ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಿ

KannadaprabhaNewsNetwork |  
Published : Dec 10, 2025, 02:15 AM IST
ಫೋಟೋ 9ಎಚ್‌ಎಸ್‌ಡಿ5 : ಯಾದವ ಜನಾಂಗದ ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡುವಂತೆ ಶ್ರೀಕೃಷ್ಣ ಯಾದವಾನಂದಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. | Kannada Prabha

ಸಾರಾಂಶ

ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಬೇಕು ಎಂದು ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ಕಾಂಗ್ರೆಸ್ ನಾಯಕರುಗಳನ್ನು ಒತ್ತಾಯಿಸಿದರು.

ಚಿತ್ರದುರ್ಗ: ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಬೇಕು ಎಂದು ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ಕಾಂಗ್ರೆಸ್ ನಾಯಕರುಗಳನ್ನು ಒತ್ತಾಯಿಸಿದರು.

ಹೊಳಲ್ಕೆರೆ ರಸ್ತೆಯಲ್ಲಿರುವ ಯಾದವ ಮಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಪ್ರತಿಯೊಂದು ಜನಾಂಗಕ್ಕೂ ರಾಜಕೀಯ ಪ್ರಾತಿನಿಧ್ಯ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾದವ ಜನಾಂಗದ ಡಿ.ಟಿ.ಶ್ರೀನಿವಾಸ್‌ಗೆ ಮಂತ್ರಿ ಸ್ಥಾನ ಕೊಟ್ಟರೆ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು.ಜಯಮ್ಮ ಬಾಲರಾಜ್‌ರವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸಲಾಗಿತ್ತು. ಅದರಂತೆ ಈ ಬಾರಿಯೂ ನಮ್ಮ ಜನಾಂಗಕ್ಕೆ ಅವಕಾಶ ಕಲ್ಪಿಸಬೇಕು. ಬೆಳಗಾವಿಯ ಅಧಿವೇಶನ ಮುಗಿದ ನಂತರ ಸಿಎಂ ಬಳಿ ಜನಾಂಗದಿಂದ ನಿಯೋಗ ಹೋಗುತ್ತೇವೆಂದು ತಿಳಿಸಿದರು.ಯಾದವ ಸಮಾಜದ ಮುಖಂಡ ಕೆ.ಎಂ.ಹಾಲಸ್ವಾಮಿ ಮಾತನಾಡಿ, ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಿ ನಮ್ಮ ಜನಾಂಗಕ್ಕೆ ಆಗಿರುವ ವಂಚನೆಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸಬೇಕು. 2008ರಲ್ಲಿ ಚಿತ್ರದುರ್ಗದಲ್ಲಿ ನಡೆದ ಸಮಾವೇಶಕ್ಕೆ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿರವರನ್ನು ಬಿಟ್ಟು ಅಹಿಂದ ನಾಯಕ ಸಿದ್ದರಾಮಯ್ಯನವರನ್ನು ಕರೆಸಿದ್ದೆವು. 2013ರಲ್ಲಿ ನಮ್ಮ ಜನಾಂಗದ ಎ.ಕೃಷ್ಣಪ್ಪನವರಿಗೆ ಟಿಕೇಟ್ ತಪ್ಪಿತ್ತು. ಹಾಗಾಗಿ ಈಗ ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಿ ಯಾದವ ಜನಾಂಗಕ್ಕೆ ಸಾಮಾಜಿಕ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.ನಗರಸಭೆ ಮಾಜಿ ಅಧ್ಯಕ್ಷ ಗೊಲ್ಲ ಸಮಾಜದ ಮುಖಂಡ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ, ಸಣ್ಣ ಸಣ್ಣ ಜಾತಿಯವರನ್ನು ಎಂಎಲ್‌ಸಿ ಮಾಡಿ ಮಂತ್ರಿ ಸ್ಥಾನ ನೀಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ಕೊಡಬೇಕು. 25 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿರುವ ಯಾದವ ಸಮಾಜವನ್ನು ಕಡೆಗಣಿಸದೆ ಪ್ರಾತಿನಿಧ್ಯ ಕೊಡಬೇಕೆಂದು ಕಾಂಗ್ರೆಸ್ ನಾಯಕರುಗಳನ್ನು ಆಗ್ರಹಿಸಿದರು.ಯಾದವ ಸಮಾಜದ ಮುಖಂಡರಾದ ಭೀಮಸಮುದ್ರದ ಸಿದ್ದಪ್ಪ, ರೇವಣಸಿದ್ದಪ್ಪ ಸೇರಿದಂತೆ ಇನ್ನು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!
24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು : ಸಿದ್ದರಾಮಯ್ಯ