ಕನ್ನಡಪ್ರಭ ವಾರ್ತೆ ಅರಸೀಕೆರೆ
ಶಂಕರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಬಹಳ ಕಾಳಜಿಯಿಂದ ವ್ಯಾಸಂಗ ಮಾಡಬೇಕು. ನಾನು ಈ ಶಾಲೆಯಲ್ಲಿ ವ್ಯಾಸಂಗ ಮಾಡಿ ಬಂದವನು ಈ ಶಾಲೆ ಶತಮಾನೋತ್ಸವವನ್ನು ಆಚರಿಸಿಕೊಂಡಿದೆ. ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡಿ ಬದುಕನ್ನು ಕಟ್ಟಿಕೊಂಡಿದ್ದಾರೆ. ನಿಮಗೆ ದೊರೆತಿರುವ ಸೌಲಭ್ಯಗಳನ್ನು ಬಳಸಿಕೊಂಡು ಪ್ರತಿಭಾವಂತ ವಿದ್ಯಾರ್ಥಿಗಳಾಗಿ ಹೊರಹೊಮ್ಮಬೇಕು ಎಂದು ಆಶಿಸಿದರು. ರಮ್ಯಾ ವಿನಯ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರುಗಳನ್ನು ನೆನಪಿನಲ್ಲಿ ಇಟ್ಟುಕೊಂಡಾಗ ಮಾತ್ರ ಶ್ರೇಯಸ್ಸನ್ನು ಕಾಣಲು ಸಾಧ್ಯ. ನಮಗೆ ಜ್ಞಾನಾರ್ಜನೆ ನೀಡಿರುವ ಶಿಕ್ಷಕರ ನೆನಪು ಸದಾ ನಮ್ಮ ಮನಗಳಲ್ಲಿ ಇರಬೇಕೆಂದು ಅವರು ವಿದ್ಯಾರ್ಥಿಗಳಿಗೆ ಹಿತನುಡಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶೋಭಾ ಶಂಕರ್ ಅವರು, ತಾವು ಓದಿದ ಶಾಲೆಯ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದಾರೆ, ಬೆಂಗಳೂರಿನಲ್ಲಿರುವ ಅವರು ತಮ್ಮ ಮೊಮ್ಮಗಳ ಹುಟ್ಟುಹಬ್ಬವನ್ನು ತಾವು ಓದಿದ ಗ್ರಾಮೀಣ ಶಾಲೆಯಲ್ಲಿ ಆಚರಿಸಿಕೊಳ್ಳಲು ಕುಟುಂಬ ಸಮೇತರಾಗಿ ಆಗಮಿಸಿ ಶಾಲೆಗೆ ಕೊಡುಗೆಯನ್ನು ನೀಡಿದ್ದಾರೆ. ಶಾಲೆಯ ಮೇಲಿನ ಅವರ ಅಭಿಮಾನ ನಿರಂತರವಾಗಿರಲಿ ಎಂದು ಆಶಿಸಿ ಎಲ್ಲರಿಗೂ ಶುಭಕೋರಿದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ವೇತಾ ಹುಟ್ಟುಹಬ್ಬ ಆಚರಿಸಿಕೊಂಡ ಪುಟಾಣಿ ಹಂಸಿತಾ ಹಾಗೂ ಶಾಲಾ ಮಕ್ಕಳಿಗೆ ಶುಭಕೋರಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀನಿವಾಸ್ ಹಾಗೂ ಸದಸ್ಯರು, ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು. ಶಿಕ್ಷಕ ಪುಟ್ಟಸ್ವಾಮಿ ಕಾರ್ಯಕ್ರಮವನ್ನ ನಡೆಸಿಕೊಟ್ಟರು.