ಕನ್ನಡಪ್ರಭ ವಾರ್ತೆ ವಿಜಯಪುರ
ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ಹಾಗೂ ಕರ್ನಾಟಕ ನಾಡ ರಕ್ಷಣಾ ವೇದಿಕೆ ವಿಜಯಪುರ ವತಿಯಿಂದ ನಗರದಲ್ಲಿ ಜರುಗಿದ ಜ್ಞಾನಸಿರಿ ಸಾಂಸ್ಕ್ರತಿಕ ಕಲರವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಸಾಂಪ್ರದಾಯಿಕ ಶಿಕ್ಷಣದ ಜತೆಗೆ, ನೈತಿಕ ಶಿಕ್ಷಣಕ್ಕೂ ಒತ್ತು ನೀಡಿ. ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವುದರಿಂದ ಆರೋಗ್ಯಕರ ಮತ್ತು ಸದೃಢ ಸಮಾಜ ಕಟ್ಟಲು ಸಾಧ್ಯ. ಆ ಕಾರ್ಯ ಶ್ರೀ ಸಿದ್ಧೇಶ್ವರ ಕೋಚಿಂಗ್ ಕ್ಲಾಸ್ ಮಾಡುತ್ತಿರುವುದು ಸಂತಸ ತಂದಿದೆ ಎಂದರು.
ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್‌ನ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಗ್ರಾಮೀಣ ಮಕ್ಕಳಿಗೆ ದೊರೆಯಲಿ ಎಂಬ ಸದುದ್ದೇಶದಿಂದ ಸ್ಥಾಪಿಸಿರುವ ಈ ಸಂಸ್ಥೆ ಮುಂದಿನ ದಿನಗಳಲ್ಲಿ ಮಕ್ಕಳ ಸಮಗ್ರ ವಿಕಾಸಕ್ಕೆ ಇನ್ನು ಹೆಚ್ಚಿನ ಒತ್ತು ನೀಡಲಿದೆ. ಪಾಲಕರು ಮಕ್ಕಳ ಭವಿಷ್ಯದ ಕುರಿತು ರಾಜಿ ಮಾಡಿಕೊಳ್ಳದೆ ನಮ್ಮ ಸಂಸ್ಥೆಯಲ್ಲಿ ಶಿಕ್ಷಣ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಪಾಲಕರ ನಿರೀಕ್ಷೆಗೆ ತಕ್ಕ ಮೌಲ್ಯಯುತ ಶಿಕ್ಷಣವನ್ನು ನಮ್ಮ ಶಿಕ್ಷಣ ಸಂಸ್ಥೆ ನೀಡಲಿದೆ ಎಂದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅನೇಕ ಸಾಧಕರಿಗೆ ರಾಷ್ಟ್ರೀಯ ಜ್ಞಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಶಿಕ್ಷಕ ಆನಂದ ಕಂಬಾರ ಕಾರ್ಯಕ್ರಮ ನಿರ್ವಹಿಸಿದರು. ನೀಲಗುಂದದ ಡಾ.ಮಂಜುನಾಥ ಪೂಜ್ಯರು, ಸಂತೋಷ ಹಿರೇಮಠ ಸಾನಿಧ್ಯ ವಹಿಸಿದ್ದರು. ಮುಖಂಡರಾದ ರಾಘವ ಅಣ್ಣಿಗೇರಿ, ಮಹ್ಮದಗೌಸ್ ಹವಾಲ್ದಾರ, ಗಿರೀಶ ಇಟ್ಟಂಗಿ, ನಂದು ಗಡಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ನಿರ್ಮಲಾ ಸುರಪುರ, ಬಿಎಲ್‌ಡಿಇ ಸಂಸ್ಥೆಯ ವಿಶ್ರಾಂತ ಪ್ರಾಚಾರ್ಯ ಎಸ್.ಎಂ.ಯರನಾಳ, ಡಾ.ಅಮರ ತಾಹಿರಾ ಗಡೆಕರ, ಚಡಚಣ ತಾಪಂ ಅಧಿಕಾರಿ ಸಂಜಯ ಖಡಗೇಕರ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಡಿ.ಜಿ.ಬಿರಾದಾರ, ಗಡ್ಡೆಪ್ಪ ನಾಟೀಕಾರ, ಮಧು ಬಿರಾದಾರ, ನೀಲಾ ಜತ್ತಿ, ಸಂಸ್ಥೆಯ ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.