ಸಿರುಗುಪ್ಪ ಅಭಿವೃದ್ಧಿಗೆ ಪೂರಕ ಸಲಹೆ ನೀಡಿ: ಶಾಸಕ ನಾಗರಾಜ

KannadaprabhaNewsNetwork |  
Published : Jan 28, 2026, 03:15 AM IST
ಸಿರುಗುಪ್ಪ ನಗರದ ತಾಲೂಕು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಶಾಸಕ ಬಿ ಎಮ್ ನಾಗರಾಜ್ ನೆರವೇರಿಸಿದರು. | Kannada Prabha

ಸಾರಾಂಶ

ರಿದು ಹಂಚಿಹೋಗಿದ್ದ ದೇಶವನ್ನು ಅಖಂಡ ಭಾರತವಾಗಿಸಲು ಶ್ರಮಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಶ್ರೇಷ್ಠ ಸಂವಿಧಾನ ರಚಿಸಿ ಕೊಟ್ಟ ಡಾ. ಬಿ.ಆರ್. ಅಂಬೇಡ್ಕರ್ ಸದಾ ಸ್ಮರಣೀಯರು

ಸಿರುಗುಪ್ಪ: ನಮ್ಮ ಸರ್ಕಾರದ ಸಂಪೂರ್ಣ ಕಾಮಗಾರಿಗಳು, ನಮ್ಮ ಕ್ಷೇತ್ರಕ್ಕೆ ತಂದಿರುವ ಅನುದಾನದ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ತಿಳಿದುಕೊಳ್ಳಬಹುದು. ತಾಲೂಕಿನ ಎಲ್ಲ ನಾಗರಿಕರು ಸಿರುಗುಪ್ಪ ಅಭಿವೃದ್ಧಿಗೆ ಪೂರಕವಾಗುವ ಮಾಹಿತಿ, ಸಲಹೆ, ಸೂಚನೆಗಳನ್ನು ನೀಡಿಬೇಕೆಂದು ಶಾಸಕ ಬಿ.ಎಂ. ನಾಗರಾಜ್ ಮನವಿ ಮಾಡಿದರು.ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣೆಯ ಸಮಿತಿಯಿಂದ ಸೋಮವಾರ ನಡೆದ 77ನೇ ಗಣರಾಜೋತ್ಸವ ದಿನಾಚರಣೆಯಲ್ಲಿ ಧ್ವಜಾಹಾರೋಣ ನೇರವೆರಿಸಿ ಮಾತನಾಡಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಈ ಭಾರಿ ಸಿರುಗುಪ್ಪ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆಯಲು ಶಿಕ್ಷಕರು ಶ್ರಮಿಸಬೇಕೆಂದರು.

ತಹಸಿಲ್ದಾರ್ ಗೌಸಿಯಾಬೇಗಂ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರು, ಹರಿದು ಹಂಚಿಹೋಗಿದ್ದ ದೇಶವನ್ನು ಅಖಂಡ ಭಾರತವಾಗಿಸಲು ಶ್ರಮಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಶ್ರೇಷ್ಠ ಸಂವಿಧಾನ ರಚಿಸಿ ಕೊಟ್ಟ ಡಾ. ಬಿ.ಆರ್. ಅಂಬೇಡ್ಕರ್ ಸದಾ ಸ್ಮರಣೀಯರು ಎಂದು ಹೇಳಿದರು.

ಶಾಸಕ ಬಿ.ಎಂ. ನಾಗರಾಜ, ತಹಶೀಲ್ದಾರ್ ಗೌಸಿಯಾಬೇಗಂ, ಡಿವೈಎಸ್ಪಿ ಮಲತೇಶ ಕೋನಬೇವು ತೆರೆದ ವಾಹನದಲ್ಲಿ ವಿವಿಧ ಶಾಲಾ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು.

ದೇಶಕ್ಕೆ ಸಂವಿಧಾನವನ್ನು ಸಮರ್ಪಿಸಿಕೊಂಡ ದಿನವಾದ ಗಣ ರಾಜ್ಯೋತ್ಸವವನ್ನು ನಗರದ ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು. ಬಾನೆತ್ತರದಲ್ಲಿ ಹಾರುತ್ತಿದ್ದ ತ್ರಿವರ್ಣ ಧ್ವಜ ಮತ್ತು ರಾಷ್ಟ್ರಗೀತೆಯು ಎಲ್ಲೆಡೆ ದೇಶಭಕ್ತಿಯನ್ನು ಉಕ್ಕಿಸಿತು.

ಕ್ರೀಡಾಂಗಣದಲ್ಲಿ ತ್ರಿವರ್ಣ ಧ್ವಜ ಕಂಗೊಳಿಸುತ್ತಿತ್ತು. ವರ್ಣರಂಜಿತ ವೈವಿಧ್ಯಮಯ ಧಿರಿಸಿನಲ್ಲಿ ಶಾಲಾ ವಿದ್ಯಾರ್ಥಿಗಳು ನೀಡಿದ ಸಾಂಸ್ಕೃತಿಕ ಕಾರ್ಯಕ್ರಮ ಅಲ್ಲಿದ್ದವರನ್ನು ಪರವಶಗೊಳಿಸಿದವು ವಿವಿಧ ಶಾಲೆಗಳು ಹಾಗೂ ಸೇವಾದಳ ತಂಡದ ಶಿಸ್ತಿನ ಪಥ ಸಂಚಲನ ಗಮನ ಸೆಳೆಯಿತು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ತಂಡದಿಂದ ದೇಶಭಕ್ತಿಗಳಿಗೆ ನೃತ್ಯ ಪ್ರದರ್ಶಿಸಿದರು. ನೃತ್ಯಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹಿಸಿದರು.

ಗಣರಾಜೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಪಥಸಂಚನದಲ್ಲಿ ಭಾಗವಹಿಸಿದ ವಿದ್ಯಾರ್ಥಿ ತಂಡಗಳಿಗೆ ಪ್ರಶಸ್ತಿ ಪತ್ರ ನೀಡಿದರು.

ನಗರಸಭೆ ಪೌರಾಯುಕ್ತ ಗಂಗಾಧರ, ತಾಪಂ ಇಒ ಪವನಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಗುರಪ್ಪ, ಜಿಪಂ ಉಪವಿಭಾಗ ಎಇಇ ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಡ್ಡೆರು ಸಿದ್ದಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಬಿ.ರಮೇಶ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ
ಕೇಂದ್ರ ಸರ್ಕಾರದ ಸಾಧನೆ ತಿಳಿ ಹೇಳಿ