- ಹೊನ್ನಾಳಿ ತಾಲೂಕು ಕುರುಬ ಸಮಾಜ ಮುಖಂಡರ ಒತ್ತಾಯ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಅವುಗಳ ಪೈಕಿ 5 ಸ್ಥಾನಗಳಿಗೆ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಎಚ್.ಬಿ. ಮಂಜಪ್ಪ ಅವರ ಸೇವೆ ಮತ್ತು ಹಿರಿತನವನ್ನು ಪರಿಗಣಿಸಿ ಎಂಎಲ್‍ಸಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಎಚ್.ಬಿ. ಮಂಜಪ್ಪ 30 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಪ.ಪಂ. ಅಧ್ಯಕ್ಷ, ತಾ.ಪಂ. ಅಧ್ಯಕ್ಷ, ಜಿ.ಪಂ. ಅಧ್ಯಕ್ಷರಾಗಿ ದುಡಿದಿದ್ದಾರೆ. ಜೊತೆಗೆ ಪತ್ನಿಯನ್ನು ಜಿ.ಪಂ. ಸದಸ್ಯರನ್ನಾಗಿ ಮಾಡಿದ ರಾಜಕಾರಣಿ. ಪಕ್ಷದಲ್ಲಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ, ತಾಲೂಕು ಕಾಂಗ್ರೆಸ್ ಅಧ್ಯಕ್ಷ, ಇದೀಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅವರ ಹೆಸರನ್ನು ಘೋಷಣೆ ಮಾಡಿತ್ತು, ಆದರೆ, ಕೊನೆ ಗಳಿಗೆಯಲ್ಲಿ ಅವರಿಗೆ ಟಿಕೆಟ್ ತಪ್ಪಿಸಲಾಯಿತು. 2018ರ ಚುನಾವಣೆಯಲ್ಲಿ ಮತ್ತು 2024ರ ಚುನಾವಣೆಯಲ್ಲೂ ಅವರ ಹೆಸರು ದೆಹಲಿಮಟ್ಟಕ್ಕೆ ಹೋಗಿಯೂ ಟಿಕೆಟ್ ಕೈ ತಪ್ಪಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಲೋಕಸಭಾ ಚುನಾವಣೆಗೆ ಕೊನೆ ಗಳಿಗೆಯಲ್ಲಿ ಪಕ್ಷ ಎಚ್.ಬಿ. ಮಂಜಪ್ಪ ಅವರಿಗೆ ಟಿಕೆಟ್ ಕೊಟ್ಟಿತ್ತು, ಇಷ್ಟ ಇಲ್ಲದಿದ್ದರೂ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್ ಅವರ ಸೂಚನೆಗೆ ತಲೆಬಾಗಿ ಚುನಾವಣೆ ಎದುರಿಸಿದರು. ಕೇವಲ 20 ದಿನಗಳ ಪ್ರಚಾರದಲ್ಲಿ 4.85 ಲಕ್ಷ ಮತಗಳನ್ನು ಅವರು ಪಡೆದುಕೊಂಡರು ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ನೆಲಹೊನ್ನೆ ಮೋಹನ್, ಅವಳಿ ತಾಲೂಕು ಕುರುಬ ಸಮಾಜದ ಉಪಾಧ್ಯಕ್ಷರಾದ ಎಚ್.ನರಸಪ್ಪ, ಹರಳಹಳ್ಳಿ ಬೆನಕಪ್ಪ, ಕುಂಬಳೂರು ವಾಗೀಶ್, ಬಸವನಹಳ್ಳಿ ಬಸವರಾಜ್, ಎಚ್.ಡಿ. ವಿಜೇಂದ್ರಪ್ಪ, ಕೆ. ಪುಟ್ಟಪ್ಪ, ಖಜಾಂಚಿ ಎಚ್.ಎ. ನರಸಿಂಹಪ್ಪ ಇತರರು ಇದ್ದರು.
- - -