ರಾಮನಗರ: ನಗರಸಭೆ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಸದಸ್ಯೆ ಗಿರಿಜಮ್ಮಗುರುವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಆಯಿಷಾಬಾನು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನದ ಚುನಾವಣಾ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡ್ ಗಿರಿಜಮ್ಮ ಅವರನ್ನು ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ರಿಟರ್ನಿಂಗ್ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಬಿನೋಯ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.ಪೌರಾಯುಕ್ತ ಡಾ.ಜಯಣ್ಣ ಇದ್ದರು. ನಗರಸಭೆಯಲ್ಲಿ ಒಟ್ಟು 31 ಸದಸ್ಯ ಬಲವಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ 29 ಸದಸ್ಯರು ಭಾಗವಹಿಸಿದ್ದರು.
ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ, ಮಾಜಿ ಉಪಾಧ್ಯಕ್ಷೆ ಆಯಿಷಾಭಾನು, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಪಾಷ, ರಾ-ಚ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿಎನ್‌ಆರ್ ವೆಂಕಟೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಹೆಚ್.ರಾಜು, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗುರುಪ್ರಸಾದ್, ನಗರಸಭೆ ಸದಸ್ಯರಾದ ಬಿ.ಸಿ.ಪಾರ್ವತಮ್ಮ, ಮುತ್ತುರಾಜು, ನರಸಿಂಹ, ಅಜ್ಮತ್ , ಅಣ್ಣು, ಸಮದ್, ಬೈರೇಗೌಡ, ಪವಿತ್ರ, ನಿಜಾಮುದ್ದೀನ್ ಷರೀಫ್, ವಿಜಯಕುಮಾರಿ, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ವಿನೋದ್, ಕಾಂಗ್ರೆಸ್ ಮುಖಂಡರಾದ ಶಂಭೂಗೌಡ, ಷಡಕ್ಷರದೇವ, ಚಿಕ್ಕೇಗೌಡ, ಬಾಲಗೇರಿ ಪ್ರಭು, ಶ್ರೀನಿವಾಸ್, ವಕೀಲ ವಿನೋದ್ ಮತ್ತಿತರರು ನೂತನ ಉಪಾಧ್ಯಕ್ಷೆ ಗಿರಿಜಮ್ಮ ಅವರನ್ನು ಅಭಿನಂದಿಸಿದರು.30ಕೆಆರ್ ಎಂಎನ್ 1.ಜೆಪಿಜಿ
ರಾಮನಗರ ನಗರಸಭೆ ನೂತನ ಉಪಾಧ್ಯಕ್ಷೆ ಗಿರಿಜಮ್ಮ ಅವರನ್ನು ಸದಸ್ಯರು ಅಭಿನಂದಿಸಿದರು.