ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿಸಿ

KannadaprabhaNewsNetwork |  
Published : Feb 27, 2024, 01:30 AM IST
ಹುನಗುಂದ ಪಟ್ಟಣದ ಗುರು ಭವನದಲ್ಲಿ ನದಾಫ್/ಪಿಂಜಾರ್ ಸಂಘದ ತಾಲೂಕಾ ಘಟಕದಿಂದ 2024 -2029ರ ಅವಧಿಗೆ ನೂತನ ಆಯ್ಕೆಯಾದ ಪದಾಧಿಕಾರಿಗಳಗೆ ಪದಗ್ರಹಣ ಕಾರ್ಯಕ್ರಮವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ದಾವಲಸಾಬ ಎಮ್. ನಾದಾಫ್ , ಎಲ್.ಎನ್.ನದಾಫ್ ಇದ್ದರು. | Kannada Prabha

ಸಾರಾಂಶ

ಹುನಗುಂದ: ತಂದೆ-ತಾಯಿಗಳು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಉತ್ತಮ ಶಿಕ್ಷಣವಂತರಾಗಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಡಾ.ವಿಜಯಾನಂದ ಎಸ್. ಕಾಶಪ್ಪನವರ ಹೇಳಿದರು.

ಕನ್ನಡಪ್ರಭ ವಾರ್ತೆ ಹುನಗುಂದ

ತಂದೆ-ತಾಯಿಗಳು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಉತ್ತಮ ಶಿಕ್ಷಣವಂತರಾಗಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಡಾ.ವಿಜಯಾನಂದ ಎಸ್. ಕಾಶಪ್ಪನವರ ಹೇಳಿದರು.

ಪಟ್ಟಣದ ಅಮರಾವತಿ ರಸ್ತೆಯ ಗುರು ಭವನದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ್ ಸಂಘ ಶಿವಮೊಗ್ಗ, ಹುನಗುಂದ ತಾಲೂಕಾ ಘಟಕ ಹುನಗುಂದ 2024 -2029ರ ಅವಧಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಜನರು ಧಾರ್ಮಿಕ, ಆರ್ಥಿಕ, ಸಾಮಾಜಿಕ ,ಶೈಕ್ಷಣಿಕವಾಗಿ ಸಮಾಜವು ಮುಂದೆ ಬರಬೇಕು. ಇಂದಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಗುರುತಿಸಿಕೊಂಡರೆ ಮಾತ್ರ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಸಿಗಲಿದೆ.ಇದರಿಂದ ಸಮಾಜವು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಿಳಿಸಿದರು.

ನದಾಫ್/ಪಿಂಜಾರ್ ಸಮಾಜಕ್ಕೆ ಸಂಘಟನೆ ಕಾರ್ಯಕ್ರಮಕ್ಕೆ ಪುರಸಭೆ ವ್ಯಾಪ್ತಿಯಲ್ಲಿ ಜಾಗ ಗುರುತಿಸಿ ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದಲ್ಲಿ ₹ 10 ಲಕ್ಷ ಅನುದಾನ ನೀಡುತ್ತೇನೆ. ಅಲ್ಪಸಂಖ್ಯಾತ ನಿಗಮದ ಸಚಿವರಿಂದ ಹೆಚ್ಚಿನ ಅನುದಾನ ತರುತ್ತೇನೆ. ಸಮಾಜದ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಹಣ ನೀಡುವ ಭರವಸೆ ನೀಡಿದರು.

ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ರಿಯಾನುಬಾನು ನದಾಫ್ ಮಾತನಾಡಿ, ರಾಜ್ಯದಲ್ಲಿ ನದಾಫ್‌ ಮತ್ತು ಪಿಂಜಾರ ಸಮಾಜ ₹ 33 ಲಕ್ಷ ಜನಸಂಖ್ಯೆ ಹೊಂದಿದ್ದು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪೂರ್ಣ ಪ್ರಮಾಣದಲ್ಲಿ ಸೌಲಭ್ಯ ಸಿಗುತ್ತಿಲ್ಲ. ಕಳೆದ ಬಿಜೆಪಿ ಸರ್ಕಾರದಲ್ಲಿ ಜಾರಿಯಾದ ಪಿಂಜಾರ ಅಭಿವೃದ್ಧಿ ಸ್ಥಾಪಿಸಿ ನಿಗಮಕ್ಕೆ ಕೂಡಲೇ ಅನುದಾನ ನೀಡುವಂತೆ ಶಾಸಕರಿಗೆ ಒತ್ತಾಯಿಸಿದರು.

ನದಾಫ್/ಪಿಂಜಾರ್ ಸಂಘದ ತಾಲೂಕು ಘಟಕದ ಅಧ್ಯಕ್ಷ ದಾವಲಸಾಬ ಎಂ.ನಾದಾಫ್, ಎಲ್.ಎನ್. ನದಾಫ್, ದಾವಲಸಾಬ ನದಾಫ್, ಮೆಹಬೂಬ ಪಿಂಜಾರ, ಸೈಯದ್ ಸದಾಫ್, ಅಲ್ಲಿಸಾಬ ನದಾಫ್, ಖಾಜಾಬಿ ನದಾಫ, ಮಹಮ್ಮದ ಫಾರೂಕ್‌ ಯತ್ನಟ್ಟಿ, ಫಕೀರಸಾಬ್ ಪಿಂಜಾರ, ಸೇರಿದಂತೆ ಇತರರು ಇದ್ದರು.

PREV

Recommended Stories

ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಬೆಂಗಳೂರಲ್ಲಿ ಭರ್ಜರಿ ಮಳೆಗೆ ವಾಹನ ಸವಾರರ ಪರದಾಟ