- ತರೀಕೆರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಪತ್ರಿಕಾ ಗೋಷ್ಠಿ
ಕನ್ನಡಪ್ರಭ ವಾರ್ತೆ, ತರೀಕೆರೆನಮ್ಮ ಚಿಕ್ಕಮಗಳೂರು ಜಿಲ್ಲೆಗೆ 32 ವರ್ಷಗಳಿಂದ ಮಂತ್ರಿ ಸ್ಥಾನ ಕೊಟ್ಟಿಲ್ಲ. ತರೀಕೆರೆ ಕ್ಷೇತ್ರ ಶಾಸಕ ಜಿ.ಎಚ್.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಅವರು ಇಡೀ ಚಿಕ್ಕಮಗಳೂರು ಜಿಲ್ಲೆಯನ್ನೇ ಮಾದರಿ ಜಿಲ್ಲೆಯನ್ನಾಗಿ ಅಭಿವೃದ್ಧಿ ಪಡಿಸುತ್ತಾರೆ ಎಂದು ಮಾಜಿ ಪುರಸಭಾಧ್ಯಕ್ಷೆ, ವಕೀಲರು ಮತ್ತು ತರೀಕೆರೆ ಮಹಿಳಾ ಬ್ಲಾಕ್ ಕಾಂಗ್ರಸ್ ಸಮಿತಿ ಅಧ್ಯಕ್ಷೆ ಪರ್ವಿನ್ ತಾಜ್ ಹೇಳಿದರು.ಭಾನುವಾರ ಪಟ್ಟಣದಲ್ಲಿ ತರೀಕೆರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಶಾಸಕ ಜಿ.ಎಚ್.ಶ್ರೀನಿವಾಸ್ ಪುರಸಭೆ ಅಧ್ಯಕ್ಷರಾಗಿ, ಶಾಸಕರಾಗಿ ಜನರ ಸಮಸ್ಯೆಗಳನ್ನು ಬಹಳ ಹತ್ತಿರದಲ್ಲಿ ಬಲ್ಲವರು. ಈ ಹಿಂದಿನ ಅವಧಿಯಲ್ಲಿ ಅತ್ಯಂತ ಹೆಚ್ಚಿನ ಅನುದಾನ ತಂದು ಕ್ಷೇತ್ರದಾದ್ಯಂತ ಅತಿ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದಾರೆ. ರಸ್ತೆಗಳನ್ನು ಅಭಿವೃದ್ಧಿ ಪಡಿಸಿ ರಸ್ತೆ ರಾಜ ಮತ್ತು ನೀರಾವರಿ ಯೋಜನೆ ತಂದು ಅಧುನಿಕ ಭಗೀರಥ ಎಂದು ಹೆಸರುಗಳಿಸಿದ್ದಾರೆ. ಅವರಿಗೆ ಅಭಿವೃದ್ಧಿ ತುಡಿತ ಇದೆ. 94-ಸಿ, ಕಂದಾಯ ಮತ್ತು ಉಪ ಕಂದಾಯ ಗ್ರಾಮಗಳನ್ನಾಗಿಸುವ ವಿಚಾರ ಕುರಿತು ಶಾಸಕ ಶ್ರೀನಿವಾಸ್ ವಿಧಾನ ಸಭೆಯಲ್ಲಿ ಚರ್ಚಿಸಿದ್ದರಿಂದ ಇಡೀ ರಾಜ್ಯದ ಜನತೆಗೆ ಅನುಕೂಲವಾಗಿದೆ. ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಪ್ರಯತ್ನದಿಂದ ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಶಾಸಕ ಜಿ.ಎಚ್.ಶ್ರೀನಿವಾಸ್ ಗೆ ಸಚಿವ ಸ್ಥಾನ ಕೊಡಬೇಕು ಎಂದು ಮನವಿ ಮಾಡಿದರು.ಅಜ್ಜಂಪುರ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ರಂಜಿತಾ ಮಾತನಾಡಿ ಅಜ್ಜಂಪುರವನ್ನು ಹೊಸ ತಾಲೂಕನ್ನಾಗಿ ಘೋಷಿಸಿದ್ದಾರೆ. ಅಜ್ಜಂಪುರದಲ್ಲಿ ಒಂದೇ ಸೂರಿನಡಿ ಎಲ್ಲ ಕಚೇರಿಗಳು ಇರಬೇಕೆಂಬ ಆಶಯದಿಂದ ನೂತನ ಕಟ್ಟಡ ನಿರ್ಮಿಸಲು ಶಂಕುಸ್ಥಾಪನೆ ನೆರವೇರುತ್ತದೆ. ಶಾಸಕ ಶ್ರೀನಿವಾಸ್ ತುಂಬಾ ಸರಳ ವ್ಯಕ್ತಿ, ತಾಯಿ ಮಗು ಆಸ್ಪತ್ರೆ ನಿರ್ಮಿಸಿದ್ದಾರೆ ಎಂದು ಹೇಳಿದರು.ಪುರಸಭೆ ಸದಸ್ಯೆ ದಿವ್ಯ ಮಾತನಾಡಿ ಶಾಸಕ ಜಿ.ಎಚ್.ಶ್ರೀನಿವಾಸ್ ನಾಯಕರಾಗಿ ಅಭಿವೃದ್ದಿಯಲ್ಲಿ ಜಿಲ್ಲೆಯಲ್ಲೇ ಮುಂದಿದ್ದಾರೆ, ಬಿ.ಎಚ್. ರಸ್ತೆ, ನೂತನ ಪುರಸಭಾ ಕಚೇರಿ ಕಟ್ಟಡ, ಪಟ್ಟಣದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಟ್ಯಾಂಡ್ ನಿರ್ಮಾಣ ಕಾರ್ಯಗಳಿಂದ ತರೀಕೆರೆಯನ್ನು ಸುಂದರವಾಗಿಸಿದ್ದಾರೆ ಎಂದು ಹೇಳಿದರು.
ತರೀಕೆರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಲಕ್ಷ್ಮೀಬಾಯಿ, ಲಕ್ಕವಳ್ಳಿ ಹೋಬಳಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ, ಅಸ್ಮಾ ಬಾನು, ಆಶಾ, ಅಲಮೇಲು, ಸಾಕಿಬಾಯಿ, ಶಕುಂತಲಾ, ದೇವಿ ಮತ್ತಿತರರು ಭಾಗವಹಿಸಿದ್ದರು.-23ಕೆಟಿಆರ್.ಕೆ.4ಃ
ತರೀಕೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತರೀಕೆರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪರ್ವಿುನ್ ತಾಜ್ ಮಾತನಾಡಿದರು. ಅ್ಜಜಂಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಚಿತ, ಪುರಸಭೆ ಸದಸ್ಯೆ ದಿವ್ಯ ಮತ್ತಿತರರು ಇದ್ದರು.