ಕನ್ನಡಪ್ರಭ ವರ್ತೆ ಚಾಮರಾಜನಗರಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ದಲಿತ ಕೋಟಾದಡಿ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕೆಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಆರ್.ಮಹದೇವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ನ್ನು ಅವರಲ್ಲಿ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿ.ರಾಚಯ್ಯನವರ ನಂತರ ಯಾವೊಬ್ಬ ದಲಿತ ಶಾಸಕರು ಸಚಿವರಾಗಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಗುರುಗಳಾದ ಬಿ.ರಾಚಯ್ಯನವರ ಪುತ್ರರಾಗಿರುವ ಹಾಗೂ ರಾಚ,ಯ್ಯನವರ ಪತ್ನಿ ಗೌರಮ್ಮನವರ ಆಸೆಯಂತೆ ಎ.ಆರ್. ಕೃಷ್ಣಮೂರ್ತಿ ಅವರನ್ನು ಸಚಿವರನ್ನಾಗಿ ನೇಮಿಸುವಂತೆ ಮನವಿ ಮಾಡಿದರು.ಸ್ಥಳೀಯರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾದರೆ ಜಿಲ್ಲೆಯ ಪ್ರಗತಿಯಾಗುತ್ತದೆ, ಜೊತೆಗೆ ಕೃಷ್ಣಮೂರ್ತಿ ಅನುಭವ ಉಳ್ಳವರಾಗಿದ್ದಾರೆ ಎಂದರು. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ, ಬಿ.ರಾಚಯ್ಯ ಜೋಡಿ ರಸ್ತೆ ಅಭಿವೃದ್ದಿ, ಸ್ವಾಗತ ಕಮಾನು ಮತ್ತು ಭುವನೇಶ್ವರಿ ವೃತ್ತದಲ್ಲಿ ಬಿ.ರಾಚಯ್ಯ ಅವರ ಪುತ್ಥಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.