ಕುಡಿವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ

KannadaprabhaNewsNetwork |  
Published : Mar 02, 2025, 01:20 AM IST
5 | Kannada Prabha

ಸಾರಾಂಶ

ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರು ದೊರೆಯುವಂತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಕೊರತೆ ಕುರಿತು ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಿ

ಕನ್ನಡಪ್ರಭ ವಾರ್ತೆ ಮೈಸೂರುಮುಂಬರುವ ಬೇಸಿಗೆಯ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಕುಡಿಯುವ ನೀರು ಅಭಾವ ಆಗದಂತೆ ಸಿದ್ಧತೆ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲೆಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಲಭ್ಯತೆ ಮತ್ತು ಜಾನುವಾರುಗಳ ಮೇವಿನ ಲಭ್ಯತೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗುವ ಗ್ರಾಮಗಳನ್ನು ಗುರುತಿಸಿ ಪಟ್ಟಿ ಮಾಡಿಕೊಂಡು, ನೀರು ಪೂರೈಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರು ದೊರೆಯುವಂತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಕೊರತೆ ಕುರಿತು ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಿ ಎಂದು ಅವರು ತಿಳಿಸಿದರು.94 ಗ್ರಾಮಗಳಿಗೆ ನೀರಿನ ಕೊರತೆಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ 837 ಮಿಲಿ ಮೀಟರ್ ಮಳೆ ಆಗಬೇಕಿತ್ತು. ಸರಾಸರಿಗಿಂತ ಹೆಚ್ಚಿನ ಅಂದರೆ 965 ಮಿಲಿ ಮೀಟರ್ ಮಳೆ ಆಗಿದೆ. ಜಿಲ್ಲೆಯ ಜಲಾಶಯಗಳಲ್ಲಿ ಅಗತ್ಯ ಪ್ರಮಾಣದ ನೀರು ಇದ್ದು, ಮೇ ಅಂತ್ಯದವರೆಗೆ ಕುಡಿಯುವ ನೀರಿಗೆ ತೊಂದರೆ ಇಲ್ಲ. 94 ಗ್ರಾಮಗಳಲ್ಲಿ ನೀರಿನ ಕೊರತೆ ಆಗಬಹುದು ಎಂದು ಗ್ರಾಮೀಣ ಕುಡಿಯುವ ನೀರಿನ ಇಲಾಖೆಯಿಂದ ಪಟ್ಟಿ ಮಾಡಿಕೊಳ್ಳಲಾಗಿದೆ. ನಗರ ಪ್ರದೇಶದಲ್ಲಿ ಯಾವುದೇ ನೀರಿನ ಕೊರತೆ ಇಲ್ಲ ಎಂದು ಹೇಳಿದರು. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸ್ಥಳೀಯ ಶಾಸಕರ ಅಧ್ಯಕ್ಷತೆಯ ಸಭೆಯಲ್ಲಿ ಅನುಮೋದನೆ ಆಗಿರಬೇಕು. ನೀರು ಸರಬರಾಜು ಟ್ಯಾಂಕರ್ ಗೆ ಜಿಪಿಎಸ್ ಅಳವಡಿಸಬೇಕು ಎಂದು ಅವರು ಸೂಚಿಸಿದರು.ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆಯ ಆಯುಕ್ತ ಶೇಖ್ ಆಶೀಪ್ ತನ್ವೀರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಮೊದಲಾದವರು ಇದ್ದರು.----ಕೋಟ್...ಕಳೆದ ಬಾರಿ ಉತ್ತಮ ಮಳೆ ಆಗಿರುವುದರಿಂದ ಜಿಲ್ಲೆಯ ಜಲಾಶಯಗಳಲ್ಲಿ ಅಗತ್ಯ ಪ್ರಮಾಣದ ನೀರು ಲಭ್ಯವಿದೆ. ಆದರೂ ಬೇಸಿಗೆಯಲ್ಲಿ ನೀರಿನ ತೊಂದರೆ ಉಂಟಾಗುವ ಗ್ರಾಮಗಳ ಪಟ್ಟಿ ಮಾಡಿಕೊಳ್ಳಿ. ಜಾನುವಾರು ಮೇವುಗಳ ಕೊರತೆ ಉಂಟಾಗದಂತೆ ಈಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಿ.- ಡಾ.ಎಚ್.ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ