23-25ರವರೆಗೆ ನವದೆಹಲಿಯಲ್ಲಿಗಿರಿಜನ ಸಾಂಸ್ಕೃತಿಕ ಮಹಾ ಶೋಭಾಯಾತ್ರೆ

KannadaprabhaNewsNetwork |  
Published : May 19, 2026, 02:00 AM IST
17ಕೆಆರ್ ಎಂಎನ್ 1.ಜೆಪಿಜಿಗಿರಿಜನ ಸುರಕ್ಷಾ ವೇದಿಕೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಸಂಯೋಜಕ ಎಸ್.ರಾಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ರಾಮನಗರ: ನವದೆಹಲಿಯಲ್ಲಿ ಮೇ 23-25ರವರೆಗೆ ನಡೆಯುವ ಗಿರಿಜನ ಸಾಂಸ್ಕೃತಿಕ ಮಹಾ ಶೋಭಾಯಾತ್ರೆ ಹಾಗೂ ಸಾಂಸ್ಕೃತಿಕ ಸಮ್ಮೇಳನದಲ್ಲಿ ದೇಶದ ಒಂದೂವರೆ ಲಕ್ಷ ಬುಡಕಟ್ಟು ಸಮುದಾಯದವರು ಪಾಲ್ಗೊಳ್ಳಲಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯಿಂದಲೂ ನೂರಾರು ಮಂದಿ ಭಾಗವಹಿಸಲಿದ್ದಾರೆ ಎಂದು ಗಿರಿಜನ ಸುರಕ್ಷಾ ವೇದಿಕೆ ಬೆಂಗಳೂರು ದಕ್ಷಿಣ ಜಿಲ್ಲೆಯ ಸಂಯೋಜಕ ಎಸ್.ರಾಜು ತಿಳಿಸಿದರು

ರಾಮನಗರ: ನವದೆಹಲಿಯಲ್ಲಿ ಮೇ 23-25ರವರೆಗೆ ನಡೆಯುವ ಗಿರಿಜನ ಸಾಂಸ್ಕೃತಿಕ ಮಹಾ ಶೋಭಾಯಾತ್ರೆ ಹಾಗೂ ಸಾಂಸ್ಕೃತಿಕ ಸಮ್ಮೇಳನದಲ್ಲಿ ದೇಶದ ಒಂದೂವರೆ ಲಕ್ಷ ಬುಡಕಟ್ಟು ಸಮುದಾಯದವರು ಪಾಲ್ಗೊಳ್ಳಲಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯಿಂದಲೂ ನೂರಾರು ಮಂದಿ ಭಾಗವಹಿಸಲಿದ್ದಾರೆ ಎಂದು ಗಿರಿಜನ ಸುರಕ್ಷಾ ವೇದಿಕೆ ಬೆಂಗಳೂರು ದಕ್ಷಿಣ ಜಿಲ್ಲೆಯ ಸಂಯೋಜಕ ಎಸ್.ರಾಜು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಸುಮಾರು 500 ಜಾತಿಗಳ ಎಸ್‌ಟಿ ಸಮುದಾಯದ ಜನ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯ ಐದು ಭಾಗಗಳಿಂದ ಭವ್ಯ ಶೋಭಾಯಾತ್ರೆಯಲ್ಲಿ ಗಿರಿಜನರು ತಮ್ಮದೇ ಆದ ಉಡುಗೆ, ತೊಡುಗೆ, ವಾದ್ಯಗಳೊಂದಿಗೆ ಪಾಲ್ಗೊಳ್ಳಲಿದ್ದಾರೆ. ಬಳಿಕ ಕೆಂಪು ಕೋಟೆ ಆವರಣದಲ್ಲಿ ನಡೆಯುವ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ದೇಶದಲ್ಲಿ 700ಕ್ಕೂ ಹೆಚ್ಚು ಬುಡಕಟ್ಟು ಸಮುದಾಯಗಳಿದ್ದು, ಇಂದಿಗೂ ಮೂಲ ಸೌಲಭ್ಯಗಳಿಂದ ವಂಚಿತವಾಗಿವೆ. ಬುಡಕಟ್ಟು ಸಮುದಾಯದ ಜನರಿಗೆ ಸಂವಿಧಾನ ಬದ್ಧವಾಗಿ ಹಲವು ಸೌಲಭ್ಯಗಳಿದ್ದರೂ, ಬುಡಕಟ್ಟು ಸಮುದಾಯದ ಜನರಿಗೆ ತಲುಪುತ್ತಿಲ್ಲ. ಬುಡಕಟ್ಟು ಸಮುದಾಯದವರು ಸಂಘಟಿತರಾದರೆ ಮಾತ್ರ ಸಮಸ್ಯೆಗಳು ಬಗೆಹರಿಯುತ್ತವೆ. 2006 ಅರಣ್ಯ ಹಕ್ಕು ಕಾಯ್ದೆ ಬಂದು ಒಂದು ದಶಕವೇ ಕಳೆದರೂ, ಅರಣ್ಯದಿಂದ ಹೊರಹಾಕಿದವರಿಗೆ ಇಂದಿಗೂ ಅರಣ್ಯ ಭೂಮಿ ಹಕ್ಕು ಪತ್ರ ನೀಡಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಹ ಸಂಯೋಜಕ ಆರ್.ಕೆ.ಸತೀಶ್, ಸಮಿತಿ ಸದಸ್ಯರಾದ ಸಿದ್ದಯ್ಯ, ಬರಿಯಪ್ಪ, ಕಾಮರಾಜು, ವಿನೋದ್ ಇದ್ದರು.

17ಕೆಆರ್ ಎಂಎನ್ 1.ಜೆಪಿಜಿ

ಗಿರಿಜನ ಸುರಕ್ಷಾ ವೇದಿಕೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಸಂಯೋಜಕ ಎಸ್.ರಾಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೇಶ್ವರದಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಮಾವಿನ ಫಸಲು
ಅಂತರ ರಾಜ್ಯ ಕಳ್ಳರ ಭೇಟೆ: ₹ 1.15 ಕೋಟಿ ಮೌಲ್ಯ ವಸ್ತು ವಶ