ಕನ್ನಡಪ್ರಭ ವಾರ್ತೆ ಸಿಂಧನೂರು
ಸ್ಥಳೀಯ ತಾಪಂ ಸಭಾಂಗಣದಲ್ಲಿ ಶನಿವಾರ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸಲು ಕರೆದಿದ್ದ ಸಭೆ ಪ್ರಾರಂಭವಾಗುತ್ತಿದ್ದಂತೆ ಎಲ್ಲ ಗ್ರಾಪಂಗಳ ಪಿಡಿಒಗಳಿಂದ ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆರೆ, ಬೋರ್ವೆಲ್ ಮತ್ತು ನದಿ ಪಾತ್ರದ ಗ್ರಾಮಗಳ ನೀರಿನ ಪರಿಸ್ಥಿತಿ ಬಗ್ಗೆ ಶಾಸಕರು ಮಾಹಿತಿ ಪಡೆದುಕೊಂಡರು.ತಾಲೂಕು ವ್ಯಾಪ್ತಿಯಲ್ಲಿ 139 ಕೆರೆಗಳಿದ್ದು, ಸದ್ಯ ಸಂಗ್ರಹವಿರುವ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ಮಾಡಿಸಬೇಕು. ಒಂದು ವೇಳೆ ಕುಡಿಯಲು ಯೋಗ್ಯವಿಲ್ಲವೆಂದು ವರದಿ ಬಂದರೆ ಅವುಗಳನ್ನು ಸಂಪೂರ್ಣ ಖಾಲಿ ಮಾಡಿ, ಸ್ವಚ್ಛಗೊಳಿಸಿ ಮಾ.೫ ರಿಂದ ಕಾಲುವೆಗೆ ಬರುವ ನೀರನ್ನು ತುಂಬಿಸಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಯೊಂದು ಗ್ರಾಪಂ ಪಿಡಿಒಗಳಿಂದ ಕುಡಿಯುವ ನೀರಿನ ವರದಿ ಕೇಳಿದ ಶಾಸಕರಿಗೆ, ಗೊರೇಬಾಳ, ರಾಗಲಪರ್ವಿ, ಉದ್ಬಾಳ, ಬಸಾಪುರ, ಹೊಸಳ್ಳಿ ಇ.ಜೆ, ಜವಳಗೇರಾ ಮತ್ತಿತರ ಗ್ರಾಮ ಪಂಚಾಯಿತಿಗಳ ಪಿಡಿಒಗಳು ತಮ್ಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಹಾಗೂ ಕ್ಯಾಂಪಿನ ಕೆರೆಗಳಲ್ಲಿ ನೀರು ಖಾಲಿ ಆಗಿವೆ. ಕೆಲವೊಂದು ಕೆರೆಯಲ್ಲಿ ಶೇ.೧೦, ೨೦, ೩೦ರಷ್ಟು ನೀರು ಇದೆಯೆಂದು ಹೇಳಿದ್ದರಿಂದ ಕೋಪಗೊಂಡ ಹಂಪನಗೌಡರು ‘ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡುವಂತೆ ಕೆರೆ ಖಾಲಿ ಆಗುವವರೆಗೂ ನಿದ್ದೆ ಮಾಡುತ್ತಿದ್ದೀರಾ’ ಎಂದು ತರಾಟೆಗೆ ತೆಗೆದುಕೊಂಡರು.
ತಹಸೀಲ್ದಾರ್ ಅರುಣ್ ಎಚ್.ದೇಸಾಯಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಪಂಚಾಯತ್‌ರಾಜ್ ಗ್ರಾಮೀಣ ಕುಡಿಯುವ ನೀರು ಯೋಜನೆಯ ಸಹಾಯಕ ಕಾರ್ಯಪಾಲಕ ಎಂಜನಿಯರ್ ಶಿವಪ್ಪ ಐಹೊಳೆ, ತಾಪಂ ಸಹಾಯಕ ನಿರ್ದೇಶಕ ಅಮರಗುಂಡಪ್ಪ ಇದ್ದರು.