ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ: ಬಾಲಕಿ ಸಾವು

KannadaprabhaNewsNetwork |  
Published : Apr 05, 2026, 01:15 AM IST
 ಸಿಕೆಬಿ-8 ಮೃತ ಬಾಲಕಿ ಅಂಕಿತಾ | Kannada Prabha

ಸಾರಾಂಶ

ಮೃತ ಅಂಕಿತಾ ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಹಾಗೂ ಭಾಗ್ಯಮ್ಮ ದಂಪತಿ ಮಗಳು ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಕೊತ್ತನೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ.

ಮೃತ ಅಂಕಿತಾ ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಹಾಗೂ ಭಾಗ್ಯಮ್ಮ ದಂಪತಿ ಮಗಳು ಎಂದು ತಿಳಿದುಬಂದಿದೆ. ಈ ಕುಟುಂಬ ಹೊಸಕೋಟೆಯಲ್ಲಿ ವಾಸವಾಗಿತ್ತು. ಜಾತ್ರೆಗೆ ತೆರಳಿದ್ದ ಭಾಗ್ಯಮ್ಮ ಸಂಬಂಧಿಕ ಮಹೇಶ್ ಎಂಬವರಿಗೆ ಸೇರಿದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ತಾಲೂಕಿನ ಕೊತ್ತನೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಲಾರಿ ಒವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಪಲ್ಟಿಯಾಗಿದೆ. ಈ ವೇಳೆ ಬಾಲಕಿ ಸಾವನ್ನಪ್ಪಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಕೆಬಿ-8 ಮೃತ ಬಾಲಕಿ ಅಂಕಿತಾ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾದಾಪುರ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಮಹಾರಥೋತ್ಸವ
ಅರಸೀಕೆರೆಯಲ್ಲಿ ಯುವಕನ ಮೇಲೆ ಹಲ್ಲೆ ಆರೋಪ