ಎಲ್ಲಾ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳು ತೊಡಗಿಸಿಕೊಳ್ಳಿ

KannadaprabhaNewsNetwork |  
Published : Oct 01, 2025, 01:00 AM IST
್ಿ್ಿ್ಿ್ಿ | Kannada Prabha

ಸಾರಾಂಶ

ಎಲ್ಲ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳು ತೊಡಗಿಸಿಕೊಳ್ಳುವಂತೆ ಮಾಡಲು ಪೋಷಕರು ಸಂಕಲ್ಪ ಮಾಡಬೇಕಿದೆ ಎಂದು ಹಿರಿಯ ರಂಗಕರ್ಮಿ ರಾಜ್ಯಸಭಾ ಮಾಜಿ ಸದಸ್ಯೆ ಬಿ. ಜಯಶ್ರೀ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಎಲ್ಲ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳು ತೊಡಗಿಸಿಕೊಳ್ಳುವಂತೆ ಮಾಡಲು ಪೋಷಕರು ಸಂಕಲ್ಪ ಮಾಡಬೇಕಿದೆ ಎಂದು ಹಿರಿಯ ರಂಗಕರ್ಮಿ ರಾಜ್ಯಸಭಾ ಮಾಜಿ ಸದಸ್ಯೆ ಬಿ. ಜಯಶ್ರೀ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಸಂಜೆ ಆಯೋಜಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ದಸರಾ ಉದ್ಘಾಟಿಸಿ ಮಾತನಾಡಿದರು.ಹಿಂದಿನ ದಿನಗಳಲ್ಲಿ ರಂಗಕಲೆ, ನಾಟಕ ಎಷ್ಟು ಕಷ್ಟಕರವಾಗಿತ್ತು ಎಂಬುದನ್ನು ಮೆಲುಕು ಹಾಕುತ್ತಾ ಎಷ್ಟೋ ಬಾರಿ ನಾಟಕಗಳಿಗೆ ಪ್ರೇಕ್ಷಕರೇ ಇರುತ್ತಿರಲಿಲ್ಲ. ಕೆಲವೊಮ್ಮೆ ಹತ್ತಾರು ಜನರಷ್ಟೇ ಇರುತ್ತಿದ್ದರು. ಆಗಿನ ಕಾಲದಲ್ಲಿ ಹೆಣ್ಣು ಮಕ್ಕಳು ನಾಟಕದಲ್ಲಿ ಅಭಿನಯಿಸುತ್ತಿದ್ದಾರೆಂದರೆ ಅವರನ್ನು ನೋಡುವ ದೃಷ್ಟಿಕೋನವೇ ಬೇರೆ ಇತ್ತು. ಆದರೆ ಈಗ ಕಾಲ ಬದಲಾಗಿದೆ. ಎಲ್ಲ ಕಡೆ ಗೌರವ ಸಿಗುತ್ತಿದೆ. ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಮನೋಭಾವ ಬೇಡ. ಯಾವುದೇ ಕ್ಷೇತ್ರ ಇರಲಿ ಸಾಧನೆ ಮಾಡುವ ಛಲ ಇದ್ದರೆ ಪೋಷಕರು ಅವರನ್ನು ತಡೆಯದೆ ಮುನ್ನುಗ್ಗಲು ಬಿಡಿ, ಹೆಣ್ಣು ಮಕ್ಕಳು ಈಗ ಎಲ್ಲ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಳ್ಳುತ್ತಿದ್ದು ಇದು ಉತ್ತಮ ಬೆಳವಣಿಗೆ ಎಂದರು.ಆಗಿನ ದಿನಗಳಲ್ಲಿ ನಾಟಕ ಕಂಪನಿಗಳನ್ನು ನಡೆಸುವುದು ಎಷ್ಟು ಕಷ್ಟಕರವಾಗಿತ್ತು ಎಂಬುದು ಈಗಿನ ಪೀಳಿಗೆಗೆ ಗೊತ್ತಿಲ್ಲ. ಅಷ್ಟೇ ಏಕೆ ಗುಬ್ಬಿ ವೀರಣ್ಣ ಯಾರು ಎಂಬುದೇ ಬಹಳಷ್ಟು ಜನರಿಗೆ ಗೊತ್ತಿಲ್ಲ. ನಾನು ವೀರಣ್ಣ ಅವರ ಮೊಮ್ಮಗಳಾಗಿ ಇಲ್ಲಿಗೆ ಬಂದಿರುವುದು ನನ್ನ ಪುಣ್ಯ. ತುಮಕೂರಿನ ದಸರಾ ಕಾರ್ಯಕ್ರಮಕ್ಕೆ ಇಷ್ಟೊಂದು ಜನ ಸೇರಿರುವುದನ್ನು ನೋಡಿ ನನಗೆ ಅತ್ಯಂತ ಹೆಮ್ಮೆ ಎನಿಸಿದೆ. ಇಷ್ಟು ಅಚ್ಚುಕಟ್ಟಾಗಿ ಈ ಕಾರ್ಯಕ್ರಮ ನಡೆಸಿರುವ ಜಿಲ್ಲಾಡಳಿತಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ದಸರಾ ಎಂಬುದು ಕೇವಲ ಒಂದು ಹಬ್ಬವಲ್ಲ, ಇದು ಬೆಳಕಿನ ದಾರಿ. ಈ ಆಚರಣೆಯ ಮೂಲಕ ಜನರಲ್ಲಿ ಹೊಸ ಬೆಳಕಿನ ದಾರಿ ತೋರಿಸಬೇಕು. ದಸರಾ ಪ್ರಯುಕ್ತ ಪ್ರತಿದಿನ ಇಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಿಗೆ ಜನತೆ ಸ್ವಯಂ ಪ್ರೇರಿತರಾಗಿ ಆಗಮಿಸುತ್ತಿದ್ದಾರೆ. ಜನ ಖುಷಿ ಪಡುತ್ತಿದ್ದಾರೆ. ಹಿರಿಯ ರಂಗನಟಿ ಜಯಶ್ರೀ ಅವರು ಉದ್ಘಾಟಿಸಿದ್ದು ಹೆಣ್ಣು ಮಕ್ಕಳಿಗೆ ಇವರೆಲ್ಲ ಮಾದರಿಯಾಗಲಿ, ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಉತ್ತೇಜನ ಸಿಗಲಿ ಎಂದು ಆಶಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಮಹಿಳಾ ದಸರಾ ಸಮಿತಿ ಸದಸ್ಯರಾದ ನಾಗರತ್ನ ಶಿವಣ್ಣ, ಸಾ.ಚಿ. ರಾಜಕುಮಾರ್, ದೊಡ್ಡವಲ್ಲಪ್ಪ, ಅಂಜನಮೂರ್ತಿ, ಕುಮುದಾ ಹರೀಶ್, ನಾಗಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಅಂಬಿಕಾ, ನಾಗರಾಜು, ಶಶಿಧರ್ ಇತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ: ಸಿದ್ದರಾಮಣ್ಣ ಸ್ವಾಗತಿಸಿದರು. ಮಹಿಳಾ ಅಭಿವೃದ್ಧಿ ಅಧಿಕಾರಿ ದಿನೇಶ್ ವಂದಿಸಿದರು. ರಾಣಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.

PREV

Recommended Stories

ಇಂದಿನಿಂದ ಮಹಿಳಾ ಏಕದಿನ ವಿಶ್ವಕಪ್‌ : 8 ತಂಡ, 31 ಪಂದ್ಯ
ಅಕ್ರಮ ತಡೆಗೆ ‘ಡಿಜಿಟಲ್‌’ ಭೂಸ್ವಾಧೀನ: ಬೈರೇಗೌಡ