ಹೆಣ್ಣುಮಕ್ಕಳು ಶಿಕ್ಷಣದಿಂದಲೇ ಬದುಕು ಕಟ್ಟಿಕೊಳ್ಳಿ: ಕರ್ಣ

KannadaprabhaNewsNetwork |  
Published : Dec 16, 2025, 01:45 AM IST
14ಕೆಆರ್ ಎಂಎನ್ .6ಜೆಪಿಜಿಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಕಸ್ತೂರಬಾ ಗಾಂಧಿ ಬಾಲಕಿಯರ ಉಚಿತ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಸಮಾಜ ಸೇವಕ ಹಾಗೂ ಬೊಂಬೆನಾಡು  ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ಕರ್ಣ ರವರು ಉಚಿತವಾಗಿ ಬೆಡ್‌ಶೀಟ್‌ಗಳನ್ನು ವಿತರಿಸಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ಸಮಾಜದ ದುರ್ಬಲ ವರ್ಗದ ಹೆಣ್ಣು ಮಕ್ಕಳು ಶಿಕ್ಷಣದ ಮೂಲಕವೇ ಬದುಕಿನಲ್ಲಿ ಬೆಳಕು ಕಾಣಬೇಕು. ಆ ದೃಷ್ಟಿಯಿಂದ ತಾವು ಗಳಿಸಿದ ಹಣದಲ್ಲಿ ಸ್ವಲ್ಪ ಭಾಗವನ್ನು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಅಂತ ನೀಡುತ್ತಿದ್ದೇನೆ ಎಂದು ಸಮಾಜಸೇವಕ ಹಾಗೂ ಬೊಂಬೆನಾಡು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ಕರ್ಣ ಹೇಳಿದರು.

ಚನ್ನಪಟ್ಟಣ: ಸಮಾಜದ ದುರ್ಬಲ ವರ್ಗದ ಹೆಣ್ಣು ಮಕ್ಕಳು ಶಿಕ್ಷಣದ ಮೂಲಕವೇ ಬದುಕಿನಲ್ಲಿ ಬೆಳಕು ಕಾಣಬೇಕು. ಆ ದೃಷ್ಟಿಯಿಂದ ತಾವು ಗಳಿಸಿದ ಹಣದಲ್ಲಿ ಸ್ವಲ್ಪ ಭಾಗವನ್ನು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಅಂತ ನೀಡುತ್ತಿದ್ದೇನೆ ಎಂದು ಸಮಾಜಸೇವಕ ಹಾಗೂ ಬೊಂಬೆನಾಡು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ಕರ್ಣ ಹೇಳಿದರು.

ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಪ್ರಾರಂಭಿಸಿರುವ ಕಸ್ತೂರ ಬಾ ಗಾಂಧಿ ಬಾಲಕಿಯರ ಉಚಿತ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಉಚಿತ ಬೆಡ್‌ಶೀಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ವಸತಿ ನಿಲಯದಲ್ಲಿ ನೆಮ್ಮದಿಯಿಂದ ಉಳಿದುಕೊಂಡು ಓದಿನತ್ತ ಸಂಪೂರ್ಣ ಗಮನಹರಿಸಲಿ ಎಂಬ ಸದುದ್ದೇಶದಿಂದ ಈ ಸಣ್ಣ ಸೇವೆಯನ್ನು ಮಾಡಿದ್ದೇನೆ. ಇಂತಹ ಸೇವೆಯಿಂದ ನನಗೆ ಅಪಾರ ಸಂತೋಷ ಮತ್ತು ತೃಪ್ತಿ ದೊರೆಯುತ್ತದೆ. ಇಲ್ಲಿನ ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣ ಪಡೆದು ಸಮಾಜದ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.

ಮುಖ್ಯ ಶಿಕ್ಷಕ ಯೋಗೇಶ್ ಚಕ್ಕೆರೆ ಮಾತನಾಡಿ, ಅಶಕ್ತರು, ವಲಸೆ ಕಾರ್ಮಿಕರ ಮಕ್ಕಳು ಹಾಗೂ ಅನಾಥ ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಸುರಕ್ಷಿತ ಮತ್ತು ಶಿಸ್ತಿನ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕಸ್ತೂರಬಾ ಗಾಂಧಿ ಬಾಲಿಕಾ ಉಚಿತ ವಸತಿ ನಿಲಯವನ್ನು ಸ್ಥಾಪಿಸಿದೆ. ವಸತಿ ನಿಲಯದಲ್ಲಿ 100 ವಿದ್ಯಾರ್ಥಿನಿಯರಿಗೆ ಪ್ರವೇಶ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ದಾಖಲಾಗಿ ಉಚಿತ ವಸತಿ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು. ಜೊತೆಗೆ ಪಕ್ಕದಲ್ಲಿರುವ ಚಕ್ಕೆರೆ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ದಾಖಲಾಗಿ ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಬಿ.ಕೆ.ಲತಾ, ಪ್ರಥಮ ದರ್ಜೆ ಸಹಾಯಕರಾದ ಶಶಿಕುಮಾರ್, ವಸತಿ ನಿಲಯ ಪಾಲಕರಾದ ರಾಜೇಶ್ವರಿ, ಸುಬ್ಬು ಮತ್ತಿತರರು ಉಪಸ್ಥಿತರಿದ್ದರು.

14ಕೆಆರ್ ಎಂಎನ್ .6ಜೆಪಿಜಿ

ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಪ್ರಾರಂಭಿಸಿರುವ ಕಸ್ತೂರಬಾ ಗಾಂಧಿ ಬಾಲಕಿಯರ ಉಚಿತ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಸಮಾಜ ಸೇವಕ ಹಾಗೂ ಬೊಂಬೆನಾಡು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ಕರ್ಣ ಅವರು ಬೆಡ್‌ಶೀಟ್‌ಗಳನ್ನು ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!