ಹಾಲು ವ್ಯರ್ಥ ಮಾಡದೆ ಮಕ್ಕಳಿಗೆ, ರೋಗಿಗಳಿಗೆ ನೀಡಿ: ಮುರುಘರಾಜೇಂದ್ರ ಸ್ವಾಮೀಜಿ

KannadaprabhaNewsNetwork |  
Published : Aug 11, 2024, 01:30 AM IST
ಗೋಕಾಕದ ಸರ್ಕಾರಿ ಆಸ್ಪತ್ರೆಯಲ್ಲಿ ಬಸವ ಪಂಚಮಿ ನಿಮಿತ್ತ ರೋಗಿಗಳಿಗೆ ಹಾಲು ವಿತರಿಸಲಾಯಿತು. | Kannada Prabha

ಸಾರಾಂಶ

ಪೌಷ್ಟಿಕ ಆಹಾರವಾದ ಹಾಲನ್ನು ವ್ಯರ್ಥ ಮಾಡದೆ ಮಕ್ಕಳಿಗೆ, ರೋಗಿಗಳಿಗೆ ನೀಡುವ ಮೂಲಕ ಬಸವ ಪಂಚಮಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಇಲ್ಲಿನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಪೌಷ್ಟಿಕ ಆಹಾರವಾದ ಹಾಲನ್ನು ವ್ಯರ್ಥ ಮಾಡದೆ ಮಕ್ಕಳಿಗೆ, ರೋಗಿಗಳಿಗೆ ನೀಡುವ ಮೂಲಕ ಬಸವ ಪಂಚಮಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಇಲ್ಲಿನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಗುರುವಾರ ನಗರದ ಸರಕಾರಿ ಆಸ್ಪತ್ರೆಯಲ್ಲಿ ಬಸವ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ, ವಚನ ಸಾಹಿತ್ಯ ಚಿಂತನ, ಮಂಥನ ವೇದಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಬಸವ ಪಂಚಮಿ ನಿಮಿತ್ತ ರೋಗಿಗಳಿಗೆ ಹಾಲು ವಿತರಿಸಿ ಅವರು ಮತನಾಡಿದರು.

ಹಲವು ವರ್ಷಗಳಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಲಾಗುತ್ತಿದ್ದು, ಜನರು ಲಕ್ಷಾಂತರ ಲೀಟರ್ ಹಾಲು, ತುಪ್ಪ, ಹಣ್ಣನ್ನು ಹುತ್ತ, ನಾಗರ ಕಲ್ಲುಗಳ ಮೇಲೆ ಸುರಿಯುತ್ತಾರೆ. ಹಾವು ಹಾಲು ಕುಡಿಯುವುದಿಲ್ಲ ಎಂದು ವೈಜ್ಞಾನಿಕವಾಗಿ ಸಾಬೀತಾದರೂ ಜನರು ಮೌಢ್ಯ ಅನುಸರಿಸುತ್ತಿದ್ದಾರೆ. ಜನತೆ ಮೂಢನಂಬಿಕೆಗಳಿಂದ ಹೊರಬಂದು ನಿಜವಾದ ಸಂಪ್ರದಾಯ ಆಚರಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಬ್ರಹ್ಮಾನಂದ ಸ್ವಾಮೀಜಿ, ಡಾ.ರವೀಂದ್ರ ಅಂಟಿನ, ಬಸನಗೌಡ ಪಾಟೀಲ, ಬಸವರಾಜ ಖಾನಪ್ಪನವರ, ಶೈಲಾ ಬೀದರಿ, ಎಸ್.ಕೆ. ಮಠದ, ಬಸವರಾಜ ಹತ್ತರಕಿ, ಮಹಾಲಿಂಗಪ್ಪ ನೇಗಿನಾಳ, ಕಾಳಪ್ಪ ಗುರಾಣಿ, ಶ್ರೀಕಾಂತ ಹಳ್ಳೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ’ ಎಂದ ಮರುದಿನವೇ ಸ್ಪಷ್ಟನೆ
ಬ್ರಾಂಡ್‌ ಬೆಂಗ್ಳೂರಿನ 4 ಯೋಜನೆಗಳ ಉದ್ಘಾಟಿಸಿದ ಡಿ.ಕೆ.ಶಿವಕುಮಾರ್