ಧಾರ್ಮಿಕ ಆಚರಣೆಗಳಿಗೆ ಮಹತ್ವ ಕೊಡಿ: ಎಂಟಿಬಿ ನಾಗರಾಜ್‌

KannadaprabhaNewsNetwork |  
Published : Dec 21, 2023, 01:15 AM IST
ಫೋಟೋ: 20 ಹೆಚ್‌ಎಸ್‌ಕೆ 3 ಮತ್ತು 43: ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದಲ್ಲಿ ನಡೆದ ಗ್ರಾಮದೇವತೆ ಉತ್ಸವಕ್ಕೆ ಆಗಮಿಸಿದ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರನ್ನು ಚಿಕ್ಕಹುಲ್ಲೂರು ಗ್ರಾಮಸ್ಥರು ಸನ್ಮಾನಿಸಿ ಗೌರವ ಸಮರ್ಪಣೆ ಮಾಡಿದರು. | Kannada Prabha

ಸಾರಾಂಶ

ಹೊಸಕೋಟೆ: ಪೂರ್ವಿಕರು ಆಚರಣೆ ಮಾಡಿಕೊಂಡು ಬಂದಿರುವ ಧಾರ್ಮಿಕ ಆಚರಣೆಗಳನ್ನು ಇಂದಿನ ಯುವ ಪೀಳಿಗೆ ಮುಂದುವರೆಸಿಕೊಂಡು ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.

ಹೊಸಕೋಟೆ: ಪೂರ್ವಿಕರು ಆಚರಣೆ ಮಾಡಿಕೊಂಡು ಬಂದಿರುವ ಧಾರ್ಮಿಕ ಆಚರಣೆಗಳನ್ನು ಇಂದಿನ ಯುವ ಪೀಳಿಗೆ ಮುಂದುವರೆಸಿಕೊಂಡು ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.

ತಾಲೂಕಿನ ಚೊಕ್ಕಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕಹುಲ್ಲೂರು ಗ್ರಾಮದಲ್ಲಿ ನಡೆದ ಗಂಗಮ್ಮ, ಸಫಲಮ್ಮ ದೇವಿ ಸೇರಿದಂತೆ ಗ್ರಾಮದೇವತೆಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮಗಳಲ್ಲಿ ಧಾರ್ಮಿಕ ಆಚರಣೆ ಜನರ ಸಾಮರಸ್ಯ ಜೀವನಕ್ಕೆ ಸಾಕ್ಷಿಯಾಗಲಿದೆ. ಪರಸ್ಪರ ದ್ವೇಷ, ಅಸೂಯೆ ತೊರೆದು ಪಾರಂಪರಿಕ ಆಚರಣೆಗಳಿಗೆ ಮನ್ನಣೆ ಕೊಡುವುದರಿಂದ ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯವಾಗಲಿದೆ. ಚಿಕ್ಕಹುಲ್ಲೂರು ಗ್ರಾಮದಲ್ಲಿ ರಾಜಕೀಯವಾಗಿ ಎಷ್ಟೇ ಪೈಪೋಟಿ ಇದ್ದರೂ ಹಬ್ಬ ಆಚರಣೆಗಳಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದರು.

ಬರಗಾಲ ದೂರವಾಗಲಿ: ಪ್ರಸ್ತುತ ಹೊಸಕೋಟೆ ತಾಲೂಕು ಸೇರಿದಂತೆ ರಾಜ್ಯದ 200ಕ್ಕೂ ಅಧಿಕ ತಾಲೂಕುಗಳು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ನಡುವೆ ಬರಗಾಲ ದೂರ ಮಾಡಲು ಯಾವುದೇ ಮನುಷ್ಯನಿಂದ ಸಾಧ್ಯವಿಲ್ಲ. ಆದ್ದರಿಂದ ಭಗವಂತನ ಅನುಗ್ರಹ ನಿಶ್ಚಿತವಾಗಿ ಬೇಕಾಗಿದ್ದು, ಸಕಾಲಕ್ಕೆ ಮಳೆ ಬೆಳೆಯಾಗಿ ಬರಗಾಲ ದೂರವಾಗಲಿ ಎಂದು ದೇವರಲ್ಲಿ ಪ್ರತಿಯೊಬ್ಬರು ಪ್ರಾರ್ಥಿಸೋಣ ಎಂದು ಎಂಟಿಬಿ ನಾಗರಾಜ್ ತಿಳಿಸಿದರು.

ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಹುಲ್ಲೂರು ಸಿ.ಮಂಜುನಾಥ್ ಮಾತನಾಡಿ, ಸತ್ಯಮ್ಮ, ಸಫಲಮ್ಮ, ಗಂಗಮ್ಮ, ಕರಗದಮ್ಮ, ಮುನೇಶ್ವರಸ್ವಾಮಿ ದೇವರು, ಗ್ರಾಮಸ್ಥರ ಕಷ್ಟ ನಿವಾರಣೆಯ ಆರಾಧ್ಯ ದೈವವಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಗ್ರಾಮಸ್ಥರು ಒಗ್ಗೂಡಿ ಲೋಕದ ಒಳಿತಿಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸುವ ಮೂಲಕ ಸಾಮರಸ್ಯದಿಂದ ಹಬ್ಬವನ್ನು ಆಚರಿಸಿದ್ದೇವೆ. ಈ ಮೂಲಕ ಭಗವಂತ ಜಗತ್ತಿನ ಸಕಲ ಜೀವರಾಶಿಗಳಿಗೆ ಒಳಿತನ್ನು ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್ ಸೇರಿದಂತೆ ಚಿಕ್ಕಹುಲ್ಲೂರು ಗ್ರಾಮಸ್ಥರು ಭಾಗವಹಿಸಿದ್ದರು.

ಬಾಕ್ಸ್ ..........ಕೊರೋನಾ ಆತಂಕ ಬೇಡ ಎಚ್ಚರಿಕೆ ಇರಲಿ

ಕೊರೋನಾ ವೈರಸ್ ರೂಪಾಂತರಿ ತಳಿ ಮತ್ತೆ ಹೆಚ್ಚುತ್ತಿರುವ ಪ್ರಕರಣಗಳು ಕಂಡು ಬರುತ್ತಿದೆ. ಪ್ರತಿಯೊಬ್ಬರು ಲಸಿಕೆ ಪಡೆದುಕೊಂಡಿರುವ ಹಿನ್ನೆಲೆ ಹಾಗೂ ವೈರಸ್‌ನ ವಿರುದ್ಧ ಹೋರಾಡಲು ಈ ಹಿಂದೆ ರೂಢಿಸಿಕೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದರಿಂದ ಯಾರು ಆತಂಕ ಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟವರು ಸೋಂಕಿನಿಂದ ರಕ್ಷಿಸಿಕೊಳ್ಳುವುದು ಕೂಡ ಅತ್ಯಗತ್ಯ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಹಾಗೂ ಕೈ ತೊಳೆಯುವುದನ್ನು ರೂಢಿಸಿಕೊಳ್ಳಿ. ಈ ನಿಟ್ಟಿನಲ್ಲಿ ಸಾರ್ವಜನಿಕರ ಜವಾಬ್ದಾರಿ ಅಗತ್ಯ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.ಫೋಟೋ: 20 ಹೆಚ್‌ಎಸ್‌ಕೆ 3

ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದಲ್ಲಿ ನಡೆದ ಗ್ರಾಮದೇವತೆ ಉತ್ಸವಕ್ಕೆ ಆಗಮಿಸಿದ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರನ್ನು ಚಿಕ್ಕಹುಲ್ಲೂರು ಗ್ರಾಮಸ್ಥರು ಸನ್ಮಾನಿಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ