ಬಾಣಂತಿ ಸಾವು ಪ್ರಕರಣದ ಕುರಿತು ವರದಿ ನೀಡಿ

KannadaprabhaNewsNetwork |  
Published : Feb 01, 2025, 12:00 AM IST
ಪೊಟೋ: 31ಎಸ್‌ಎಂಜಿಕೆಪಿ02ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಾಣಂತಿಯ ಸಾವು ಕುರಿತು ಪರಾಮರ್ಶನ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ಬಾಣಂತಿಯರ ಸಾವಿನ ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಇರುವ ಬಗ್ಗೆ ದೂರುಗಳಿದ್ದು, ವಾಸ್ತವ ವರದಿಯನ್ನು ಪಡೆದು ಕೂಡಲೇ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ಬಾಣಂತಿಯರ ಸಾವಿನ ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಇರುವ ಬಗ್ಗೆ ದೂರುಗಳಿದ್ದು, ವಾಸ್ತವ ವರದಿಯನ್ನು ಪಡೆದು ಕೂಡಲೇ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಾಣಂತಿಯ ಸಾವು ಕುರಿತು ಪರಾಮರ್ಶನ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ 2024ರ ಸೆಪ್ಟಂಬರ್‌ನಿಂದ 2025ರ ಜನವರಿ ವರೆಗೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 8 ಪ್ರಕರಣಗಳು ದಾಖಲಾಗಿವೆ. ಬಾಣಂತಿಯರ ಕೆಲವು ಸಾವಿನ ಪ್ರಕರಣಗಳಲ್ಲಿ ಕೊನೆ ಕ್ಷಣದಲ್ಲಿ ನೆರೆಯ ಜಿಲ್ಲೆಗಳಿಂದ ಶಿಫಾರಸ್ಸುಗೊಂಡ ಪ್ರಕರಣಗಳೇ ಆಗಿವೆ. ಆದಾಗ್ಯೂ ವೈದ್ಯರು ಸಕಾಲಿಕವಾಗಿ ಚಿಕಿತ್ಸೆ ನೀಡುವ ಮೂಲಕ ಬಾಣಂತಿಯ ಸಾವಿನ ಪ್ರಕರಣಗಳು ನಡೆಯದಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿ ಮತ್ತು ಅಭಿಜಾತ ಶಿಶುಗಳ ಸಾವು-ನೋವು ನಿಯಂತ್ರಿಸುವಲ್ಲಿ ತಜ್ಞ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ತೋರದೇ ಮಾನವೀಯ ನೆಲೆಯಲ್ಲಿ ಸೇವೆ ಒದಗಿಸಬೇಕು. ಗರ್ಭಿಣಿಯರ ಆರೈಕೆ ನೋಡಿಕೊಳ್ಳುತ್ತಿರುವ ವೈದ್ಯರು ಸಾಂದರ್ಭಿಕ ಸ್ಥಿತಿಗತಿಯ ಬಗ್ಗೆ ಕಾಲಕಾಲಕ್ಕೆ ಸಲಹೆ ನೀಡಬೇಕಲ್ಲದೇ ಅಗತ್ಯವಿದ್ದಾಗ ತಜ್ಞ ವೈದ್ಯರಿಗೆ ಶಿಫಾರಸ್ಸು ಮಾಡಬೇಕು. ಇದರೊಂದಿಗೆ ವೈದ್ಯರು ಶಿಫಾರಸ್ಸು ಮಾಡುವ ವೈದ್ಯರಿಗೆ ಮುಂಚಿತವಾಗಿ ಗರ್ಭಿಣಿಯ ಮಾಹಿತಿಯನ್ನು ನೀಡಿರಬೇಕು. ಜೊತೆಗೆ ಶುಶ್ರೂಷೆ ಯೊಬ್ಬರನ್ನು ಕಳುಹಿಸಿಕೊಡಬೇಕು ಎಂದರು.ರಾಜ್ಯದಾದ್ಯಂತ ಇಂತಹ ಪ್ರಕರಣಗಳು ಅಲ್ಲಲ್ಲಿ ಕೇಳಿಬರುತ್ತಿದ್ದು, ಸರ್ಕಾರವೂ ಸಹ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡು ಬರದಂತೆ, ಸಕಾಲಿಕ ಚಿಕಿತ್ಸೆ ನೀಡುವ ಮೂಲಕ ತಾಯಿ ಮಗುವಿನ ಸುರಕ್ಷತೆಗೆ ವಿಶೇಷ ಕಾಳಜಿ ವಹಿಸುವಂತೆ ಅವರು ವೈದ್ಯರಿಗೆ ಸೂಚಿಸಿದರು.ಸಭೆಯಲ್ಲಿ ಡಿಎಚ್‌ಒ ಡಾ.ನಟರಾಜ್, ಆರ್‌ಸಿಎಚ್‌ ಡಾ.ಮಲ್ಲಪ್ಪ, ಡಾ.ನಾಗರಾಜನಾಯ್ಕ್, ಡಾ.ಸ್ಮೃತಿ, ಡಾ.ಹೇಮಾಮಹೇಶ್ವರಿ ಸೇರಿದಂತೆ ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳಿದ್ದರು.ಸರ್ಕಾರಿ ಆಸ್ಪತ್ರೆಗೆ ಬಡವರೇ ಬರ್‍ತಾರೆ, ಕಾಳಜಿ ವಹಿಸಿಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುವ ಬಹುಸಂಖ್ಯಾತರು ಸಾಮಾನ್ಯ ಕುಟುಂಬದವರಾಗಿರುತ್ತಾರೆ. ಅಂತಹವರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು. ನಿಯಮಾನುಸಾರ ಹಾಗೂ ಅಗತ್ಯವಿದ್ದಲ್ಲಿ ತುರ್ತು ಚಿಕಿತ್ಸೆ ನೀಡುವಲ್ಲಿ ವೈದ್ಯಕೀಯ ಸಿಬ್ಬಂದಿ ಗಮನಹರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು.

ಚಿಕಿತ್ಸೆ ನೀಡುವಲ್ಲಿ ವೈದ್ಯರಿಂದ ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಬೇಕು. ಚಿಕಿತ್ಸೆಗೆ ದಾಖಲಾಗುವ ಪ್ರತಿ ರೋಗಿಯ ಬಗ್ಗೆಯೂ ಇದೇ ಕಾಳಜಿ ವಹಿಸಿ ಸಾವು ನಿಯಂತ್ರಿಸಿ, ಜೀವ ಉಳಿಸಬೇಕೆಂದು ಹೇಳಿದರು.

PREV

Recommended Stories

ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ