7ನೇ ವೇತನ ಆಯೋಗ ಅನುಸಾರ ನಿವೃತ್ತರಿಗೆ ಆರ್ಥಿಕ ಸೌಲಭ್ಯ ನೀಡಿ: ನಿವೃತ್ತ ನೌಕರರ ಪ್ರತಿಭಟನೆ

KannadaprabhaNewsNetwork |  
Published : Oct 02, 2024, 01:02 AM IST
ಪೊಟೋ: 1ಎಸ್‌ಎಂಜಿಕೆಪಿ04ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ನಿವೃತ್ತರಾದವರಿಗೆ 7ನೇ ವೇತನದ ಆಯೋಗದ ಲೆಕ್ಕಾಚಾರದ ಅನುಸಾರ ಆರ್ಥಿಕ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ನಿವೃತ್ತರಾದವರಿಗೆ 7ನೇ ವೇತನದ ಆಯೋಗದ ಲೆಕ್ಕಾಚಾರದ ಅನುಸಾರ ಆರ್ಥಿಕ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನಿವೃತ್ತರಾದವರಿಗೆ 7ನೇ ವೇತನದ ಆಯೋಗದ ಲೆಕ್ಕಾಚಾರದ ಅನುಸಾರ ಆರ್ಥಿಕ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

2022 ಜುಲೈ 1ರಿಂದ ಜು.31 2024ರ ಅವಧಿಯಲ್ಲಿ ನಾವುಗಳು ನಿವೃತ್ತರಾಗಿದ್ದು, ನಮಗೆ 6ನೇ ವೇತನ ಆಯೋಗದ ಲೆಕ್ಕಾಚಾರದ ಅನುಸಾರ ಡಿ.ಸಿ. ಆರ್.ಜಿ. ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ನೀಡಿದ್ದು, 7ನೇ ವೇತನ ಆಯೋಗದಲ್ಲಿ ಆರ್ಥಿಕ ಸೌಲಭ್ಯ ಸಿಗದೆ ಅನ್ಯಾಯವಾಗಿದೆ ಎಂದು ಧರಣಿ ನಿರತರು ಆರೋಪಿಸಿದರು.

7ನೇ ವೇತನದ ಆಯೋಗದಲ್ಲಿ ಆಗಿರುವ ಸುಮಾರು 2 ರಿಂದ 22 ಲಕ್ಷ ರು. ನಷ್ಟವುಂಟಾಗಿ ಅನ್ಯಾಯಕ್ಕೆ ಒಳಗಾಗಿರುವ ನಾವುಗಳು ರಾಜ್ಯದ ಕಾರ್ಯಾಂಗದಲ್ಲಿ 7.50 ಲಕ್ಷ ನೌಕರರಲ್ಲಿ 1.50 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ 30 ರಿಂದ 40 ವರ್ಷ ಸುದೀರ್ಘ ಸೇವೆ ಸಲ್ಲಿಸಿದ ನಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು. ಧರಣಿ ಸತ್ಯಾಗ್ರಹದಲ್ಲಿ ಜಿಲ್ಲಾ ಸಂಚಾಲಕರಾದ ನಾಗಪ್ಪ, ಕೆ.ಕೃಷ್ಣ ಮೂರ್ತಿ, ಅಶೋಕ್ ಎಂ.ಸಜ್ಜನ್, ಎಚ್. ಪರಮೇಶ್ವರಪ್ಪ, ಷಣ್ಮುಖಪ್ಪ, ವಜೀರ್‌ಅಹಮ್ಮದ್, ಸುರೇಂದ್ರ ಪಾ ಟೀಲ್, ಎಂ.ಎನ್.ಸುರೇಶಪ್ಪ, ಗಜೇಂದ್ರಪ್ಪ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ