ವಿಶೇಷಚೇತನ ಮಕ್ಕಳು ಸಾಮಾನ್ಯರಿಗಿಂತ ಕಡಿಮೆಯಿಲ್ಲ

KannadaprabhaNewsNetwork |  
Published : Dec 18, 2023, 02:00 AM IST
ಹಿರೇಕೆರೂರು ಪಟ್ಟಣದ ಗುರುಭವನದಲ್ಲಿ ಶನಿವಾರ ವಿಶೇಷ ಚೇತನ ಮಕ್ಕಳಿಗೆ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಶಾಸಕ ಯು.ಬಿ. ಬಣಕಾರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕಿನ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗವಿಕಲ ಮಕ್ಕಳನ್ನು ತಂದೆ-ತಾಯಿಗಳು ವ್ಯವಸ್ಥಿತವಾಗಿ ಸಾಕುತ್ತಿರುವುದನ್ನು ನೋಡಿದ್ದೇನೆ. ಇಂಥ ಸಂದರ್ಭದಲ್ಲಿ ಈ ಮಕ್ಕಳು ಇತರ ಮಕ್ಕಳಿಗಿಂತ ಕಡಿಮೆ ಇಲ್ಲದಂತೆ ಅವರ ಜತೆ ಸಮನ್ವಯ ಸಾಧಿಸಿ ಶಿಕ್ಷಣ ಪಡೆಯಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಕನ್ನಡಪ್ರಭ ವಾರ್ತೆ ಹಿರೇಕೆರೂರು

ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕಿನ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗವಿಕಲ ಮಕ್ಕಳನ್ನು ತಂದೆ-ತಾಯಿಗಳು ವ್ಯವಸ್ಥಿತವಾಗಿ ಸಾಕುತ್ತಿರುವುದನ್ನು ನೋಡಿದ್ದೇನೆ. ಇಂಥ ಸಂದರ್ಭದಲ್ಲಿ ಈ ಮಕ್ಕಳು ಇತರ ಮಕ್ಕಳಿಗಿಂತ ಕಡಿಮೆ ಇಲ್ಲದಂತೆ ಅವರ ಜತೆ ಸಮನ್ವಯ ಸಾಧಿಸಿ ಶಿಕ್ಷಣ ಪಡೆಯಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಅಡಿ ವಿಶೇಷ ಚೇತನ ಮಕ್ಕಳಿಗೆ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅಂಗವಿಕಲ ಮಕ್ಕಳಿಗೆ ವಿಶೇಷ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.

ಅಲಿಮ್ಕೊ ಕಂಪನಿಯವರು ನಿಮ್ಮ ತಾಲೂಕಿಗೆ ಒಟ್ಟು ೮೯ ಸಾಧನ ಸಲಕರಣೆಗಳನ್ನು ನೀಡಿದ್ದಾರೆ. ಸರ್ಕಾರ ಈ ಕಂಪನಿಗೆ ಅನುದಾನ ನೀಡುವುದು. ಇದರ ಸದುಪಯೋಗವನ್ನು ಪಾಲಕರು ತಮ್ಮ ಮಕ್ಕಳ ಸಲುವಾಗಿ ಬಳಸಬೇಕು. ಈ ಮಕ್ಕಳಿಗಾಗಿ ಶಾಸಕರ ಅನುದಾನದಲ್ಲಿ ಶೇ. ೪ ಮೀಸಲಿಡುತ್ತೇನೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ್, ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಪ್ಪಗೌಡರ, ಕಾರ್ಯದರ್ಶಿ ಆರ್.ಎಂ. ಪೂಜಾರ, ಸುರೇಶ ಅಜ್ಜಪ್ಪನವರ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಬಿಇಐ ಆರ್.ಟಿ.ಗಳಾದ ಹನುಮಂತಪ್ಪ, ಮಹೇಶ್ ಸುರ್ವೆ, ಭಾರತಿ ಇದ್ದರು. ಬಿಆರ್‌ಪಿ ನಂದೀಶ್ ಲಮಾಣಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ