ವಿದ್ಯಾರ್ಥಿನಿಯರು ಅಪರಿಚತರೊಂದಿಗೆ ಎಚ್ಚರಿಕೆಯಿಂದ ಇರಿ: ನ್ಯಾಯಾಧೀಶೆ ಅಕ್ಷತಾ

KannadaprabhaNewsNetwork |  
Published : Aug 03, 2024, 12:30 AM IST
ಹೂವಿನಹಡಗಲಿಯ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಾದ ಟಿ.ಅಕ್ಷತಾ.  | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶದಲ್ಲಿ ಬಾಲಕಿಯರ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿಲ್ಲ.

ಹೂವಿನಹಡಗಲಿ: ವಿದ್ಯಾರ್ಥಿನಿಯರಿಗೆ ಪ್ರೌಢಾವಸ್ಥೆಯಲ್ಲಿ ಆಕರ್ಷಣೆ ಹೆಚ್ಚಾಗಿರುತ್ತದೆ. ಆದರಿಂದ ಅಪರಿಚತರೊಂದಿಗೆ ಬಹಳಷ್ಟು ಎಚ್ಚರಿಕೆಯಿಂದ ಇರಬೇಕೆಂದು ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ಟಿ.ಅಕ್ಷತಾ ಹೇಳಿದರು.

ಇಲ್ಲಿನ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ತಾಲೂಕು ಆಡಳಿತಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಬಾಲಕಿಯರ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿಲ್ಲ. ಆದರೆ ಈ ಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿನಿಯರು, ಅಭ್ಯಾಸ ಮಾಡುತ್ತಿರುವುದು ಬಹಳಷ್ಟು ಖುಷಿ ತಂದಿದೆ. ಮಾನವ ಕಳ್ಳಸಾಗಾಟ ಹಾಗೂ ಪೊಕ್ಸೊ ಕಾಯ್ದೆ ಕುರಿತು ಕಾನೂನು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ವಿದ್ಯಾರ್ಥಿನಿಯರು ಯಾವುದೇ ಕಾರಣಕ್ಕೂ ಅಪರಿಚಿತರೊಂದಿಗೆ ಹೆಚ್ಚು ಸಲುಗೆಯಿಂದ ಇರಬಾರದು. ಅವರು ಹೇಳಿದಂತೆ ಕೇಳುವುದಾಗಲಿ ಮಾಡಬಾರದು, ನೀವು ಬಹಳ ಎಚ್ಚರಿಕೆಯಿಂದ ಇರಬೇಕೆಂದು ಹೇಳಿದರು.

ವಕೀಲ ಎಸ್‌.ಎಂ. ಉಮೇಶ ಮಾತನಾಡಿ, ಅಪ್ರಾಪ್ತ ಮಕ್ಕಳು ಮತ್ತು ಕಿಶೋರಿಯರಿಗೆ ಬಾಲ್ಯ ವಿವಾಹ ಮತ್ತು ಪೊಕ್ಸೊ ಕಾಯ್ದೆ ಕಾನೂನು ಬಗ್ಗೆ ಉಪನ್ಯಾಸ ನೀಡಿದರು.

ವಕೀಲ ಅಟವಾಳಗಿ ಕೊಟ್ರೇಶ, ಮಾನವ ಕಳ್ಳ ಸಾಗಾಣೆ ತಡೆ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.

ತಾಲೂಕ ವಕೀಲರ ಸಂಘದ ಅಧ್ಯಕ್ಷ ಜಿ.ವಸಂತಕುಮಾರ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕಿ ಡಿ.ನಿರ್ಮಲ, ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ವಕೀಲರಾದ ಜ್ಯೋತಿ ಮಲ್ಲಣ್ಣ, ಡಿ.ಸಿದ್ದನಗೌಡ, ಎಸ್‌.ಬಸವರಾಜ, ಎಂ.ಪಿ.ಎಂ.ಪ್ರಸನ್ನಕುಮಾರ, ಎಚ್‌.ಸುಜಾತ, ಮುಖ್ಯ ಶಿಕ್ಷಕ ಬಿ.ವೀರಣ್ಣ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹವಾಮಾನ ವೈಪರೀತ್ಯದಿಂದ ಅರಣ್ಯದ ಮೇಲೆ ಗಂಭೀರ ಪರಿಣಾಮ: ಡಾ. ವಾಸುದೇವ
ಗ್ರಾಮೀಣ ಮಕ್ಕಳಿಗೆ ಶಿಶುವಿಹಾರ ಉಪಯುಕ್ತ: ಪರಿಮಳಾ ಹೂಗಾರ