ಮಕ್ಕಳಿಗೆ ಸಮತೋಲನ, ಗುಣಮಟ್ಟದಿಂದ ರುಚಿಕರ ಆಹಾರ ನೀಡಿ: ಈಶ್ವರ್ ಕಾಂದೂ

KannadaprabhaNewsNetwork |  
Published : Oct 16, 2026, 01:30 AM IST
15ಕೆಪಿಆರ್‌ಸಿಆರ್‌ 01:  | Kannada Prabha

ಸಾರಾಂಶ

ಅಡುಗೆ ಕೋಣೆ ಮತ್ತು ಆಹಾರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಸಮತೋಲಿತ ಮತ್ತು ರುಚಿಕರವಾದ ಒಳ್ಳೆಯ ಆಹಾರ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಹೇಳಿದರು

ಕನ್ನಡಪ್ರಭ ವಾರ್ತೆ ರಾಯಚೂರು

ಅಡುಗೆ ಕೋಣೆ ಮತ್ತು ಆಹಾರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಸಮತೋಲಿತ ಮತ್ತು ರುಚಿಕರವಾದ ಒಳ್ಳೆಯ ಆಹಾರ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಹೇಳಿದರು.

ಸ್ಥಳೀಯ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ,ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಕ್ರೈಸ್ ವಸತಿ ಶಾಲೆಯ ಅಧೀನದಲ್ಲಿರುವ ಖಾಯಂ / ಹೊರಸಂಪನ್ಮೂಲ ಡಿ-ಗ್ರೂಪ್ ಸಿಬ್ಬಂದಿಗೆ ಅಡುಗೆ ತಯಾರಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡುವ ಕುರಿತು ಮೂರು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ದಿನಸಿ, ಸೋಪು, ಪೇಸ್ಟ್, ಅಡುಗೆ ಅನಿಲ ಸೇರಿ ಅಗತ್ಯ ಸೌಲಭ್ಯಗಳನ್ನು ನೀಡುತ್ತದೆ. ಸಿಬ್ಬಂದಿ ಶುಚಿ, ರುಚಿಯಾದ ಅಡುಗೆ ತಯಾರಿಸಿ ವಿದ್ಯಾರ್ಥಿಗಳೊಂದಿಗೆ ತಾವು ಅವರ ಪೋಷಕರಂತೆ ಹೊಂದಾಣಿಕೆ ಮಾಡಿಕೊಂಡು ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎಂದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಸುಮಾರು 40ರಷ್ಟಿದ್ದು, ಜಿಲ್ಲೆಯಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯಂತಹ (ಅನೀಮಿಯಾ) ಸಮಸ್ಯೆಗಳು ಇನ್ನು ಉಳಿದಿದ್ದು, ಇವುಗಳನ್ನು ಹೋಗಲಾಡಿಸಲು ಶಿಕ್ಷಣದ ಜೊತೆಗೆ ಶಾಲೆ, ಅಂಗನವಾಡಿ, ವಸತಿ ನಿಲಯ ಹಾಗೂ ವಸತಿ ಶಾಲೆಗಳ ಮೇಲೆ ವಿಶೇಷ ಗಮನಹರಿಸಲಾಗುತ್ತಿದೆ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಆರೋಗ್ಯ ಮತ್ತು ಬೌದ್ಧಿಕ ಬೆಳವಣಿಗೆಯನ್ನು ಕಲ್ಪಿಸುವ ಉದ್ದೇಶದಿಂದ, ಸರ್ಕಾರಿ ಸಂಸ್ಥೆಗಳಾದ ಶಾಲೆ, ಅಂಗನವಾಡಿ ಮತ್ತು ವಸತಿ ಶಾಲೆಗಳಲ್ಲಿ ಬಿಸಿಯೂಟ ಕಾರ್ಯಕ್ರಮವನ್ನು ಅತ್ಯಂತ ಪರೀಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರ ಹಾಗೂ ಡಿಎಚ್‌ಒ ಡಾ.ನಂದಿತಾ ಎಂ.ಎನ್.ಮಾತನಾಡಿದರು. ಇದೇ ವೇಳೆ ಸಂವಿಧಾನ ಪೀಠಿಕೆಯನ್ನು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ ಅವರು ಭೋಧಿಸಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರವಿ ಸೇರಿದಂತೆ ವಿವಿಧ ವಸತಿ ಶಾಲೆಯ ಪ್ರಾಂಶುಪಾಲರು, ನಿಲಯ ಪಾಲಕರು, ಅಡುಗೆ ಸಿಬ್ಬಂದಿಗಳು, ಸಹಾಯಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈಭವದಿಂದ ಜರುಗಿದ ಶ್ರೀರಂಗಪಟ್ಟಣ ದಸರಾ
೧೦೦ ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ