ಜಮೀರ್ ಅಹ್ಮದ್ ಖಾನ್‌ಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಿ

KannadaprabhaNewsNetwork |  
Published : Jun 14, 2026, 01:30 AM IST
ಜಮೀರ್ ಅಹ್ಮದ್ ಖಾನ್‌ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಅರಸೀಕೆರೆಯಲ್ಲಿ ಪಂಜಿನ ಮೆರವಣಿಗೆ | Kannada Prabha

ಸಾರಾಂಶ

ರಾಜ್ಯ ರಾಜಕೀಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರೆಂದು ಗುರುತಿಸಿಕೊಂಡಿರುವ ಮಾಜಿ ಸಚಿವ ಜಮೀರ್‌ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಹಾಗೂ ಅಭಿಮಾನಿಗಳ ಒಕ್ಕೂಟದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ನಗರದ ಹುಳಿಯಾರ್‌ ರಸ್ತೆಯ ಜಾಮಿಯಾ ಮಸೀದಿ ಸಮೀಪದ ಶಾದಿ ಮಹಲ್ ಮುಂಭಾಗದಿಂದ ಆರಂಭವಾದ ಮೆರವಣಿಗೆಯಲ್ಲಿ ನೂರಾರು ಯುವಕರು ಮತ್ತು ಮುಖಂಡರು ಭಾಗವಹಿಸಿ, ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗಮನ ಸೆಳೆಯಿತು.

ಅರಸೀಕೆರೆ: ರಾಜ್ಯ ರಾಜಕೀಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರೆಂದು ಗುರುತಿಸಿಕೊಂಡಿರುವ ಮಾಜಿ ಸಚಿವ ಜಮೀರ್‌ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಹಾಗೂ ಅಭಿಮಾನಿಗಳ ಒಕ್ಕೂಟದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.ನಗರದ ಹುಳಿಯಾರ್‌ ರಸ್ತೆಯ ಜಾಮಿಯಾ ಮಸೀದಿ ಸಮೀಪದ ಶಾದಿ ಮಹಲ್ ಮುಂಭಾಗದಿಂದ ಆರಂಭವಾದ ಮೆರವಣಿಗೆಯಲ್ಲಿ ನೂರಾರು ಯುವಕರು ಮತ್ತು ಮುಖಂಡರು ಭಾಗವಹಿಸಿ, ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗಮನ ಸೆಳೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜೆಸಿ ಆಸ್ಪತ್ರೆ ರಕ್ಷಾ ಸಮಿತಿ ಸದಸ್ಯ ಖಾನ್ ಸಾಬ್, ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ರಾಜ್ಯದಾದ್ಯಂತ ವ್ಯಾಪಕ ಪ್ರವಾಸ ನಡೆಸಿ ಅಲ್ಪಸಂಖ್ಯಾತ ಸಮುದಾಯವನ್ನು ಪಕ್ಷದ ಪರ ಸಂಘಟಿಸುವಲ್ಲಿ ಜಮೀರ್ ಅಹ್ಮದ್ ಖಾನ್ ಮಹತ್ವದ ಪಾತ್ರ ವಹಿಸಿದ್ದಾರೆ. ಪಕ್ಷದ ಸಂಘಟನೆ ಹಾಗೂ ಚುನಾವಣಾ ಯಶಸ್ಸಿಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಉನ್ನತ ಸ್ಥಾನಮಾನ ನೀಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು.ಜಿಟಿಎಸ್ ಗೌಸ್ ಖಾನ್ ಮಾತನಾಡಿ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಜಮೀರ್‌ ಅಹ್ಮದ್ ಖಾನ್ ಅವರ ಹೆಸರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ರಾಜ್ಯದ ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಈಡೇರದಿರುವುದು ಸಮುದಾಯದಲ್ಲಿ ನಿರಾಸೆ ಮೂಡಿಸಿದೆ ಎಂದು ಹೇಳಿದರು.ಅಖಿಲ ಕರ್ನಾಟಕ ಜಮೀರ್ ಅಹ್ಮದ್ ಅಭಿಮಾನಿ ಬಳಗಗಳ ಒಕ್ಕೂಟದ ಅಧ್ಯಕ್ಷ ಶಿರಾಜ್ ಅಲಿ ಬೇಗ್ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಅವರು ಸರ್ವಧರ್ಮ ಸಮಭಾವ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಪ್ರತಿಪಾದಿಸುತ್ತಾ ಜನಪರ ರಾಜಕಾರಣ ನಡೆಸುತ್ತಿದ್ದಾರೆ. ರಾಜ್ಯದ ಅಲ್ಪಸಂಖ್ಯಾತರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.ಸಚಿವ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ ಎಂಬ ವಿಶ್ವಾಸ ಸಮಾಜದ ಜನರಲ್ಲಿ ಇದ್ದು, ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕತ್ವ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಮುಖಂಡರು ಆಗ್ರಹಿಸಿದರು.ಮೆರವಣಿಗೆಯಲ್ಲಿ ಜಾಮಿಯಾ ಮಸೀದಿ ಸಮಿತಿಯ ಸದಸ್ಯರು, ಅಫ್ರೋಜ್, ಬಾಬು, ಸದ್ದಾಂ, ಮನ್ಸೂರ್‌, ಅಪ್ಸರ್‌, ಸಿದ್ದೀಕಿ, ಸುಹೇಲ್, ವಸೀಂ, ಅನ್ಸರ್‌, ಸರ್ವರ್‌, ಸರ್ದಾರ್‌, ಬಬ್ಲು, ಇಮ್ರಾನ್, ಇಂತಿಯಾಜ್, ಬಿಲಾಲ್, ನಬಿ ಅಝರತ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಯುವಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

17ರಂದು ಡಾ.ಶಾಮನೂರು ಜನ್ಮದಿನ, ಸಾಮೂಹಿಕ ವಿವಾಹ
53 ಅತಿಥಿ ಶಿಕ್ಷಕರ ನಿಯೋಜನೆಗೆ ಕ್ರಮ: ಶಾಂತನಗೌಡ