ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಕೊಡಗು ಜಿಲ್ಲಾ ಹಾಗು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ತೋಳೂರುಶೆಟ್ಟಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ದಿ. ಪಿ.ಎಸ್.ಬೀರಪ್ಪ ದತ್ತಿನಿಧಿ ಕಾರ್ಯಕ್ರಮದಲ್ಲಿ ‘ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸದ ಅವಶ್ಯಕತೆ’ ವಿಷಯದಲ್ಲಿ ಉಪನ್ಯಾಸ ನೀಡಿದರು.
ಶಿಕ್ಷಣ ಮಾನವನ ಬದುಕಿನ ಮೈಲಿಗಲ್ಲು. ಶಿಕ್ಷಣದಿಂದ ಸಂಸ್ಕೃತಿ, ಸಂಸ್ಕಾರ, ಜ್ಞಾನ ಸಂಪಾದಿಸಬಹುದು. ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯುವ ಮೂಲಕ ತಮ್ಮ ಹಕ್ಕನ್ನು ಸ್ಥಾಪಿಸಿಕೊಳ್ಳಬೇಕು ಎಂದರು.ದೇಶದಲ್ಲಿ ಹೊಸಶಿಕ್ಷಣ ನೀತಿ ಜಾರಿಯ ನಂತರ ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರಿಗೆ ಉಚಿತ ಶಿಕ್ಷಣ ದೊರೆಯುತ್ತಿದೆ. ಸರ್ಕಾರ ಸೌಲಭ್ಯಗಳನ್ನು ನೀಡುತ್ತಿದೆ. ಅದನ್ನು ವಿದ್ಯಾರ್ಥಿನಿಯರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಮಾತನಾಡಿ, ಇಂಗ್ಲಿಷ್ ಸೇರಿದಂತೆ ಬೇರೆ ಭಾಷೆಗಳನ್ನು ಕಲಿಯಲೇ ಬೇಕು. ಆದರೆ ಮಾತೃಭಾಷೆ ಕನ್ನಡವನ್ನು ಪ್ರತಿನಿತ್ಯ ಮಾತನಾಡಬೇಕು. ಮಾತೃಭಾಷೆ ಕಡೆಗಣಿಸಿದರೆ, ಹೆತ್ತ ತಾಯಿಯನ್ನು ಕಡೆಗಣಿಸಿದಂತೆ. ವಿದ್ಯಾರ್ಥಿಗಳು ಗ್ರಂಥಾಲಯಗಳಲ್ಲಿ ಕನ್ನಡ ಪುಸ್ತಕಗಳನ್ನು ಹೆಚ್ಚಾಗಿ ಓದಬೇಕು ಎಂದರು.
ಕ.ಸಾ.ಪ.ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ, ಶಾಂತಳ್ಳಿ ಹೋಬಳಿ ಅಧ್ಯಕ್ಷ ಸಿ.ಎಸ್.ನಾಗರಾಜು, ತಾಲೂಕು ಕ.ಸಾ.ಪ ಸ್ಥಾಪಕ ಅಧ್ಯಕ್ಷ ಜೆ.ಸಿ.ಶೇಖರ್, ಪದಾಧಿಕಾರಿಗಳಾದ ಜ್ಯೋತಿ ಅರುಣ್, ಕೆ.ಪಿ.ದಿನೇಶ್, ಜಗದೀಶ್, ಜಮೀರ್, ಸುರೇಶ್ ಇದ್ದರು.