ವಿಶೇಷ ಚೇತನರಿಗೆ ಮೊದಲ ಆದ್ಯತೆ ನೀಡಿ

KannadaprabhaNewsNetwork |  
Published : Dec 23, 2023, 01:45 AM IST
ಫೋಟೊ ಶೀರ್ಷಿಕೆ: 22ಆರ್‌ಎನ್‌ಆರ್3ರಾಣಿಬೆನ್ನೂರು ನಗರದ ತಾಪಂ ಸಭಾಭವನದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ನ್ಯಾಯಾಧೀಶೆ ಅನಿತಾ ಒ.ಎ. ಉದ್ಘಾಟಿಸಿದರು.  | Kannada Prabha

ಸಾರಾಂಶ

ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ವಿಶೇಷಚೇತನರಿಗೆ ಸರ್ಕಾರಿ ಕಚೇರಿಗಳಲ್ಲಿ ಬಂದಾಗ ಮೊದಲ ಆದ್ಯತೆ ನೀಡಬೇಕು. ಅವರಿಗೆ ಮೊದಲು ಅವಕಾಶ ಕಲ್ಪಿಸಿ ಕಾರ್ಯನಿರ್ವಹಣೆ ಮಾಡಬೇಕು

ರಾಣಿಬೆನ್ನೂರು: ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ವಿಶೇಷಚೇತನರಿಗೆ ಸರ್ಕಾರಿ ಕಚೇರಿಗಳಲ್ಲಿ ಬಂದಾಗ ಮೊದಲ ಆದ್ಯತೆ ನೀಡಬೇಕು. ಅವರಿಗೆ ಮೊದಲು ಅವಕಾಶ ಕಲ್ಪಿಸಿ ಕಾರ್ಯನಿರ್ವಹಣೆ ಮಾಡಬೇಕು ಎಂದು ನ್ಯಾಯಾಧೀಶೆ ಅನಿತಾ ಒ.ಎ. ಹೇಳಿದರು.

ನಗರದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಹಾಗೂ ತಾಪಂ ವತಿಯಿಂದ ಅಂತಾರಾಷ್ಟ್ರೀಯ ಅಂಗವಿಕಲರ ದಿನಾಚರಣೆಯ ನಿಮಿತ್ತ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನ್ಯಾಯವಾದಿ ನಂದಿನಿ ಜೋಶಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಬಿ.ಎಚ್. ಬುರುಡಿಕಟ್ಟಿ, ಕಾರ್ಯದರ್ಶಿ ಎನ್.ಎಂ. ಡಂಬೂರ, ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಕದರಮಂಡಲಗಿ, ಸಂಗೀತಾ ಕೆ.ಕೆ., ತಾಪಂ ನಿರ್ದೇಶಕಿ ಡಿ.ಡಿ. ಗೊಂದಿ, ಪರಶುರಾಮ ಪೂಜಾರ, ತಿಪ್ಪೇಶ ಗಾಡಿ, ರಾಜು ಹಂಗರಗಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಿಸರಕ್ಕೆ ವಿಷ ಉಣಿಸುತ್ತಿವೆ ಗ್ರಾಪಂಗಳು
ಮಗಳ ಎಸ್ಸೆಸ್ಸೆಲ್ಸಿ ಪುಸ್ತಕಗಳ ಸುಟ್ಟುಹಾಕಿದ ಕುಡುಕ ತಂದೆ!