ಕ್ರೀಡೆಗೂ ಮಹತ್ವ ನೀಡಿ ಭವಿಷ್ಯ ರೂಪಿಸಿಕೊಳ್ಳಿ

KannadaprabhaNewsNetwork |  
Published : Aug 30, 2024, 02:01 AM IST
ಅಂತರ್ ಶಾಲಾ ಹಾಗೂ ಕಾಲೇಜುಗಳ ಕ್ರೀಡಾ ಕೂಟಕ್ಕೆ ಡಿಸಿ ಚಾಲನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಸುಂದರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಳ್ಳಬೇಕು. ಈ ಮೂಲಕ ಜೀವನದ ಪ್ರಮುಖ ಘಟ್ಟವಾದ ವಿದ್ಯಾರ್ಥಿ ಜೀವನದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಸುಂದರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಳ್ಳಬೇಕು. ಈ ಮೂಲಕ ಜೀವನದ ಪ್ರಮುಖ ಘಟ್ಟವಾದ ವಿದ್ಯಾರ್ಥಿ ಜೀವನದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ನೀಡಿದರು.

ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ತಿಕೋಟ ತಾಲೂಕಿನ ಅರಕೇರಿಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಅಂತರ್ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನೆರಳು ನಮ್ಮನ್ನು ಹಿಂಬಾಲಿಸಿದಂತೆ ನಮ್ಮ ಸಾಧನೆಗಳು ನಮ್ಮನ್ನು ಹಿಂಬಾಲಿಸುತ್ತವೆ. ಮೇಜರ್ ದ್ಯಾನ ಚಂದ್‌ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಅವರು ಹಾಕಿಯಲ್ಲಿ ತಮ್ಮದೆಯಾದ ಛಾಪು ಮೂಡಿಸಿ, ಹಾಕಿ ಮಾಂತ್ರಿಕರಾಗಿದ್ದರು. ಇಂದು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಸಾಧನೆ ಅವಲೋಕಿಸಿ, ಅವರ ಸತತ ಶ್ರಮ ಕಠಿಣ ಅಭ್ಯಾಸಗಳಿಂದ ಮಾಡಿರುವ ಅವರ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೆರೆಣೆಯಾಗಿ ಪಡೆದು, ಸಾಧನೆ ಪಥದಲ್ಲಿ ಸಾಗಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದು ಆಶಿಸಿದರು.

ಈ ವಸತಿ ಶಾಲೆ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿದ್ದು, ಅವರ ಜೀವನ ಚರಿತ್ರೆ ಅಧ್ಯಯನ ಮಾಡುವ ಮೂಲಕ ಅವರ ಸಾಧನೆಗಳನ್ನು ತಿಳಿದುಕೊಳ್ಳಬೇಕು. ಸಾಧಕರು ನಮಗೆ ಯಾವಾಗಲೂ ಪ್ರೇರಣೆಯಾಗಿರುತ್ತಾರೆ. ಶಾಲಾ ಜೀವನದ ಸಂದರ್ಭ ನೆನಪಿಸಿಕೊಂಡ ಜಿಲ್ಲಾಧಿಕಾರಿಗಳು ಇಂತಹ ಮಹಾನ್ ವ್ಯಕ್ತಿಗಳನ್ನು ಎರಡು ಬಾರಿ ಭೇಟಿಯಾಗಲು ದೊರೆತ ಅವಕಾಶಕ್ಕೆ ಹರ್ಷ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೈಯ್ಯಲು ಹಲವು ಅವಕಾಶ ಒದಗಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಐ.ಆರ್‌.ಬಿ ಕಮಾಂಡೆಂಟ್ ನಂದಕುಮಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ವಸತಿ ಶಾಲೆ ಪ್ರಾಂಶುಪಾಲೆ ರೇಖಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!