ಕನ್ನಡಪ್ರಭ ವಾರ್ತೆ ಕಮತಗಿ ವಿದ್ಯಾರ್ಥಿಗಳು ಓದುವುದಕ್ಕೆ ಎಷ್ಟು ಮಹತ್ವ ನೀಡುತ್ತಿರೋ, ಕ್ರೀಡೆಗೂ ಹೆಚ್ಚು ಒತ್ತು ನೀಡುವ ಮೂಲಕ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಹೇಳಿದರು.
ಕನ್ನಡಪ್ರಭ ವಾರ್ತೆ ಕಮತಗಿವಿದ್ಯಾರ್ಥಿಗಳು ಓದುವುದಕ್ಕೆ ಎಷ್ಟು ಮಹತ್ವ ನೀಡುತ್ತಿರೋ, ಕ್ರೀಡೆಗೂ ಹೆಚ್ಚು ಒತ್ತು ನೀಡುವ ಮೂಲಕ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಹೇಳಿದರು.
ಪಟ್ಟಣದಲ್ಲಿನ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಗುರುವಾರ ನಡೆದ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಗ್ರಾಮೀಣ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಮತ್ತು ಬಾಗಲಕೋಟ ವಿಶ್ವವಿದ್ಯಾಲಯ ಜಮಖಂಡಿ ಸಹಯೋಗದಲ್ಲಿ 2026-27ರ ಕಾಲೇಜುಗಳ ಪುರುಷ ಮತ್ತು ಮಹಿಳಾ ಗುಡ್ಡಗಾಡು ಓಟದ ಸ್ಪರ್ಧೆ ಹಾಗೂ ಆಯ್ಕೆ ಪ್ರಕ್ರಿಯೆ-2026 ಕ್ರೀಡಾಕೂಟ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕಾದರೆ ಮೊದಲು ಸಮಯಕ್ಕೆ ಮಹತ್ವ ನೀಡಬೇಕು. ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳ್ಳಬೇಕಾದರೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಉನ್ನತ ಸ್ಥಾನಮಾನಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಅಂತಾರಾಷ್ಟ್ರೀಯ ಕ್ರೀಡಾಪಟು ಮತ್ತು ಹುಬ್ಬಳ್ಳಿ ಎಸ್ಜೆಎಮ್ವಿಎಸ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕಿ ಡಾ.ಮಹೇಶ್ವರಿ ಉದಗಟ್ಟಿ ಮಾತನಾಡಿ, ಕ್ರೀಡೆಗಳಲ್ಲಿ ಗೆಲುವು ಒಂದೇ ಅಂತಿಮವಲ್ಲ. ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಸಾಮರ್ಥ್ಯವನ್ನು ತೋರಿಸುವುದು. ಅಲ್ಲದೆ, ನಿರಂತರ ಅಭ್ಯಾಸದ ಮೂಲಕ ಕ್ರೀಡಾ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದರು.ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹುಚ್ಚೇಶ್ವರ ಮಹಾಸ್ವಾಮಿಜಿ ಸಾನಿಧ್ಯ ವಹಿಸಿದ್ದರು, ಅಧ್ಯಕ್ಷತೆಯನ್ನು ಸಂಸ್ಥೆಯ ಸಹ ಕಾರ್ಯದರ್ಶಿ ವಿ.ಆರ್.ಮಳ್ಳಿ, ಪಪಂ ಅಧ್ಯಕ್ಷ ಬಸವರಾಜ ಕುಂಬಳಾವತಿ, ಉಪಾಧ್ಯಕ್ಷೆ ನೇತ್ರಾವತಿ ನಿಂಬಲಗುಂದಿ, ರಾಜ್ಯ ಖೋ ಖೋ ಸಂಸ್ಥೆಯ ಚೇರಮನ್ ಶಿವಯೋಗಿ ಎಲಿ, ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿಯ ಕ್ರೀಡಾ ಸಂಯೋಜನಾಧಿಕಾರಿ ಡಾ.ಕೆ.ಎಂ.ಶಿರಹಟ್ಟಿ, ಅಮೀನಗಡ ಪೋಲಿಸ್ ಠಾಣೆ ಕ್ರೈಮ್ ವಿಭಾಗದ ಪಿಎಸ್ಐ ವೈ.ಎಚ್.ಪಠಾಣ, ಸಂಘದ ಆಡಳಿತ ಮಂಡಳಿಯ ಸದಸ್ಯರು, ಆಡಳಿತಾಧಿಕಾರಿಗಳು, ಪ್ರಾಚಾರ್ಯ, ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಬಹುಮಾನ ವಿತರಣೆ: ಪುರುಷ ಮತ್ತು ಮಹಿಳಾ ಗುಡ್ಡಗಾಡು ಓಟದ ಸ್ಪರ್ಧೆ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ 6 ವಿದ್ಯಾರ್ಥಿಗಳು ಮತ್ತು 6 ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.