ಟು 53,22,603 ರುಪಾಯಿ ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ 2 ಗ್ರಾಂ ಚಿನ್ನ ಹಾಗೂ ಒಂದೂವರೆ ಕೆಜಿ ತೂಕದ ಬೆಳ್ಳಿ ಆಭರಣಗಳನ್ನು ಭಕ್ತಾದಿಗಳು ಕಾಣಿಕೆ ಹುಂಡಿಯಲ್ಲಿ ಹಾಕಿದ್ದಾರೆ ಎಂದು ಕಾರ್ಯನಿರ್ವಹಣಾಧಿಕಾರಿ ಡಿ.ನಾಗರಾಜ್ ತಿಳಿಸಿದ್ದಾರೆ.

ಭಕ್ತಾದಿಗಳ ಸಮ್ಮುಖದಲ್ಲಿ ನಡೆದ ಹುಂಡಿ ಹಣ ಎಣಿಕೆ ಕಾರ್ಯದ ವೇಳೆ ಮುಜರಾಯಿ ತಹಸೀಲ್ದಾರ್ ಜೆ.ಹೇಮಾವತಿ, ದೇವಾಲಯದ ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ನಂಜಪ್ಪ, ಇಂಡಿಯನ್ ಓವರ್‌ಸೀಸ್‌ ಬ್ಯಾಂಕ್, ಪೊಲೀಸ್‌ ಇಲಾಖೆ ಹಾಗೂ ದೇವಾಲಯ ನಿರ್ವಹಣಾ ಸಿಬ್ಬಂದಿ ಉಪಸ್ಥಿತರಿದ್ದರು..

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಕ್ಷರತೆ ಬಾಲ್ಯ ವಿವಾಹ ಕೇಸ್‌ ರದ್ದತಿಗೆ ಆಧಾರವಾಗದು: ಕೋರ್ಟ್‌
ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!