ದೇವರಹಿಪ್ಪರಗಿಗೆ ಮೌಲಾನಾ ಆಜಾದ್ ಆಂಗ್ಲ ಶಾಲೆ ನೀಡಿ

KannadaprabhaNewsNetwork | Published : Oct 23, 2024 12:31 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸುವಂತೆ ಆಗ್ರಹಿಸಿ ಕೆಆರ್.ಎಸ್ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ರಾಜ್ಯದ್ಯಂತ ೨೦೦ ಮೌಲಾನಾ ಆಜಾದ್ ಮಾದರಿಯಲ್ಲಿ ತೆರೆಯಲಾಗಿತ್ತು.

ಕನ್ನಡಪ್ರಭ ವಾರ್ತೆ ವಿಜಯಪುರ

ದೇವರಹಿಪ್ಪರಗಿ ಕ್ಷೇತ್ರದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸುವಂತೆ ಆಗ್ರಹಿಸಿ ಕೆಆರ್.ಎಸ್ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ರಾಜ್ಯದ್ಯಂತ ೨೦೦ ಮೌಲಾನಾ ಆಜಾದ್ ಮಾದರಿಯಲ್ಲಿ ತೆರೆಯಲಾಗಿತ್ತು. ಅದರಲ್ಲಿ ಒಂದು ಶಾಲೆಯು ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಮಂಜೂರು ಮಾಡಲಾಗಿತ್ತು. ಅಧಿಕಾರಿಗಳ ನಿರ್ಲಕ್ಷದಿಂದ ಚುನಾಯಿತ ಪ್ರತಿನಿಧಿಗಳ ಮುಂತಾದ ಕಾರಣಗಳಿಂದ ಮಂಜೂರಾಗಿರುವ ಆಂಗ್ಲ ಮಾಧ್ಯಮ ಮೌಲಾನ ಅಜಾದ್ ಶಾಲೆಯನ್ನು ರದ್ದುಪಡಿಸಿ, ದೇವರಹಿಪ್ಪರಗಿಯ ಮತಕ್ಷೇತ್ರದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಸರ್ಕಾರ ಅನ್ಯಾಯವೆಸಗಿದೆ ಎಂದು ಆರೋಪಿಸಿದರು.

ಈ ಮತಕ್ಷೇತ್ರದಲ್ಲಿ ಜೆಡಿಎಸ್ ಚುನಾಯಿತ ಶಾಸಕರೇ ಇರುವುದರಿಂದಾಗಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ತಾಲೂಕಿಗೆ ಬಂದಿರುವ ಮೌಲಾನ ಆಜಾದ್ ಮಾದರಿ ಶಾಲೆಯನ್ನು ಬೇರೆ ಕಡೆಗೆ ಮಂಜೂರಾತಿ ಪಡದಿರುವುದನ್ನು ಕೆ.ಆರ್.ಎಸ್ ಪಕ್ಷವು ಖಂಡಿಸುತ್ತದೆ. ಮತ ಕ್ಷೇತ್ರದಲ್ಲಿ ೪೦ ಸಾವಿರಕಿಂತಲೂ ಹೆಚ್ಚು ಅಲ್ಪಸಂಖ್ಯಾತ ಮತದಾರರಿದ್ದು, ಅದರಲ್ಲೂ ಬಡತನದಲ್ಲಿ ಜೀವನ ಸಾಗಿಸುವ ಕುಟುಂಬಗಳ ಸಂಖ್ಯೆ ಹೆಚ್ಚಾಗಿದೆ. ಅವರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಲವು ದಶಕಗಳಿಂದ ವಂಚಿತರಾಗಿದ್ದಾರೆ ಎಂದು ದೂರಿದರು.ಬಡ ಕುಟುಂಬಗಳ ಮಕ್ಕಳು ಉಚಿತವಾಗಿ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದು, ನಾಡಿನ ಮತ್ತು ದೇಶದ ಸಂಪನ್ಮೂಲ ನಾಗರಿಕರಾಗುವುದನ್ನು ತಪ್ಪಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕೆ.ಆರ್.ಎಸ್. ಪಕ್ಷವು ಖಂಡಿಸುತ್ತದೆ. ಈ ಕೂಡಲೇ ರಾಜ್ಯ ಸರ್ಕಾರ ಶಾಲೆಯನ್ನು ಮಂಜೂರು ಮಾಡಿ ಬಡ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.ಒಂದು ವೇಳೆ ಮಂಜೂರಾತಿ ಮಾಡದೆ ಹೋದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಧರಣಿ, ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ಹಮೀದ್ ಅಬ್ದುಲ್ ಇನಾಮದಾರ, ದುರ್ಗಪ್ಪ ಬೂದಿಹಾಳ, ಶೀನು ಹಿಪ್ಪರಗಿ, ರಾಕೇಶ ಇಂಗಳಗಿ, ಪ್ರವೀಣ ಕನಸೇ, ಸುರೇಂದ್ರ ಕುನಸಲೇ, ಭೀಮಾಶಂಕರ ಕಾಂಬಳೆ ಮುಂತಾದವರು ಇದ್ದರು.

Share this article