ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಶಕಗಳಿಂದ ಬೆಳಗಾವಿ ನಗರದದಿಂದ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇದೆ. ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅಸೀಫ್ ಸೇಠ್ ಜಾತಿ ಧರ್ಮಗಳನ್ನು ಲೆಕ್ಕಿಸದೆ, ಬಡ ಶ್ರೀಮಂತರು ಎನ್ನದೆ, ನಿರಂತರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಸಣ್ಣ ಪುಟ್ಟ ಜಿಲ್ಲೆಗಳಿಗೆ ಮಂತ್ರಿಗಳನ್ನು ಮಾಡುವ ಸರ್ಕಾರ ಬೆಳಗಾವಿಗೆ ಕನಿಷ್ಠ ನಾಲ್ಕೈದು ಜನರನ್ನಾದರು ಮಂತ್ರಿಗಳನ್ನಾಗಿ ಮಾಡಬೇಕು. ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ, ನೂತನ ಕ್ಯಾಬಿನೆಟ್ ಸಭೆಯಲ್ಲಿ ಶಾಸಕ ಆಸೀಫ್ ಸೇಠ್ ಅವರನ್ನು ಮಂತ್ರಿಯನ್ನಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಒಂದು ವೇಳೆ ಬೆಳಗಾವಿ ನಗರದಿಂದ ಶಾಸಕ ಆಸೀಫ್ ಸೇಠ್ ಅವರನ್ನು ಮಂತ್ರಿ ಮಾಡಲಿಲ್ಲ ಅಂದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.ಈ ವೇಳೆ ಸಿದ್ದರಾಯ್ ಮೇತ್ರಿ, ಪಿಂಟು ಗುಂಡಣ್ಣವರ್, ಲತಾ ಮಾನೆ, ಪರಶುರಾಮ ಮುಕನವರ ಸೇರಿದಂತೆ ದಲಿತ ಕಾಂಗ್ರೆಸ್ ದಾಧಿಕಾರಿಗಳು, ಮುಖಂಡರು, ಮಹಿಳಾ ಪದಾಧಿಕಾರಿಗಳು, ಕಾರ್ಯರ್ತರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.