ಕನ್ನಡಪ್ರಭ ವಾರ್ತೆ ಕಮತಗಿ
ಪಟ್ಟಣದ ಹೊರವಲಯದಲ್ಲಿನ ಶುಭೋದಯ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಾತೋಶ್ರೀ ಬಂದವ್ಬ ವೀರಪ್ಪ ಕಡ್ಲಿಮಟ್ಟಿ ಎಜ್ಯುಕೇಶನ್ ಮತ್ತು ರೂರಲ್ ಸೋಸಿಯಲ್ ವೆಲ್‌ಫೇರ್ ಟ್ರಸ್ಟ್‌ನ ಶುಭೋದಯ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 8ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಅವರ ಆರೋಗ್ಯದ ಮೇಲೆ ನಿಗಾವಹಿಸಬೇಕು. ಏಕೆಂದರೆ ಆರೋಗ್ಯವಂತ ಮಕ್ಕಳು ಹಾಗೂ ಯುವಜನರು ದೇಶದ ಸಂಪತ್ತು, ಮಕ್ಕಳು ಆರೋಗ್ಯವಾಗಿದ್ದಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಉತ್ಸುಕರಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ, ಗ್ರಾಮೀಣ ಭಾಗದಲ್ಲಿ ಶುಭೋದಯ ಆಂಗ್ಲ ಮಾಧ್ಯಮ ಶಾಲೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಹೆಚ್ಚು ಪ್ರಸಿದ್ಧಿ ಪಡೆದಿದ್ದು, ಮುಂದಿನ ದಿನಗಳಲ್ಲಿ ಪಿಯುಸಿ, ಡಿಪ್ಲೊಮಾ ಕೋರ್ಸ್ ಪ್ರಾರಂಭಿಸಿದರೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಬಹಳಷ್ಟು ಅನಕೂಲವಾಗುತ್ತದೆ ಎಂದರು.ಶಿಕ್ಷಣ ಸಂಯೋಜಕ ಪಿ.ಎಸ್. ಚವ್ಹಾಣ ಮುಖ್ಯ ಅತಿಥಿಗಳಾಗಿ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಖ್ಯ ವೇದಿಕೆ ಕಲ್ಪಿಸಿಕೊಟ್ಟರೆ ಅವರಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಸಾಧ್ಯವಾಗುತ್ತದೆ ಎಂದರು.