ಪಾರ್ಸೆಲ್‌ವೊಂದನ್ನು ಸ್ವೀಕರಿಸಲು ಮನೆಯ ಸಮೀಪದ ರಸ್ತೆಗೆ ಬಂದಾಗ ನೀರಿನಲ್ಲಿದ್ದ ಸ್ಟೇ ವಯರ್ ಸ್ಪರ್ಶಿಸಿ ಯುವತಿ ಮೃತಪಟ್ಟಿದ್ದಾಳೆ.
ಬೆಳ್ತಂಗಡಿ: ಸ್ಟೇ ವಯರ್‌ನಲ್ಲಿ ವಿದ್ಯುತ್ ಪ್ರವಹಿಸಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃತ ಯುವತಿ. ಪಾರ್ಸೆಲ್‌ವೊಂದನ್ನು ಸ್ವೀಕರಿಸಲು ಮನೆಯ ಸಮೀಪದ ರಸ್ತೆಗೆ ಬಂದಾಗ ನೀರಿನಲ್ಲಿದ್ದ ಸ್ಟೇ ವಯರ್ ಸ್ಪರ್ಶಿಸಿ ಯುವತಿ ಮೃತಪಟ್ಟಿದ್ದಾಳೆ. ಈಕೆ ಕೊಕ್ಕಡ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಯುವತಿಯ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಗೆ ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಭೇಟಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.